ಬೆಳಗಾವಿ | ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ; ವಿಡಿಯೋ ವೈರಲ್

ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ; ವಿಡಿಯೋ ವೈರಲ್
ಬೆಳಗಾವಿ : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ನ ಮಹಾಲಕ್ಷ್ಮಿ ಜಾತ್ರೆಯಲ್ಲಿ ಶನಿವಾರ ಶಾಸಕ ರಮೇಶ್ ಜಾರಕಿಹೊಳಿ ಅವರ ಪುತ್ರ ಸಂತೋಷ್, ಜನಸಂದಣಿಯ ಮಧ್ಯೆಯೇ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ.
ಉತ್ಸವದ ಆರನೇ ದಿನವಾದ ಶನಿವಾರ ಸಂತೋಷ್ ಜಾರಕಿಹೊಳಿ ಕೂಡ ಭಂಡಾರದ ಓಕುಳಿಯಲ್ಲಿ ಪಾಲ್ಗೊಂಡರು. ಈ ವೇಳೆ ಬಂದೂಕು ಹಿಡಿದುಕೊಂಡು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಇದೇ ವೇಳೆ ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಗೋಕಾಕ್ ನಗರ ಪೊಲೀಸರು ಸಂತೋಷ ಜಾರಕಿಹೊಳಿ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
Next Story





