Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಾತಿಗಣತಿ ಮರು ಸಮೀಕ್ಷೆ: ಕಾಂತರಾಜು...

ಜಾತಿಗಣತಿ ಮರು ಸಮೀಕ್ಷೆ: ಕಾಂತರಾಜು ಆಯೋಗದ ವರದಿಗೆ ವ್ಯಯಿಸಿದ 167 ಕೋಟಿ ರೂ.ಗೆ ಹೊಣೆ ಯಾರು?: ಆರ್. ಅಶೋಕ್ ಪ್ರಶ್ನೆ

"ಹೈಕಮಾಂಡ್ ಶಂಖದಿಂದ ಬಂದರೆ ಮಾತ್ರ ತೀರ್ಥವೇ?"

ವಾರ್ತಾಭಾರತಿವಾರ್ತಾಭಾರತಿ11 Jun 2025 11:30 AM IST
share
ಜಾತಿಗಣತಿ ಮರು ಸಮೀಕ್ಷೆ: ಕಾಂತರಾಜು ಆಯೋಗದ ವರದಿಗೆ ವ್ಯಯಿಸಿದ 167 ಕೋಟಿ ರೂ.ಗೆ ಹೊಣೆ ಯಾರು?: ಆರ್. ಅಶೋಕ್ ಪ್ರಶ್ನೆ

ಬೆಂಗಳೂರು: "ಜಾತಿಗಣತಿ ಮರು ಸಮೀಕ್ಷೆಗೆ ಸರಕಾರ ಮುಂದಾಗಿದೆ. ಆದರೆ ಜಾತಿ ಜನಗಣತಿಗಾಗಿ ಈಗಾಗಲೇ ಖರ್ಚಾದ ಈ ಬೃಹತ್ ಮೊತ್ತಕ್ಕೆ ಯಾರು ಹೊಣೆಗಾರರು? ಈ ಹಿಂದೆ ಸಿದ್ಧಪಡಿಸಿದ್ದ ಕಾಂತರಾಜು ಆಯೋಗದ ವರದಿಗೆ ಈಗ ಎಳ್ಳು-ನೀರು ಬಿಟ್ಟಂತಾಗಿದೆ. ಆ ವರದಿಗೆ ತೆರಿಗೆದಾರರ 167 ಕೋಟಿ ರೂ. ವೆಚ್ಚವಾಗಿದೆ. ಈ ಹಣವನ್ನು ಯಾರಿಂದ ವಸೂಲಿ ಮಾಡುತ್ತೀರಿ?" ಎಂದು ವಿಧಾನಸಭಾ ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ತನ್ನ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ವೊಂದರ ಮೂಲಕ ಅಶೋಕ್ ಅವರು ಮುಖ್ಯಮಂತ್ರಿಗೆ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಈ ಹಿಂದೆ ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ ಎಂದು ಸಾರ್ವಜನಿಕರು, ಮಠಾಧೀಶರು, ಸಮುದಾಯಗಳ ಮುಖಂಡರು, ಸ್ವತಃ ಕಾಂಗ್ರೆಸ್ ಪಕ್ಷದ ಅನೇಕ ಸಚಿವರು, ಶಾಸಕರು ವಿರೋಧ ಮಾಡುತ್ತಿದ್ದರೂ, ಅದನ್ನು ಬಲವಾಗಿ ಸಮರ್ಥಿಸಿಕೊಂಡು, ಸಚಿವ ಸಂಪುಟದ ಮುಂದೆ ತರಲು ನೀವು ಇಷ್ಟೆಲ್ಲಾ ಹಠ ಹಿಡಿದಿದ್ದಿರಿ. ಆದರೆ

ನಿಮಗೆ ಹೈಕಮಾಂಡ್ ತಪರಾಕಿ ಹಾಕಿದಾಕ್ಷಣ, ಮರು ಸಮೀಕ್ಷೆ ಮಾಡುವ ತೀರ್ಮಾನಕ್ಕೆ ಒಪ್ಪಿಗೆ ನೀಡಿದ್ದೀರಿ. ಇದರಿಂದ ಒಂದು ವಿಷಯ ಸ್ಪಷ್ಟವಾಗುತ್ತದೆ. ನಿಮಗೆ ರಾಜ್ಯದ ಜನರ ಮೇಲೆ, ಮಠಾಧೀಶರು, ಸಮುದಾಯಗಳ ಮುಖಂಡರ ಮೇಲೆ ವಿಶ್ವಾಸವಿಲ್ಲ. ನೀವು ಏನಿದ್ದರೂ ಹೈಕಮಾಂಡ್ ವಾಕ್ಯ ಪರಿಪಾಲಕ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

*ಸಮೀಕ್ಷೆ ನಡೆಸುವವರು ಯಾರು?

ಸಿಎಂ ಸಿದ್ದರಾಮಯ್ಯನವರು 90 ದಿನಗಳ ಕಾಲಮಿತಿಯಲ್ಲಿ ಸಮೀಕ್ಷೆ ನಡೆಸುವ ಬಗ್ಗೆ ಹಲವು ಗಂಭೀರ ಪ್ರಶ್ನೆಗಳು ಎದುರಾಗಿವೆ. ಪ್ರಸಕ್ತ ಸನ್ನಿವೇಶದಲ್ಲಿ ಈ ಸಮೀಕ್ಷೆ ಹೇಗೆ ಸಾಧ್ಯ ಎಂಬುದು ಜನಸಾಮಾನ್ಯರ ಆತಂಕವಾಗಿದೆ.

ಶಾಲೆಗಳು ಈಗಾಗಲೇ ಆರಂಭವಾಗಿವೆ. ಇಂತಹ ಸಮಯದಲ್ಲಿ ಸಮೀಕ್ಷೆಯಂತಹ ಬೃಹತ್ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿದರೆ, ಶೈಕ್ಷಣಿಕ ಚಟುವಟಿಕೆಗಳು ಸಂಪೂರ್ಣವಾಗಿ ಬುಡಮೇಲಾಗುತ್ತವೆ. ಮಕ್ಕಳ ಭವಿಷ್ಯದ ಮೇಲೆ ಇದು ನೇರ ಪರಿಣಾಮ ಬೀರಲಿದೆ. ಹಾಗಾದರೆ, ಈ 90 ದಿನಗಳಲ್ಲಿ ಸಮೀಕ್ಷೆಯನ್ನು ನಡೆಸಲು ಸರಕಾರ ಯಾರನ್ನು ನಿಯೋಜಿಸಲಿದೆ? ಎಂದು ಪ್ರತಿಪಕ್ಷ ನಾಯಕ ಕೇಳಿದ್ದಾರೆ.

*ಆನ್ಲೈನ್ ಸಮೀಕ್ಷೆ - ಅವಿವೇಕದ ಕ್ರಮವಲ್ಲವೇ?

ಆನ್ಲೈನ್ ಮೂಲಕ ಸಮೀಕ್ಷೆ ನಡೆಸುವ ಚಿಂತನೆ ಮತ್ತೊಂದು ಅವಿವೇಕದ ಕ್ರಮವೆಂದು ತೋರುತ್ತಿದೆ. ಅನೇಕ ಅಕ್ಷರಸ್ಥರೇ ಇಂದಿಗೂ ಆನ್ಲೈನ್ ವ್ಯವಸ್ಥೆಯಿಂದ ದೂರ ಇರುವಾಗ, ಇಂತಹ ಸಮೀಕ್ಷೆ ಹೇಗೆ ಸಾಧ್ಯ? ಇದರಿಂದ ಮಾಹಿತಿಯ ನಿಖರತೆ ಮತ್ತು ಗುರುತುಪತ್ತೆ ಹೇಗೆ ಸಾಧ್ಯವಾಗುತ್ತದೆ? ತಪ್ಪು ದಾಖಲಾತಿಗಳನ್ನು ತಡೆಯಲು ಸರ್ಕಾರ ಏನು ಕ್ರಮ ತೆಗೆದುಕೊಳ್ಳಲಿದೆ? ಎಂದು ಪ್ರಶ್ನಿಸಿದ್ದಾರೆ.

*ತೆರಿಗೆದಾರರ 167 ಕೋಟಿ ರೂ. ದುಂದುವೆಚ್ಚಕ್ಕೆ ಹೊಣೆ ಯಾರು?

ಜಾತಿ ಜನಗಣತಿಗಾಗಿ ಈಗಾಗಲೇ ಖರ್ಚಾದ ಈ ಬೃಹತ್ ಮೊತ್ತಕ್ಕೆ ಯಾರು ಹೊಣೆಗಾರರು? ಈ ಹಿಂದೆ ಸಿದ್ಧಪಡಿಸಿದ್ದ ಕಾಂತರಾಜು-ಜಯಪ್ರಕಾಶ್ ಹೆಗ್ಡೆಯವರ 'ಚೌಚೌ ವರದಿ'ಗೆ ಈಗ ಎಳ್ಳು-ನೀರು ಬಿಟ್ಟಂತಾಗಿದೆ. ಆ ವರದಿಗೆ ತೆರಿಗೆದಾರರ 167 ಕೋಟಿ ರೂ. ವೆಚ್ಚವಾಗಿದೆ. ಈ ಹಣವನ್ನು ಯಾರಿಂದ ವಸೂಲಿ ಮಾಡುತ್ತೀರಿ? ಎಂದು ಆರ್.ಅಶೋಕ್ ಕೇಳಿದ್ದಾರೆ.

*ಐಪಿಎಲ್ ವಿಜಯೋತ್ಸವ ದುರಂತ ಮರೆಮಾಚಲು ಬೃಹತ್ ನಾಟಕವೇ?

ಈ ಎಲ್ಲ ಬೆಳವಣಿಗೆಗಳಿಗಿಂತ ಮಿಗಿಲಾಗಿ, ಮುಖ್ಯಮಂತ್ರಿ ಮತ್ತು ಅವರ ಹೈಕಮಾಂಡ್ ಸೇರಿಕೊಂಡು, ಇತ್ತೀಚಿನ ಐಪಿಎಲ್ ವಿಜಯೋತ್ಸವ ದುರಂತವನ್ನು ಮರೆಮಾಚಲು ಮತ್ತೊಂದು ಬೃಹತ್ ನಾಟಕ ಆರಂಭಿಸಿರುವ ಅನುಮಾನಗಳು ದಟ್ಟವಾಗಿವೆ. ಇದು ನಿಜಕ್ಕೂ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವೇ?

ನಿಮಗೆ ನಿಜಕ್ಕೂ ಬದ್ಧತೆ ಮತ್ತು ಪ್ರಾಮಾಣಿಕತೆ ಇದ್ದರೆ, ಸಮೀಕ್ಷೆ ಹೇಗಿರಬೇಕು ಎಂಬ ಬಗ್ಗೆ ಮೊದಲು ಸಾರ್ವಜನಿಕ ಚರ್ಚೆ ನಡೆಸಿ. ಹಾಗೆಯೇ, ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ, ಎಲ್ಲರ ಅಭಿಪ್ರಾಯಗಳನ್ನು ಆಲಿಸಿ. ಸಮಗ್ರವಾಗಿ ಎಲ್ಲ ಸಿದ್ಧತೆಗಳನ್ನು ಮುಗಿಸಿ, ಈ ಶೈಕ್ಷಣಿಕ ವರ್ಷ ಮುಗಿದ ಬಳಿಕವಷ್ಟೇ ಶಿಕ್ಷಕರನ್ನು ಬಳಸಿಕೊಂಡು ಸಮೀಕ್ಷೆ ನಡೆಸಿ. ಇದು ರಾಜ್ಯದ ಹಿತದೃಷ್ಟಿಯಿಂದ ಅತಿ ಅವಶ್ಯಕ ಎಂದು ಆರ್.ಅಶೋಕ್ ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X