Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಕಬ್ಬಿಗೆ ಸೂಕ್ತ ಬೆಲೆಗೆ ಆಗ್ರಹಿಸಿ...

ಕಬ್ಬಿಗೆ ಸೂಕ್ತ ಬೆಲೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ: ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ13 Oct 2026 8:07 PM IST
share
ಕಬ್ಬಿಗೆ ಸೂಕ್ತ ಬೆಲೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ: ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಆಕ್ರೋಶ

ಬೆಳಗಾವಿ : ಪ್ರತಿ ಟನ್ ಕಬ್ಬಿಗೆ ವೈಜ್ಞಾನಿಕ ಹಾಗೂ ಲಾಭದಾಯಕ ಬೆಲೆ ನಿಗದಿಪಡಿಸಬೇಕು ಹಾಗೂ ಹೊಸದಿಲ್ಲಿಯಲ್ಲಿ ನಡೆದ ಸಭೆ ವಿಫಲಗೊಂಡ ಹಿನ್ನೆಲೆಯಲ್ಲಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ಕಬ್ಬು ಬೆಳೆಗಾರರು ನಡೆಸಿದ ಪ್ರತಿಭಟನೆ ಮಂಗಳವಾರ ತೀವ್ರ ಸ್ವರೂಪ ಪಡೆದುಕೊಂಡಿತು.

ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಸ್ವಾಭಿಮಾನಿ ಶೇತ್ಕರಿ ಸಂಘಟನೆಗಳ ನೇತೃತ್ವದಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಿರೇಬಾಗೇವಾಡಿ ಹಾಗೂ ಹತ್ತರಗಿ ಟೋಲ್ ನಾಕಾ ಬಳಿ ರೈತರು ರಸ್ತೆ ತಡೆ ನಡೆಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹೊಸದಿಲ್ಲಿಯಲ್ಲಿ ಕೇಂದ್ರ ಸರಕಾರದ ಪ್ರತಿನಿಧಿಗಳೊಂದಿಗೆ ನಡೆದ ಸಭೆ ಯಾವುದೇ ನಿರ್ಣಯವಿಲ್ಲದೆ ವಿಫಲಗೊಂಡ ಕಾರಣ, ರಾಜ್ಯಾದ್ಯಂತ ಹೆದ್ದಾರಿ ಬಂದ್‌ಗೆ ಕರೆ ನೀಡಲಾಗಿತ್ತು. ಅದರಂತೆ ಬೆಳಗಾವಿ ಜಿಲ್ಲೆಯ ಪ್ರಮುಖ ಟೋಲ್‌ಗಳ ಬಳಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ರೈತರು, ರೈತ ಮುಖಂಡ ಪ್ರೇಮಚಂದ ಚೌಗಲಾ, ಹಸಿರು ಸೇನೆ ಅಧ್ಯಕ್ಷ ಚೂನಪ್ಪಾ ಪೂಜಾರಿ ಹಾಗೂ ಮಾಜಿ ಸಂಸದ ರಾಜು ಶೆಟ್ಟಿ ಅವರ ನೇತೃತ್ವದಲ್ಲಿ ಧರಣಿ ಆಂದೋಲನ ಕೈಗೊಂಡರು.

ಕೇಂದ್ರ ಸರಕಾರ ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು, ಸಂಪೂರ್ಣ ಎಥೆನಾಲ್ ಖರೀದಿಸಬೇಕು ಹಾಗೂ ಡಾ. ಸ್ವಾಮಿನಾಥನ್ ವರದಿಯನ್ನು ಕಡ್ಡಾಯವಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಕೃಷಿಗೆ ಬಳಸುವ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳು ಮತ್ತು ಕೃಷಿ ಕಾರ್ಮಿಕರ ಕೂಲಿ ವೆಚ್ಚ ಕಳೆದ ಹತ್ತು ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚಾಗಿದ್ದರೂ, ಸಕ್ಕರೆ ಬೆಲೆ ಮಾತ್ರ ಹೆಚ್ಚಾಗದಿರುವುದು ರೈತರನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ ಎಂದು ಮುಖಂಡರು ದೂರಿದರು. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು. ರಾಜ್ಯ ಸರಕಾರದಿಂದ 5,500 ಹಾಗೂ ಕೇಂದ್ರ ಸರಕಕಾರದಿಂದ 1,000 ಸೇರಿ ಪ್ರತಿ ಟನ್ ಕಬ್ಬಿಗೆ ಒಟ್ಟು 6,600 ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳದಲ್ಲಿ ಬಿಸಿಲನ್ನು ಲೆಕ್ಕಿಸದೆ ರೈತರು ರಸ್ತೆ ಮೇಲೆ ಉರುಳಾಡಿ, ಬಾರುಕೋಲು ಹಾಗೂ ಪೊರಕೆ ಹಿಡಿದು ವಿನೂತನವಾಗಿ ಆಕ್ರೋಶ ಹೊರಹಾಕಿದರು. ಹೋರಾಟದ ಸ್ಥಳದಲ್ಲೇ ಮಧ್ಯಾಹ್ನ ಹೆದ್ದಾರಿ ಮೇಲೆ ಕುಳಿತು ಊಟ ಮಾಡುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು. ವಿವಿಧ ಮಠಾಧೀಶರು ಹಾಗೂ ಗಣ್ಯರು ಸ್ಥಳಕ್ಕೆ ಭೇಟಿ ನೀಡಿ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ತಾಲೂಕಿನ ಕೊಗನೊಳ್ಳಿ ಶುಲ್ಕ ವಸೂಲಾತಿ ಕೇಂದ್ರದ ಬಳಿಯೂ ಉಭಯ ರಾಜ್ಯಗಳ ರೈತರು ಪ್ರತಿಭಟನೆ ನಡೆಸಿದ ಕಾರಣ, ಹೆದ್ದಾರಿಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ಡಿವೈಎಸ್ಪಿ ನೇತೃತ್ವದಲ್ಲಿ ನೂರಾರು ಪೊಲೀಸರನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಕೈಬಿಡುವುದಿಲ್ಲ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

Tags

Belagavi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X