Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಾಹಿತಿ ಎಚ್‌ ಎಸ್ ವೆಂಕಟೇಶಮೂರ್ತಿ ನಿಧನ

ಸಾಹಿತಿ ಎಚ್‌ ಎಸ್ ವೆಂಕಟೇಶಮೂರ್ತಿ ನಿಧನ

ವಾರ್ತಾಭಾರತಿವಾರ್ತಾಭಾರತಿ30 May 2025 8:45 AM IST
share
ಸಾಹಿತಿ ಎಚ್‌ ಎಸ್ ವೆಂಕಟೇಶಮೂರ್ತಿ ನಿಧನ

ಬೆಂಗಳೂರು, ಮೇ 30: ಹಿರಿಯ ಸಾಹಿತಿ, ಖ್ಯಾತ ಕವಿ, ನಾಟಕ ರಚನೆಕಾರರ ಡಾ. ಎಚ್‌. ಎಸ್. ವೆಂಕಟೇಶ ಮೂರ್ತಿ (80) ಅವರು ಶುಕ್ರವಾರ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ, ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ವೆಂಕಟೇಶ ಮೂರ್ತಿ ಅವರು ನಾರಾಯಣ ಭಟ್ ಮತ್ತು ನಾಗರತ್ನಮ್ಮ ದಂಪತಿಯ ಮಗನಾಗಿ 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು.

ಬೆಂಗಳೂರು ವಿಶ್ವ ವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದ ಎಚ್ಎಸ್‌ವಿ ಅವರು ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೈಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಎಚ್ಎಸ್‌ವಿ ಅವರು ಕನ್ನಡ ಸಾಹಿತ್ಯದ ಪ್ರಮುಖ ಕವಿ, ನಾಟಕಕಾರ, ವಿಮರ್ಶಕರಾಗಿಯೂ ಸೇವೆ ಸಲ್ಲಿಸಿದ್ದರು.

'ಕನ್ನಡದಲ್ಲಿ ಕಥನ ಕವನಗಳು' ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದ ಎಚ್ಎಸ್‌ವಿ ಅವರು 100ಕ್ಕೂ ಹೆಚ್ಚು ಕನ್ನಡ ಕೃತಿಗಳನ್ನು ರಚಿಸಿದ್ದಾರೆ. ಅವರ ಪ್ರಮುಖ ಕವನ ಸಂಕಲನಗಳಲ್ಲಿ 'ಪರಿವೃತ್ತ, ಬಾಗಿಲು ಬಡಿವ ಜನಗಳು, ಸೌಗಂಧಿಕ, ಮೂವತ್ತು ಮಳೆಗಾಲ' ಇತ್ಯಾದಿ ಸೇರಿವೆ. 'ಹೆಜ್ಜೆಗಳು, ಒಂದು ಸೈನಿಕ ವೃತ್ತಾಂತ, ಅಗ್ನಿವರ್ಣ' ಮುಂತಾದವು ಅವರ ನಾಟಕಗಳು.

ಎಚ್ಎಸ್‌ವಿ ಅವರು ಕನ್ನಡ ಚಿತ್ರರಂಗಕ್ಕೂ ತಮ್ಮ ಕೊಡುಗೆ ನೀಡಿದ್ದಾರೆ. ಅವರು 'ಚಿನ್ನಾರಿ ಮುತ್ತ, ಕೋಟ್ರೇಶಿ ಕನಸು, ಅಮೆರಿಕಾ ಅಮೆರಿಕಾ, ಮೈತ್ರಿ, ಕಿರಿಕ್ ಪಾರ್ಟಿ' ಮುಂತಾದ ಚಿತ್ರಗಳಿಗೆ ಹಾಡುಗಳು ಮತ್ತು ಸಂಭಾಷಣೆಗಳನ್ನು ರಚಿಸಿದ್ದಾರೆ. ಮುಕ್ತ, ಮಹಾಪರ್ವ' ಸೇರಿದಂತೆ ಇನ್ನಿತರ ಧಾರಾವಾಹಿಗಳಿಗೆ ಶೀರ್ಷಿಕೆ ಹಾಡುಗಳನ್ನು ರಚಿಸಿದ್ದು ಎಲ್ಲರ ಮನೆಮಾತಾಗಿದ್ದಾರೆ.

ಮೃತರಿಗೆ ನಾಲ್ವರು ಪುತ್ರರು, ಪತ್ನಿ ಸಹಿತ ಅಪಾರ ಅಭಿಮಾನಿ ಬಂಧುಗಳನ್ನು ಅಗಲಿದ್ದಾರೆ.

ಸಿದ್ದರಾಮಯ್ಯ ಸಂತಾಪ: ಹಿರಿಯ ಸಾಹಿತಿ ಎಚ್.ಎಸ್. ವೆಂಕಟೇಶ್ ಮೂರ್ತಿಯವರ ನಿಧನ ನೋವುಂಟು ಮಾಡಿದೆ. ಕವಿತೆ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ, ಪ್ರಬಂಧ, ಕಾದಂಬರಿ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತೊಡಗಿಸಿಕೊಂಡು, ಅಪಾರ ಓದುಗ ಬಳಗ ಹೊಂದಿದ್ದ ವಿಶಿಷ್ಟ ಬರಹಗಾರ ವೆಂಕಟೇಶ ಮೂರ್ತಿಯವರ ಅಗಲಿಕೆಯಿಂದ ಸಾರಸ್ವತ ಲೋಕ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಶಿವರಾಜ ತಂಗಡಗಿ ಸಂತಾಪ: ಕನ್ನಡ ಭಾವಗೀತೆಗಳ ಭವ್ಯ ಪರಂಪರೆಯ ಪ್ರತಿನಿಧಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ನಿಧನ ಕನ್ನಡ ಕಾವ್ಯ ಲೋಕಕ್ಕೆ ಅತಿ ದೊಡ್ಡ ಆಘಾತ ತಂದಿದೆ. ಕನ್ನಡ ಸಾಹಿತ್ಯ ಅದರಲ್ಲಿಯೂ ವಿಶೇಷವಾಗಿ ಭಾವಗೀತೆಗಳ ಕ್ಷೇತ್ರಕ್ಕೆ ಅವರು ಕೊಟ್ಟ ಕೊಡುಗೆ ಅದ್ಭುತವಾದದ್ದು. ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ, ಅವರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಪುರುಷೋತ್ತಮ ಬಿಳಿಮಲೆ ನಮನ: ಎಚ್.ಎಸ್.ವೆಂಕಟೇಶಮೂರ್ತಿ ಅಂದರೆ ಕನ್ನಡಿಗರಿಗೆ ಬಹಳ ಪ್ರೀತಿ. ಅವರ ಕವಿತೆಗಳೆಲ್ಲ ಹಾಡುಗಳಾಗಿ ಕನ್ನಡಿಗರ ಮನೆ ಮನೆ ತಲುಪಿದ್ದು ನಮಗೆ ಗೊತ್ತೇ ಇದೆ. ಯಾವುದೇ ಸುಗಮ ಸಂಗೀತ ಕಾರ್ಯಕ್ರಮಗಳಲ್ಲಿ ವೆಂಕಟೇಶಮೂರ್ತಿಯವರ ಕವಿತೆಗಳನ್ನು ಹಾಡದಿದ್ದರೆ ಕಲಾವಿದರಿಗೂ ಸಮಾಧಾನ ಇಲ್ಲ. ಮೂರ್ತಿಯವರು ಒಳ್ಳೆಯ ಭಾಷಣಕಾರರಾಗಿದ್ದರು. ಸ್ನೇಹಕ್ಕೆ ಬಹಳ ಬೆಲೆ ಕೊಡುತ್ತಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಅವರದು. ಕನ್ನಡಿಗರ ಜೀವನೋತ್ಸಾಹವನ್ನು ಹೆಚ್ಚಿಸಿದ ಕವಿ ಎಚ್.ಎಸ್. ವೆಂಕಟೇಶ್ ಮೂರ್ತಿ ಅವರಿಗೆ ಗೌರವಪೂರ್ವಕ ಅಂತಿಮ ನಮನಗಳು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X