Belagavi | ಪತ್ನಿಯ ಕೊಂದು ಪತಿ ಆತ್ಮಹತ್ಯೆ

ಬೆಳಗಾವಿ : ತಾಲೂಕಿನ ತುರಕರ ಶೀಗಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ, ಬಳಿಕ ತಾನೂ ನೇಣಿಗೆ ಶರಣಾದ ಘಟನೆ ವರದಿಯಾಗಿದೆ.
ಯಲ್ಲವ್ವ ಶಿವಪ್ಪ ಕಂಬಳಿ (43) ಹತ್ಯೆಯಾದವರಾಗಿದ್ದು, ಶಿವಪ್ಪ ಸಣ್ಣಬಸಪ್ಪ ಕಂಬಳಿ (52) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಪತ್ನಿ ತವರು ಮನೆಗೆ ತೆರಳುವ ವಿಚಾರವಾಗಿ ದಂಪತಿಯ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಒಂದು ವಾರದ ಹಿಂದೆ ಯಲ್ಲವ್ವ ಅವರ ತಾಯಿ ನಿಧನರಾಗಿದ್ದು, ಆ ದುಃಖದ ಹಿನ್ನೆಲೆಯಲ್ಲಿ ಯಲ್ಲವ್ವ ಅವರು ತವರು ಮನೆಗೆ ಹೋಗಲು ಶುಕ್ರವಾರ ಸಿದ್ಧತೆ ಮಾಡಿಕೊಂಡಿದ್ದರು. ಈ ವಿಷಯ ತಿಳಿದ ಪತಿ ಶಿವಪ್ಪ ಅವರು ಆಕ್ರೋಶಗೊಂಡು ಪತ್ನಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಕಿತ್ತೂರು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Next Story





