ಬೆಳಗಾವಿ | ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ

ಬೆಳಗಾವಿ : ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದಾಗ ಗ್ರಾಮಸ್ಥರ ಸಹಾಯದಿಂದ ಪಾರಾದ ಘಟನೆ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದಲ್ಲಿ ಸಂಭವಿಸಿದೆ.
ಪಶ್ಚಿಮಘಟ್ಟ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ. ಆದರೂ ಗೊಡಚಿ ಗ್ರಾಮದಲ್ಲಿ ರಸ್ತೆ ದಾಟುವ ವೇಳೆ ನೀರಿನ ಹೊಳೆ ಬೈಕ್ ಸವಾರನನ್ನು ಎಳೆದುಕೊಂಡು ಹೋಗಲು ಪ್ರಾರಂಭಿಸಿತು.
ಅಪಾಯಕರ ಪರಿಸ್ಥಿತಿಯಲ್ಲಿ ಗ್ರಾಮಸ್ಥರು ತಕ್ಷಣ ಹಗ್ಗದ ಸಹಾಯದಿಂದ ಆತನನ್ನು ರಕ್ಷಿಸಿ ಜೀವ ಉಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದ ರಸ್ತೆ, ಹೊಳೆ, ಸೇತುವೆಗಳು ನದಿಯಂತಾಗಿದ್ದು ಜನರ ಸಂಚಾರಕ್ಕೆ ತೊಂದರೆ ಉಂಟಾಗಿದೆ.
Next Story





