Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಬಸವರಾಜ ಹೊರಟ್ಟಿ, ಡಾ.ಮೂಡಂಬೈಲು ರವಿ...

ಬಸವರಾಜ ಹೊರಟ್ಟಿ, ಡಾ.ಮೂಡಂಬೈಲು ರವಿ ಶೆಟ್ಟಿಗೆ 'ಕಯ್ಯಾರ ಪ್ರಶಸ್ತಿ'

ವಾರ್ತಾಭಾರತಿವಾರ್ತಾಭಾರತಿ12 Jun 2026 10:12 AM IST
share
ಬಸವರಾಜ ಹೊರಟ್ಟಿ, ಡಾ.ಮೂಡಂಬೈಲು ರವಿ ಶೆಟ್ಟಿಗೆ ಕಯ್ಯಾರ ಪ್ರಶಸ್ತಿ
ಜೂ.21ರಂದು ಜರುಗುವ ಡಾ.ಕಯ್ಯಾರ ಕಿಞಣ್ಣ ರೈ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ

ಕಾಸರಗೋಡು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ, ಬಸವರಾಜ ಎಸ್. ಹೊರಟ್ಟಿ ಮತ್ತು ಎಟಿಎಸ್ ಖತರ್ ಇದರ ಆಡಳಿತ ನಿರ್ದೇಶಕ ಡಾ.ಮೂಡಂಬೈಲು ರವಿ ಶೆಟ್ಟಿ ದೋಣಿoಜೆಗುತ್ತು ಅವರು ಪ್ರಸಕ್ತ ಸಾಲಿನ 'ಕಯ್ಯಾರ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ ಕಾಸರಗೋಡು, ಕಲ್ಕೂರ ಪ್ರತಿಷ್ಠಾನ ಮಂಗಳೂರು ಸಹಯೋಗದಲ್ಲಿ ಜೂ.21ರಂದು ಬೆಳಗ್ಗೆ 9ರಿಂದ ಕಯ್ಯಾರು ಕಾಮಿಲ್ ಕೊಕ್ಕೆಚಾಲು ಶಾಲಾ ವಠಾರದಲ್ಲಿ ನಡೆಯುವ ನಾಡೋಜ ಡಾ.ಕಯ್ಯಾರ ಕಿಂಞಣ್ಣ ರೈ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಇದೇ ವೇಳೆ ಜಾನಪದ ಕಲಾವಿದ ಸೋಮಯ್ಯ ಅಶ್ವತ್ಥಕಟ್ಟೆ, ಪ್ರಗತಿಪರ ಕೃಷಿಕ ರಾಮಣ್ಣ ಅತ್ತಾರ್ ನಾಟಿ ವೈದ್ಯ ಮುಹಮ್ಮದ್ ಪರಂಬಳ ಅವರಿಗೆ ಸಾಮಾಜಿಕ ಕಾರ್ಯಕರ್ತ ದೀಪಕ್ ವಿ.ಕೆ. ಬೆಂಗಳೂರು ಗೌರವಾರ್ಪಣೆ ಮಾಡುವರು ಎಂದು ಪ್ರಕಟನೆ ತಿಳಿಸಿದೆ.

ಇದೇವೇಳೆ ಕೃತಿ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ.

ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಮಾಜಿ ಶಾಸಕ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸುವರು. ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಪ್ರಶಸ್ತಿ ಪ್ರದಾನ ಮಾಡುವರು.

ಇದೇ ಸಂದರ್ಭ ಶಿವಾನಂದ ಕೋಟ್ಯಾನ್ ಕಟಪಾಡಿಯವರ 'ಪರಂಪರೆಯ ಪಯಣ' ಕೃತಿ ಬಿಡುಗಡೆಗೊಳ್ಳಲಿದೆ. ಕರ್ನಾಟಕ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಕೃತಿ ಬಿಡುಗಡೆ ಮಾಡುವರು. ಕವಿತಾ ಕುಟೀರ ಪೆರಡಾಲ ಕಾರ್ಯದರ್ಶಿ ಡಾ.ಪ್ರಸನ್ನ ರೈ ಕಲ್ಲಕಳಿಯ ಕಯ್ಯಾರರು ಬರೆದ ಗೀತೆಗಳನ್ನು ಹಾಡುವರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಕಯ್ಯಾರು ಕ್ರಿಸ್ತರಾಜ ಚರ್ಚ್ ಧರ್ಮಗುರು ರೆ.ಫಾ.ವಿಶಾಲ್ ಮೋನಿಶ್, ಪೈವಳಿಕೆ ಗ್ರಾಪಂ ಅಧ್ಯಕ್ಷೆ ಬದ್ರುನ್ನಿಸಾ ಸಲೀಂ, ಕಾಸರಗೋಡು ಜಿಪಂ ಸದಸ್ಯ ಸೋಮಶೇಖರ ಜೆ.ಎಸ್., ಮಂಜೇಶ್ವರ ಬ್ಲಾಕ್ ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಮೋಹನ್ ರೈ, ಸದಸ್ಯೆ ಚಂದ್ರಾವತಿ ಶೆಟ್ಟಿ, ಪೈವಳಿಕೆ ಗ್ರಾಪಂ ಅಭಿವೃದ್ಧಿ ಸ್ಥಾಯಿ ಸಮಿತಿಯ ಅಧ್ಯಕ್ಷೆ ಸುನೀನಾ ಝೆಡ್.ಎ. ಕಯ್ಯಾರ್, ಪೈವಳಿಕೆ ಗ್ರಾಪಂ ಸದಸ್ಯೆ ಪ್ರಿನ್ಸಿ ಡಿಸೋಜ, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಮುಖ್ಯ ಅತಿಥಿಗಳಾಗಿರುವರು.

ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜಾಣಗೆರೆ ವೆಂಕಟರಾಮಯ್ಯ, ಭಗತ್ ರಾಜ್ ನಿಜಾಮಕರ, ಡಾ.ಎಂ.ಎಸ್.ಮದಬಾವಿ, ಅಶೋಕ ಚಂದರಗಿ, ಡಾ.ಸಂಜೀವ ಕುಮಾರ ಅತಿವಾಳೆ, ಶಿವರೆಡ್ಡಿ ಖ್ಯಾಡೇದ್ ಅತಿವಾಳೆ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.

ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ಕೆಯುಡಬ್ಲ್ಯುಜೆ ಬೆಂಗಳೂರು ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಪೈವಳಿಕೆ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶ್ರೀಧರ ಹೊಳ್ಳ, ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಕಾರ್ಯದರ್ಶಿ ಮಂಜುನಾಥ ಆಳ್ವ ಮಡ್ವ, ಸಾಮಾಜಿಕ ಕಾರ್ಯಕರ್ತ ಅರಿಬೈಲು ಗೋಪಾಲ ಶೆಟ್ಟಿ, ಕರ್ನಾಟಕ ಗಮಕ ಕಲಾ ಪರಿಷತ್ತು, ಕಾಸರಗೋಡು ಇದರ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ಸಾಮಾಜಿಕ ಕಾರ್ಯಕರ್ತ ಶ್ರೀಧರ ಶೆಟ್ಟಿ ಮುಟ್ಟಂ, ಉದ್ಯಮಿ ಹಮೀದ್ ಚರೋಳಿ, ಚೇರಾಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಘವ ಚೇರಾಲ್, ಮಂಜೇಶ್ವರ ಬ್ಲಾಕ್ ಪಂ ಮಾಜಿ ಸದಸ್ಯರಾದ ಬೇಬಿ ಶೆಟ್ಟಿ, ಪ್ರಸಾದ್ ರೈ ಕಾಮಿಲ್ ಅಂಗ್ಲ ಮಾಧ್ಯಮ ಶಾಲೆ ಅಧ್ಯಕ್ಷ ಮೊಯ್ದಿನ್ ಕುಂಞಿ ಮಾಸ್ಟರ್, ಕುಡಾಲ್ ಮೇರ್ಕಳ ಎಲ್.ಪಿ. ಶಾಲೆ ವ್ಯವಸ್ಥಾಪಕ ಬಿ.ಎ.ಖಾದರ್ ಹಾಜಿ ಬಗುಡೆಲ್, ಸಾಮಾಜಿಕ ಕಾರ್ಯಕರ್ತ, ಪ್ರವೀಣ್ ರೈ ಪೊನ್ನತೋಡು, ಸೌದಿ ಕೆಎಂಸಿಸಿಯ ಹಮೀದ್ ಕೊಕ್ಕಚಾಲ್, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಅಕಾಡಮಿಯ ಅಧ್ಯಕ್ಷ ಚನಿಯಪ್ಪ ನಾಯ್ಕ, ಕಾರ್ಯದರ್ಶಿ ಅಖಿಲೇಶ್ ನಗುಮುಗಂ ಉಪಸ್ಥಿತರಿರುವರು.

ಸಾಂಸ್ಕೃತಿಕ ಕಾರ್ಯಕ್ರಮ

ಡಾ.ನಾಗೇಶ್ ಕೆ.ಎನ್. ಅವರಿಂದ ನಾಡಗೀತೆ ಮತ್ತು ಕನ್ನಡ ಗೀತೆಗಳ ಗಾಯನ, ಸಮೂಹ ಶಾಸ್ತ್ರೀಯ ಭರತನಾಟ್ಯ, ಸಮೂಹ ಶಾಸ್ತ್ರೀಯ ಕಥಕ್ ನೃತ್ಯ, ಚೆಂಡೆ ವಾದನ, ಸಮೂಹ ಜಾನಪದ ನೃತ್ಯ, ಸಮೂಹ ಶಾಸ್ತ್ರೀಯ ನೃತ್ಯ ಪ್ರದರ್ಶನ ನಡೆಯಲಿದೆ.

ಗ್ರೀನ್ ಸ್ಟಾರ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಕಯ್ಯಾರು, ಕೊಕ್ಕಚಾಲ್ ಫ್ರೆಂಡ್ಸ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್, ಮುಂಡತ್ತಾಯ ಯುವಕ ವೃಂದ ಕಯ್ಯಾರು, ಲಿಟ್ಲ್ ಬ್ರದರ್ಸ್ ಕೊಕ್ಕಚಾಲ್ ಕಯ್ಯಾರ್, ನೇತಾಜಿ ಫ್ರೆಂಡ್ಸ್ ಅಶ್ವತ್ಥಕಟ್ಟೆ ಕಯ್ಯಾರು, 16ನೇ ವಾರ್ಡ್ ಕುಟುಂಬಶ್ರೀಯ ಎಲ್ಲಾ ಘಟಕಗಳ ಸಹಕಾರದಲ್ಲಿ ಡಾ.ಕಯ್ಯಾರ ಕಿಞಣ್ಣ ರೈ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags

Kayyar Award
share
ವಾರ್ತಾಭಾರತಿ
ವಾರ್ತಾಭಾರತಿ
Next Story
X