Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕ್ಷೇತ್ರ ಅಭಿವೃದ್ಧಿ ಪಡಿಸಲಾಗದ ...

ಕ್ಷೇತ್ರ ಅಭಿವೃದ್ಧಿ ಪಡಿಸಲಾಗದ ಬೆಂಗಳೂರನ್ನು ಅಭಿವೃದ್ಧಿ ಪಡಿಸುತ್ತಾರೆಯೇ?: ಎಎಪಿ

ವಾರ್ತಾಭಾರತಿವಾರ್ತಾಭಾರತಿ27 Jan 2024 8:58 PM IST
share
ಕ್ಷೇತ್ರ ಅಭಿವೃದ್ಧಿ ಪಡಿಸಲಾಗದ  ಬೆಂಗಳೂರನ್ನು ಅಭಿವೃದ್ಧಿ ಪಡಿಸುತ್ತಾರೆಯೇ?: ಎಎಪಿ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ಅಧ್ಯಕ್ಷ ಸ್ಥಾನಕ್ಕೆ ಶಾಂತಿನಗರ ಶಾಸಕ ಎನ್. ಎ.ಹಾರಿಸ್ ಅವರನ್ನು ನೇಮಕ ಮಾಡಿದ್ದಕ್ಕೆ ಆಮ್ ಆದ್ಮಿ ಪಾರ್ಟಿ ವಿರೋಧ ವ್ಯಕ್ತಪಡಿಸಿದೆ.

ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಪ್ರಕಟನೆ ಹೊರಡಿಸಿದ್ದು, ಹಲವು ವರ್ಷಗಳಿಂದ ಪ್ರತಿನಿಧಿಸುತ್ತ ಬಂದಿರುವ ಸ್ವಂತ ಕ್ಷೇತ್ರ ಶಾಂತಿನಗರವನ್ನೇ ಅಭಿವೃದ್ಧಿ ಪಡಿಸಲಾಗದ ಎನ್. ಎ.ಹಾರಿಸ್ ಅವರ ಕೈಗೆ ಇಡೀ ಬೆಂಗಳೂರು ಅಭಿವೃದ್ಧಿ ಪಡಿಸುವ ಜವಾಬ್ದಾರಿಯನ್ನು ವಹಿಸಿರುವುದು ಪ್ರಶ್ನಾರ್ಹವಾಗಿದೆ. ಬಿಡಿಎ ಅಧ್ಯಕ್ಷರಾಗಲು ಹಾರಿಸ್ ಅವರಿಗಿರುವ ಅರ್ಹತೆಯೇನು? ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಜನಪ್ರತಿನಿಧಿಗಳಿಗೆ ಮಣೆ ಹಾಕುವ ಪದ್ಧತಿ ಬಿಟ್ಟು, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದಾಗ ಬೆಂಗಳೂರು ಅಭಿವೃದ್ಧಿಯತ್ತ ಸಾಗಬಹುದು ಎಂಬ ಭರವಸೆ ವ್ಯಕ್ತವಾಗಿತ್ತು. ಆದರೆ 7 ತಿಂಗಳ ಅವಧಿಯಲ್ಲೇ ಅವರಿಂದ ಅಧಿಕಾರವನ್ನು ಕಸಿದು ಪುನಃ ರಾಜಕಾರಣಿಗಳ ಹೆಗಲಿಗೆ ಏರಿಸಲಾಗುತ್ತಿದೆ. ಇಂತಹ ಬದಲಾವಣೆಗೆ ಎದುರಾದ ಒತ್ತಡವೇನು ಎಂಬುದನ್ನು ಸಿದ್ದರಾಮಯ್ಯನವರು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ನಗರದ ಅತಿದೊಡ್ಡ ಕೊಳಚೆ ಪ್ರದೇಶವೆಂದರೆ ಅದು ಶಾಂತಿನಗರ ಕ್ಷೇತ್ರವಾಗಿದೆ. ಮಿತಿಯೇ ಇಲ್ಲದ ರಾಜಕಾಲುವೆ ಒತ್ತುವರಿ, ಲೆಕ್ಕವಿಲ್ಲದಷ್ಟು ಹೊಂಡ-ಗುಂಡಿಗಳು, ಮ್ಯಾನ್‍ಹೋಲ್ ಹಾಗೂ ಚರಂಡಿಗಳ ತ್ಯಾಜ್ಯ ನೀರೆಲ್ಲ ಮೇಲೆ ಬಂದು ಗಬ್ಬೆದ್ದ ರಸ್ತೆಗಳೇ ತುಂಬಿವೆ. ದಿನಕ್ಕೊಂದು ಬಾರ್, ಪಬ್, ಹುಕ್ಕಾಬಾರ್ ಗಳು ಹುಟ್ಟಿಕೊಂಡ ಈ ಕ್ಷೇತ್ರದಲ್ಲಿ ಸರಕಾರಿ ಶಾಲೆಗಳು, ಆಸ್ಪತ್ರೆಗಳು ಅವ್ಯವಸ್ಥೆಗಳ ಕೂಪವಾಗಿವೆ. ಲೆಕ್ಕವಿಲ್ಲದಷ್ಟು ಅನಧಿಕೃತ ಕಟ್ಟಡಗಳು, ಪಬ್, ಹುಕ್ಕಾಬಾರ್ ಗಳು ತಾಂಡವವಾಡುತ್ತಿವೆ. ಡ್ರಗ್ ಮಾಫಿಯಾಗೆ ಕಡಿವಾಣವೇ ಇಲ್ಲವಾಗಿದೆ. ಒಂದೇ ಒಂದು ಸ್ಲಮ್ ಅಭಿವೃದ್ಧಿ ಪಡಿಸಿರುವ ಉದಾಹರಣೆ ಇದ್ದರೆ ಹೇಳಿ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X