Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಂಗಳೂರಿನಲ್ಲಿ ಶೀಘ್ರವೇ ಹಜ್ ಭವನ...

ಮಂಗಳೂರಿನಲ್ಲಿ ಶೀಘ್ರವೇ ಹಜ್ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ : ಝುಲ್ಫಿಖರ್ ಅಹ್ಮದ್ ಖಾನ್

ವಾರ್ತಾಭಾರತಿವಾರ್ತಾಭಾರತಿ14 April 2025 10:27 PM IST
share
ಮಂಗಳೂರಿನಲ್ಲಿ ಶೀಘ್ರವೇ ಹಜ್ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ : ಝುಲ್ಫಿಖರ್ ಅಹ್ಮದ್ ಖಾನ್

ಬೆಂಗಳೂರು : ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣವಾಗಬೇಕು ಎಂಬುದು ಕರಾವಳಿ ಭಾಗದ ಮುಸ್ಲಿಮರು ದಶಕಗಳ ಬೇಡಿಕೆಯಾಗಿದೆ. ಆದಷ್ಟು ಶೀಘ್ರವೇ ಹಜ್ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗುವುದು ಎಂದು ರಾಜ್ಯ ಹಜ್ ಸಮಿತಿ ಅಧ್ಯಕ್ಷ ಝುಲ್ಫಿಖರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಆಕಾಂಕ್ಷಿಗಳಿಗೆ ನಗರದ ಹಜ್ ಭವನದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ ತರಬೇತಿ ಶಿಬಿರದ ಸಮಾರೋಪದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಅವರ ಕುಟುಂಬ ಸದಸ್ಯರು ಮಂಗಳೂರಿನ ಬಜ್ಪೆ ಬಳಿ 1.8 ಎಕರೆ ಜಮೀನನ್ನು ರಾಜ್ಯ ಹಜ್ ಸಮಿತಿಗೆ ದಾನ ಮಾಡಿದ್ದಾರೆ. ಇದೇ ಎ.24ರಂದು ಹಜ್ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಅಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿರುವುದರಿಂದ, ಶೀಘ್ರವೇ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.

ಗುಲ್ಬರ್ಗದಲ್ಲಿಯೂ ಹಜ್ ಭವನ ನಿರ್ಮಾಣಕ್ಕೆ ಜಾಗವನ್ನು ಗುರುತಿಸಿದ್ದು, ಕಾಂಪೌಂಡ್ ಗೋಡೆ ನಿರ್ಮಾಣ ಮಾಡಲಾಗಿದೆ. ಅಲ್ಲಿಯೂ ಶೀಘ್ರವೆ ಕಾಮಗಾರಿ ಆರಂಭಿಸಲಾಗುವುದು. ಅದೇ ರೀತಿ, ಬೀದರ್‌ನಲ್ಲಿ ಜಾವೇದ್ ಸಾಬ್ ಎಂಬವರು ಹಜ್ ಭವನ ನಿರ್ಮಾಣಕ್ಕೆ ಒಂದು ಎಕರೆ ಜಾಗ ದಾನ ನೀಡಲು ಮುಂದೆ ಬಂದಿದ್ದಾರೆ. ಅವರ ದಾಖಲಾತಿಗಳನ್ನೆಲ್ಲ ಪರಿಶೀಲನೆ ನಡೆಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಝುಲ್ಫಿಖರ್ ಅಹ್ಮದ್ ಖಾನ್ ಹೇಳಿದರು.

ತರಬೇತಿ ಶಿಬಿರ: ಮೂರು ದಿನಗಳ ಕಾಲ ನಡೆದ ತರಬೇತಿ ಶಿಬಿರದಲ್ಲಿ ಪ್ರತಿ ದಿನ ತಲಾ 1200 ಮಂದಿ ಭಾಗವಹಿಸಿದ್ದರು. ರಾಜ್ಯ ಹಜ್ ಸಮಿತಿ ವತಿಯಿಂದ ತೆರಳುವ ಹಜ್ ಯಾತ್ರೆಯ ಆಕಾಂಕ್ಷಿಗಳಲ್ಲದೇ, ಖಾಸಗಿ ಟೂರ್ ಆಪರೇಟರ್‍ಗಳ ಮೂಲಕ ತೆರಳುವವರಿಗೂ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು ಎಂದು ಅವರು ಹೇಳಿದರು.

ಹಜ್ ಕ್ಯಾಂಪ್ ಸಂದರ್ಭದಲ್ಲಿ ಯಾತ್ರಿಕರ ಸಂಬಂಧಿಕರು, ಸ್ನೇಹಿತರು, ಸ್ವಯಂ ಸೇವಕರು ಸೇರಿದಂತೆ ಸುಮಾರು 25 ರಿಂದ 30 ಸಾವಿರ ಮಂದಿಗೆ ಪ್ರತಿ ದಿನ ಸಚಿವ ಝಮೀರ್ ಅಹ್ಮದ್ ಖಾನ್ ಅವರ ವತಿಯಿಂದ ಊಟದ ವ್ಯವಸ್ಥೆಯನ್ನು ಮಾಡಲಾಗುವುದು. ಈಗಾಗಲೇ, ಹಜ್ ಭವನದಲ್ಲಿ ಯಾತ್ರೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಝುಲ್ಫಿಖಾರ್ ಅಹ್ಮದ್ ಖಾನ್ ತಿಳಿಸಿದರು.

ಈಗಾಗಲೇ, ಬೀದರ್, ಗುಲ್ಬರ್ಗಾ, ಹೊಸಪೇಟೆಯಲ್ಲಿ ಹಜ್ ಯಾತ್ರಿಕರಿಗೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು. ಇದೀಗ, ಬೆಂಗಳೂರಿನಲ್ಲಿಯೂ ಮೂರು ದಿನಗಳ ತರಬೇತಿ ಶಿಬಿರ ಪೂರ್ಣಗೊಂಡಿದೆ. ಉಳಿದ ಕಡೆಯೂ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಎ.28ಕ್ಕೆ ಹಜ್‍ಯಾತ್ರೆ ವಿಮಾನಯಾನ ಉದ್ಘಾಟನೆ: ಹಜ್ ಭವನದ ಆವರಣದಲ್ಲಿ ಎ.28ರಂದು ಸಂಜೆ ಪ್ರಸಕ್ತ ಸಾಲಿನ ಹಜ್ ಯಾತ್ರೆಗೆ ತೆರಳುತ್ತಿರುವ ಯಾತ್ರಿಕರ ವಿಮಾಯಾನ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಎ.29ರಿಂದ ಮೇ 15ರವರೆಗೆ ಬೆಂಗಳೂರಿನಿಂದ ಮದೀನಾ ವಿಮಾನ ನಿಲ್ದಾಣಕ್ಕೆ ಯಾತ್ರಿಗಳು ತೆರಳುತ್ತಾರೆ. ಈ ಬಾರಿ ರಾಜ್ಯ ಹಜ್ ಸಮಿತಿ ವತಿಯಿಂದ ಸುಮಾರು 8600 ಮಂದಿ ಹಜ್ ಯಾತ್ರೆಗೆ ತೆರಳಲಿದ್ದಾರೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X