Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಭವಿಷ್ಯಕ್ಕೆ ಸಿದ್ದ ನಗರಗಳ ನಿರ್ಮಾಣಕ್ಕೆ...

ಭವಿಷ್ಯಕ್ಕೆ ಸಿದ್ದ ನಗರಗಳ ನಿರ್ಮಾಣಕ್ಕೆ ಸಮಗ್ರ ದೃಷ್ಟಿಕೋನದಿಂದ ನಗರಾಭಿವೃದ್ಧಿ ಅಗತ್ಯ : ಯತೀಂದ್ರ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ9 Sept 2026 4:46 PM IST
share
ಭವಿಷ್ಯಕ್ಕೆ ಸಿದ್ದ ನಗರಗಳ ನಿರ್ಮಾಣಕ್ಕೆ ಸಮಗ್ರ ದೃಷ್ಟಿಕೋನದಿಂದ ನಗರಾಭಿವೃದ್ಧಿ ಅಗತ್ಯ : ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ (KUIDFC) ಸಹಯೋಗದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕರ್ನಾಟಕ ನಗರ ಮೂಲಸೌಕರ್ಯ ಮತ್ತು ಹೂಡಿಕೆಗಳ ಶೃಂಗಸಭೆಯನ್ನು ನಗರಾಭಿವೃದ್ಧಿ ಸಚಿವರು ಉದ್ಘಾಟಿಸಿ, ಭಾಗವಹಿಸಿ ಮಾತನಾಡಿದರು.

ಕರ್ನಾಟಕವು ದೇಶದಲ್ಲಿ ವೇಗವಾಗಿ ನಗರೀಕರಣಗೊಳ್ಳುತ್ತಿರುವ ಹಾಗೂ ಆರ್ಥಿಕವಾಗಿ ಅತ್ಯಂತ ಕ್ರಿಯಾಶೀಲ ರಾಜ್ಯಗಳಲ್ಲಿ ಒಂದಾಗಿದೆ. ರಾಜ್ಯದ ನಗರಗಳು ಉದ್ಯಮ, ನಾವೀನ್ಯತೆ, ಶಿಕ್ಷಣ, ಉದ್ಯೋಗ ಮತ್ತು ಹೂಡಿಕೆಯ ಪ್ರಮುಖ ಕೇಂದ್ರಗಳಾಗಿ ವೇಗವಾಗಿ ಬೆಳೆಯುತ್ತಿವೆ. ಬೆಂಗಳೂರು ಜಾಗತಿಕ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ಗುರುತಿಸಿಕೊಂಡಿರುವುದರ ಜೊತೆಗೆ, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಶಿವಮೊಗ್ಗ ಹಾಗೂ ತುಮಕೂರು ಸೇರಿದಂತೆ ರಾಜ್ಯದ ವಿವಿಧ ನಗರಗಳು ಪ್ರಾದೇಶಿಕ ಆರ್ಥಿಕ ಬೆಳವಣಿಗೆಯ ಪ್ರಮುಖ ಕೇಂದ್ರಗಳಾಗಿ ಹೊರಹೊಮ್ಮುತ್ತಿವೆ ಎಂದು ಸಚಿವರು ತಿಳಿಸಿದರು.

ವೇಗವಾಗಿ ನಡೆಯುತ್ತಿರುವ ನಗರೀಕರಣವು ಹೊಸ ಅವಕಾಶಗಳೊಂದಿಗೆ ದೊಡ್ಡ ಜವಾಬ್ದಾರಿಯನ್ನೂ ನಮ್ಮ ಮುಂದಿಟ್ಟಿದೆ. ನಗರಗಳ ಬೆಳವಣಿಗೆ ಕೇವಲ ಭೌತಿಕ ವಿಸ್ತರಣೆಗೆ ಸೀಮಿತವಾಗದೆ, ಯೋಜಿತ, ಸಮಗ್ರ, ಸುಸ್ಥಿರ ಹಾಗೂ ಪ್ರತಿಯೊಬ್ಬ ನಾಗರಿಕನ ಜೀವನಮಟ್ಟವನ್ನು ಸುಧಾರಿಸುವ ರೀತಿಯಲ್ಲಿ ಸಾಗಬೇಕು. ಇದೇ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಕಾರ್ಯಸೂಚಿಯ ಪ್ರಮುಖ ಆಶಯವಾಗಿದೆ ಎಂದು ಅವರು ಹೇಳಿದರು.

ನಾಲ್ಕು ಪ್ರಮುಖ ಆಧಾರ ಸ್ತಂಭಗಳಿಗೆ ಆದ್ಯತೆ

ರಾಜ್ಯದ ನಗರಾಭಿವೃದ್ಧಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ನಾಲ್ಕು ಪ್ರಮುಖ ಆಧಾರ ಸ್ತಂಭಗಳ ಮೇಲೆ ವಿಶೇಷ ಗಮನಹರಿಸುತ್ತಿದೆ ಎಂದು ಸಚಿವರು ತಿಳಿಸಿದರು.

- ಬಲಿಷ್ಠ ನಗರ ಆಡಳಿತ ಮತ್ತು ಸಮಗ್ರ ನಗರ ಯೋಜನೆ

- ಮೂಲಸೌಕರ್ಯ ಅಭಿವೃದ್ಧಿಗೆ ಪರಿಣಾಮಕಾರಿ ಹಣಕಾಸು ವ್ಯವಸ್ಥೆ ಹಾಗೂ ಯೋಜನೆಗಳ ಸಮರ್ಪಕ ಅನುಷ್ಠಾನ

- ಪ್ರತಿಯೊಬ್ಬರಿಗೂ ಸುರಕ್ಷಿತ, ವಿಶ್ವಾಸಾರ್ಹ ಹಾಗೂ ನಿರಂತರ 24x7 ಕುಡಿಯುವ ನೀರು ಮತ್ತು ಒಳಚರಂಡಿ ಸೌಲಭ್ಯ

- ಸುಸ್ಥಿರ, ಸಮಗ್ರ ಹಾಗೂ ಜನಕೇಂದ್ರಿತ ನಗರ ಸಾರಿಗೆ ವ್ಯವಸ್ಥೆ

ನೀರು ಮತ್ತು ಒಳಚರಂಡಿ ಮೂಲಸೌಕರ್ಯಕ್ಕೆ ಒತ್ತು

ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಕಲಬುರಗಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ 24x7 ನೀರು ಸರಬರಾಜು ಯೋಜನೆಗಳನ್ನು ವಿಸ್ತರಿಸುವುದು, ರಾಜ್ಯದ ವಿವಿಧ ನಗರಗಳಲ್ಲಿ ನೀರು ಮತ್ತು ಒಳಚರಂಡಿ ಮೂಲಸೌಕರ್ಯವನ್ನು ಬಲಪಡಿಸುವುದು ಹಾಗೂ ತ್ಯಾಜ್ಯನೀರಿನ ಸಂಸ್ಕರಣೆ ಮತ್ತು ಮರುಬಳಕೆಗೆ ಉತ್ತೇಜನ ನೀಡುವುದು ಸರ್ಕಾರದ ಪ್ರಮುಖ ಆದ್ಯತೆಗಳಾಗಿವೆ ಎಂದು ಸಚಿವರು ಹೇಳಿದರು.

ನಗರಗಳ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ನೀರಿನ ಸಂಪನ್ಮೂಲಗಳ ಸಮರ್ಥ ನಿರ್ವಹಣೆ ಹಾಗೂ ಸುಸ್ಥಿರ ನಗರ ಸೇವೆಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.

ಜನಕೇಂದ್ರಿತ ಮತ್ತು ಸುಸ್ಥಿರ ನಗರ ಸಾರಿಗೆ

ನಗರಗಳಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಹಾಗೂ ಪ್ರಯಾಣದ ಅಗತ್ಯಗಳಿಗೆ ಪರಿಹಾರ ಕಂಡುಕೊಳ್ಳಲು ಸಾರ್ವಜನಿಕ ಸಾರಿಗೆಯನ್ನು ಮತ್ತಷ್ಟು ಬಲಪಡಿಸುವುದು, ಉಪನಗರ ರೈಲು ವ್ಯವಸ್ಥೆ, Transit-Oriented Development (TOD), ಪಾದಚಾರಿ ಮತ್ತು ಸೈಕಲ್ ಮೂಲಸೌಕರ್ಯ ಹಾಗೂ ತಂತ್ರಜ್ಞಾನ ಆಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ನಗರ ಸಾರಿಗೆ ವ್ಯವಸ್ಥೆ ವೇಗ, ಸುರಕ್ಷತೆ, ಸುಸ್ಥಿರತೆ ಮತ್ತು ಎಲ್ಲ ವರ್ಗದ ಜನರಿಗೆ ಸುಲಭವಾಗಿ ಲಭ್ಯವಾಗುವಂತಿರಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸದೃಢತೆಗೆ ಕ್ರಮ

ನಗರ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಕ್ರೋಢೀಕರಿಸುವುದು ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸದೃಢತೆಯನ್ನು ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಸಚಿವರು ಹೇಳಿದರು.

ಆಸ್ತಿ ತೆರಿಗೆ ಸಂಗ್ರಹಣೆಯ ಸುಧಾರಣೆ, GIS ಆಧಾರಿತ ಆಸ್ತಿ ಮೌಲ್ಯಮಾಪನ, ಡಿಜಿಟಲ್ ನಗರ ಸೇವೆಗಳು ಹಾಗೂ ಮುನಿಸಿಪಲ್ ಬಾಂಡ್‌ಗಳಂತಹ ನವೀನ ಹಣಕಾಸು ವ್ಯವಸ್ಥೆಗಳ ಮೂಲಕ ನಗರಗಳಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಹೆಚ್ಚಿಸುವತ್ತ ಗಮನಹರಿಸಲಾಗುತ್ತಿದೆ ಎಂದರು.

ಆರ್ಥಿಕ ಬೆಳವಣಿಗೆ ಮತ್ತು ಉತ್ತಮ ಜೀವನಮಟ್ಟಕ್ಕೆ ಪೂರಕವಾದ ನಗರಗಳು

“ನಮ್ಮ ಗುರಿ ಕೇವಲ ನಗರಗಳನ್ನು ವಿಸ್ತರಿಸುವುದಲ್ಲ. ಆರ್ಥಿಕ ಬೆಳವಣಿಗೆಗೆ ವೇಗ ನೀಡುವ, ಪರಿಸರವನ್ನು ಸಂರಕ್ಷಿಸುವ ಹಾಗೂ ಪ್ರತಿಯೊಬ್ಬ ನಾಗರಿಕನಿಗೂ ಉತ್ತಮ ಗುಣಮಟ್ಟದ ಜೀವನವನ್ನು ಒದಗಿಸುವ ಭವಿಷ್ಯಸಿದ್ಧ ನಗರಗಳನ್ನು ನಿರ್ಮಿಸುವುದಾಗಿದೆ,” ಎಂದು ಸಚಿವರು ಹೇಳಿದರು.

ಕರ್ನಾಟಕದ ನಗರಗಳ ಬೆಳವಣಿಗೆಯನ್ನು ಮುಂದಿನ ಪೀಳಿಗೆಯ ಅಗತ್ಯಗಳಿಗೆ ತಕ್ಕಂತೆ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಸಹಭಾಗಿತ್ವ, ನವೀನ ಹಣಕಾಸು ಮಾದರಿಗಳು ಹಾಗೂ ತಂತ್ರಜ್ಞಾನಗಳ ಪರಿಣಾಮಕಾರಿ ಬಳಕೆಯ ಮೂಲಕ ರಾಜ್ಯದ ನಗರ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ KUIDFC ಅಧ್ಯಕ್ಷರಾದ ಎಸ್. ಎನ್. ನಾರಾಯಣಸ್ವಾಮಿ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಬಿಬಿ ಕಾವೇರಿ ಹಾಗೂ KUIDFC ವ್ಯವಸ್ಥಾಪಕ ನಿರ್ದೇಶಕರಾದ ಭೂ ಬಾಲನ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Yathindra Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X