ಬಿಜೆಪಿಯ ಒಂದು ಗುಂಪಿಂದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ : ಸತೀಶ್ ಜಾರಕಿಹೊಳಿ

ಬೆಳಗಾವಿ : ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ ವಿಚಾರದಲ್ಲಿ ಬಿಜೆಪಿಯೊಳಗೆ ಎರಡು ಗುಂಪುಗಳಿದ್ದು, ಅದರಲ್ಲಿ ಒಂದು ಗುಂಪು ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿದೆ. ಇದರಿಂದ ಬಿಜೆಪಿ ರಾಜಕೀಯ ಲಾಭ ಪಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಆರೋಪಿಸಿದರು.
ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮದವರ ಪ್ರಶ್ನಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಅದು ಅವರ ವೈಯಕ್ತಿಕ ಅಭಿಪ್ರಾಯ. ಪಕ್ಷದ ವಿಚಾರವಲ್ಲ” ಎಂದು ಹೇಳಿದರು.
ಬೆಳಗಾವಿ ಜಿಲ್ಲೆಯ ವಿಭಜನೆ ಕುರಿತು ಮಾತನಾಡಿದ ಅವರು, “ಮುಖ್ಯಮಂತ್ರಿಗಳ ಗಮನಕ್ಕೆ ವಿಷಯವನ್ನು ತಂದಿದ್ದೇವೆ. ಶೀಘ್ರ ವಿಭಜನೆ ಆದರೆ ಜಿಲ್ಲೆಗೆ ಒಳ್ಳೆಯದು” ಎಂದು ಅಭಿಪ್ರಾಯಪಟ್ಟರು.
ಬೈಪಾಸ್‌ಗೆ ಶೀಘ್ರ ಕ್ರಮ :
“ಅಥಣಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ರಾಯಭಾಗ, ಹುಕ್ಕೇರಿ ಬೈಪಾಸ್ ಕೆಲಸ ಆರಂಭವಾಗಿದೆ” ಎಂದರು.
Next Story





