Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ರೂ. 1 ಕೋಟಿಗೂ ಅಧಿಕ ಮೌಲ್ಯದ...

ಬಂಟ್ವಾಳ: ರೂ. 1 ಕೋಟಿಗೂ ಅಧಿಕ ಮೌಲ್ಯದ ಅಕ್ಕಿ ಕೊರತೆ; ದಾಸ್ತಾನು ಕೇಂದ್ರಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ

ಡಿಪೋ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ18 Aug 2023 6:33 PM IST
share
ಬಂಟ್ವಾಳ: ರೂ. 1 ಕೋಟಿಗೂ ಅಧಿಕ ಮೌಲ್ಯದ ಅಕ್ಕಿ ಕೊರತೆ; ದಾಸ್ತಾನು ಕೇಂದ್ರಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ

ಬಂಟ್ವಾಳ : ಭಾರತೀಯ ಆಹಾರ ನಿಗಮದಿಂದ ಪಡಿತರ ಚೀಟಿದಾರರಿಗೆ ವಿತರಣೆ ಮಾಡಲು ಕಳುಹಿಸಲಾದ ಅಕ್ಕಿಯಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ದೂರು ದಾಖಲಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ತಲಪಾಡಿಯಲ್ಲಿರುವ ದಾಸ್ತಾನು ಕೇಂದ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪ್ರಕರಣದ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಅವರು ಇಲ್ಲಿನ ಗೊಡೌನ್ ನಲ್ಲಿ ಇರಿಸಲಾದ ಅಕ್ಕಿಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಆಹಾರ ನಿರೀಕ್ಷಕ ತನಿಖೆ ಮಾಡಿದ್ದಾರೆ. ಅ ಸಂದರ್ಭ ದಾಸ್ತಾನು ಇರುವ ಅಕ್ಕಿಯ ಲೆಕ್ಕಾಚಾರ ರೆಕಾರ್ಡ್ ಮಾಡಿದ್ದಾರೆ. ಈ ಬಗ್ಗೆ ಕೆ.ಎಸ್.ಎಫ್.ಸಿ.ಅಧಿಕಾರಿಗಳ ಗಮನಕ್ಕೆ ತಂದಿದ್ದು, ಕೆ.ಎಸ್.ಎಫ್.ಸಿ. ಮೇಲಾಧಿಕಾರಿಗಳ ಸೂಚನೆಯಂತೆ ನಿಗಮದ ಜಿಲ್ಲಾ ಅಧಿಕಾರಿ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ.

ದಾಸ್ತಾನು ಕೊಠಡಿಯಲ್ಲಿ ಯಾಕೆ ವ್ಯತ್ಯಾಸ ಆಗಿದೆ ಎಂಬುದರ ಮೇಲೆ ಇಲ್ಲಿನ ಡಿಪೋ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದೇ‌ನೆ. ಯಾವ ರೀತಿಯಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂಬುದರ ಬಗ್ಗೆ ಸೂಕ್ತವಾದ ತನಿಖೆ ನಡೆಸಿದ ಬಳಿಕ ಸಂಪೂರ್ಣವಾದ ಚಿತ್ರಣ ಕಂಡು ಬರಬಹುದು. ಬಹಳ ದಿನಗಳ ಸಮಸ್ಯೆಗಳು ಇರಬಹುದು. ಅದಕ್ಕೆ ಬೇಕಾದ ದಾಖಲೆಗಳನ್ನು ಮಾಡಲು ತಿಳಿಸಿದ್ದೇನೆ. ಕೆ.ಎಸ್.ಎಫ್.ಸಿ‌‌.‌ ರಾಜ್ಯಮಟ್ಟದಲ್ಲಿರುವ ಅಧಿಕಾರಿಗಳನ್ನು ಸ್ಥಳಕ್ಕೆ ಭೇಟಿ ನೀಡಲು ಸೂಚಿಸಿದ್ದೇನೆ. ಅವರು ಬಂದು ನೋಡಿ ವರದಿ ನೀಡುತ್ತಾರೆ ಎಂದು ಡಿಸಿ ತಿಳಿಸಿದ್ದಾರೆ.

ಸುಮಾರು 1,32,36,030 ರೂ. ಮೌಲ್ಯದ ಅಕ್ಕಿಯ ಕೊರತೆ ದಾಸ್ತಾನು ಕೊಠಡಿಯಲ್ಲಿ ಕಂಡು ಬಂದಿದ್ದು, ಅವ್ಯವಹಾರ ನಡೆದಿರಬೇಕು ಎಂದು ನಿಗಮದ ಅಧಿಕಾರಿಗಳು ನಗರ ಪೋಲೀಸ್ ಠಾಣೆಗೆ ದೂರನ್ನು ನೀಡಿದ್ದರು. ದೂರಿನ ಮೇರೆಗೆ ಬಂಟ್ವಾಳ ನಗರ ಠಾಣಾಧಿಕಾರಿ ರಾಮಕೃಷ್ಣ ಅಪರಾಧ ವಿಭಾಗದ ಎಸ್.ಐ. ಕಲೈಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ದಾಸ್ತಾನು ಇರಿಸಲಾದ ಅಕ್ಕಿಯಲ್ಲಿ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ ಎಂಬ ಸಾರ್ವಜನಿಕ ದೂರುಗಳು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಪತ್ರದ ಮುಖಾಂತರ ಸೂಚಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X