ದೊಡ್ಡಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ | ನಾಲ್ವರು ಸ್ಥಳದಲ್ಲೇ ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ಸಾಂದರ್ಭಿಕ ಚಿತ್ರ
ದೊಡ್ಡಬಳ್ಳಾಪುರ : ರಾಜ್ಯ ಹೆದ್ದಾರಿಯಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ಇನ್ನೋವಾ ಕಾರು ಪಲ್ಟಿಯಾಗಿ ನಾಲ್ವರು ಮೃತಪಟ್ಟು, ಉಳಿದ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬಳಿ ಮಂಗಳವಾರ ನಡೆದಿದೆ.
ಮೃತರನ್ನು ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ.ಈಶ್ವರಪ್ಪ, ಪುರುಷೋತ್ತಮ, ಕಾಳಪ್ಪ ಹಾಗೂ ನಾರಾಯಣಪ್ಪ ಎಂದು ಗುರುತಿಸಲಾಗಿದೆ.
ಮೃತರು ಮಂಗಳವಾರ ಬೆಳಗ್ಗೆ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟದ ಮಹೇಶ್ವರಮ್ಮನ ದರ್ಶನಕ್ಕೆ ಹೊರಟ್ಟಿದ್ದರು. ದೊಡ್ಡಬಳ್ಳಾಪುರ-ಗೌರಿಬಿದನೂರು ರಸ್ತೆಯ ಮಾಕಳಿ ಬಳಿ ಓವರ್ ಟೇಕ್ ಮಾಡುವ ವೇಳೆ ಎದುರಿಗೆ ಕೆಎಸ್ಸಾರ್ಟಿಸಿ ಬಸ್ ಅಡ್ಡ ಬಂದಿದ್ದು, ಈ ವೇಳೆ ಎಡಕ್ಕೆ ಕಾರನ್ನು ತಿರುಗಿಸುವಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.
ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story