Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬಿಪಿಎಲ್ ಕಾರ್ಡ್ ಆದಾಯ ಮಿತಿ...

ಬಿಪಿಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ: ಸಚಿವ ಕೆ.ಎಚ್.ಮುನಿಯಪ್ಪ

ವಾರ್ತಾಭಾರತಿವಾರ್ತಾಭಾರತಿ18 Dec 2025 1:16 PM IST
share
ಬಿಪಿಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ ಸುವರ್ಣ ಸೌಧ ಡಿ.18: ರಾಜ್ಯ ಸರಕಾರ ಬಿ.ಪಿ.ಎಲ್. ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡುತ್ತಿದ್ದರು.

ಕೇಂದ್ರ ಸರಕಾರ ಬಿ.ಪಿ.ಎಲ್ ಕಾರ್ಡ್ದಾರರ ಆದಾಯ ಮಿತಿಯನ್ನು ರೂ.1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ರೂ.500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ರೂ.1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು.

ಕೇಂದ್ರ ಸರಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿ.ಪಿ.ಎಲ್ ಹಾಗೂ 1.25 ಲಕ್ಷ ಎ.ಪಿ.ಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ರಾಜ್ಯದ ಜನಸಂಖ್ಯೆಗೆ ಹೊಲಿಸಿದರೆ ಶೇ.73 ರಷ್ಟು ಕುಟುಂಬಗಳು ಬಿ.ಪಿ.ಎಲ್ ಕಾರ್ಡ್ ಪಡೆದಿವೆ. ರಾಜ್ಯವು ಜಿ.ಎಸ್.ಟಿ ಪಾವತಿ, ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದೆ. ಈ ಅಂಶವನ್ನು ಪರಿಗಣಿಸಿದರೆ ಬಿ.ಪಿ.ಎಲ್. ಕುಟುಂಬಗಳ ಪ್ರಮಾಣ ಶೇ.50 ರಷ್ಟು ಇರಬೇಕಿತ್ತು. ಆದರೆ ಇದಕ್ಕೂ ಹೆಚ್ಚಿನ ಕುಟುಂಬ ಬಿ.ಪಿ.ಎಲ್. ಕಾರ್ಡು ಪಡೆದಿವೆ. ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು ಪಡೆಯುವ ಹಾಗೂ ಹೊರಗಿಡುವ ಬಗ್ಗೆ 2017ರಲ್ಲಿ ಮಾನದಂಡಗಳನ್ನು ರೂಪಿಸಿದೆ. ಇದರ ಅನ್ವಯ ಸರ್ಕಾರಿ, ಅನುದಾನಿತ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರು, ಆದಾಯ, ಸೇವಾ ಹಾಗೂ ಜಿ.ಎಸ್.ಟಿ ತೆರಿಗೆ ಪಾವತಿ ಮಾಡುವ ಕುಟುಂಬಗಳಿಗೆ ಬಿ.ಪಿ.ಎಲ್ ಕಾರ್ಡ್ ನೀಡುವುದಿಲ್ಲ. ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿರುವುದರಿಂದ, ತಾತ್ಕಾಲಿಕವಾಗಿ ಯಾವುದೇ ಬಿ.ಪಿ.ಎಲ್.ಕಾರ್ಡುಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಸದ್ಯ ವೈದ್ಯಕೀಯ ಆಧಾರದಲ್ಲಿ ಮಾತ್ರ ಬಿ.ಪಿ.ಎಲ್ ಕಾರ್ಡು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಕುಟುಂಬದ ಸದಸ್ಯರು ನೌಕರಿಗೆ ಸೇರಿದ್ದಾರೆ ಎನ್ನುವ ಕಾರಣದಿಂದ ಬಿ.ಪಿ.ಎಲ್ ಕಾರ್ಡು ರದ್ದಾಗಿದ್ದರೆ, ಬಾಧಿತ ಕುಟುಂಬದವರು ನೌಕರಿಗೆ ಸೇರಿದವರು ತಮ್ಮೊಂದಿಗೆ ವಾಸವಾಗಿಲ್ಲ ಎನ್ನುವ ಕಾರಣ ನೀಡಿ, ಸಂಬಂಧಪಟ್ಟ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿದರೆ 15 ದಿನದ ಒಳಗಾಗಿ ಬಿ.ಪಿ.ಎಲ್ ಕಾರ್ಡು ನೀಡಲಾಗುವುದು. ಬಂಟ್ವಾಳ ಕ್ಷೇತ್ರದಲ್ಲಿ 2023-24ನೇ ಸಾಲಿನವರೆಗೆ ರೂ.48,715 ಕುಟುಂಬಗಳಿಗೆ ಬಿ.ಪಿ.ಎಲ್ ಕಾರ್ಡು ನೀಡಲಾಗಿದೆ. 2023 ರಿಂದ ಜನವರಿ 2025ವರೆಗೆ ಒಟ್ಟು 688 ಬಿ.ಪಿ.ಎಲ್ ಕಾರ್ಡು ವಿತರಿಸಲಾಗಿದೆ. 99 ಕುಟಂಬಗಳ ಬಿ.ಪಿ.ಎಲ್ ಕಾರ್ಡು ರದ್ದುಪಡಿಸಲಾಗಿದೆ. ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 930 ಬಿ.ಪಿ.ಎಲ್ ಕಾರ್ಡುಗಳನ್ನು ಎ.ಪಿ.ಎಲ್ ಕಾರ್ಡುಗಳಾಗಿ ಪರಿವರ್ತಿಸಲಾಗಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 964 ಹೊಸ ಬಿ.ಪಿ.ಎಲ್ ಕಾರ್ಡ್ ನೀಡುವ ಅರ್ಜಿಗಳು ಬಾಕಿಯಿವೆ. ಕೂಡಲೇ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಕೃಷ್ಣ.ಸಿ.ಎನ್. ಸಚಿವರಲ್ಲಿ ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X