Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. Belagavi | ಸುವರ್ಣ ವಿಧಾನಸೌಧದಲ್ಲಿ ರೈತ...

Belagavi | ಸುವರ್ಣ ವಿಧಾನಸೌಧದಲ್ಲಿ ರೈತ ಮುಖಂಡರ ಬಣಗಳ ನಡುವೆ ಹೊಡೆದಾಟ

ಕಬ್ಬಿನ ದರದ ವಿಚಾರವಾಗಿ ಗದ್ದಲ; ತಳ್ಳಾಟ-ನೂಕಾಟ

ವಾರ್ತಾಭಾರತಿವಾರ್ತಾಭಾರತಿ26 Oct 2026 5:27 PM IST
share
Belagavi | ಸುವರ್ಣ ವಿಧಾನಸೌಧದಲ್ಲಿ ರೈತ ಮುಖಂಡರ ಬಣಗಳ ನಡುವೆ ಹೊಡೆದಾಟ

ಬೆಳಗಾವಿ : ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ನಗರದ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ರೈತ ಮುಖಂಡರ ಸಭೆಯಲ್ಲಿ ರಾಜ್ಯ ರೈತ ಸಂಘದ ಚೂನಪ್ಪ ಪೂಜೇರಿ ಬಣ ಹಾಗೂ ಕೋಡಿಹಳ್ಳಿ ಚಂದ್ರಶೇಖರ ಬಣದ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದು, ಅದು ಹೊಡೆದಾಟಕ್ಕೆ ತಿರುಗಿತು. ಸಭಾಂಗಣದಲ್ಲಿ ನಡೆದ ಗದ್ದಲದಿಂದ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ರೈತ ಮುಖಂಡರೊಂದಿಗೆ ಪ್ರತ್ಯೇಕ ಸಭೆಗಳನ್ನು ಆಯೋಜಿಸಲಾಗಿತ್ತು. ಮಧ್ಯಾಹ್ನ ಕಾರ್ಖಾನೆ ಮಾಲೀಕರ ಸಭೆ ಮುಗಿಸಿದ ಮುಖ್ಯಮಂತ್ರಿ ಯಲ್ಲಮ್ಮನಗುಡ್ಡಕ್ಕೆ ತೆರಳಿದ್ದರು. ಸಂಜೆ 4 ಗಂಟೆ ಸುಮಾರಿಗೆ ರೈತ ಮುಖಂಡರು ಸಭಾಂಗಣಕ್ಕೆ ಆಗಮಿಸಿದ್ದರು. ಮುಖ್ಯಮಂತ್ರಿ ಇನ್ನೂ ಸಭೆಗೆ ಬರುವ ಮುನ್ನವೇ ರೈತ ಮುಖಂಡರ ನಡುವೆ ಮಾತಿನ ಚಕಮಕಿ ಆರಂಭವಾಯಿತು.

ಕೋಡಿಹಳ್ಳಿ ಚಂದ್ರಶೇಖರ ಬಣದ ಮುಖಂಡ, ಕಲಬುರಗಿಯ ಮಹಾಂತೇಶ ಜಮಾದಾರ ಕಬ್ಬಿನ ಬೆಲೆ ಸೇರಿದಂತೆ ರೈತರ ಬೇಡಿಕೆಗಳ ಕುರಿತು ಮಾತನಾಡುತ್ತಿದ್ದರು. ಈ ವೇಳೆ ಅವರ ಮಾತು ಸರಿಯಿಲ್ಲ ಎಂದು ಆಕ್ಷೇಪಿಸಿದ ಚೂನಪ್ಪ ಪೂಜೇರಿ ಬಣದ ಕೆಲವರು ಮೈಕ್ ಕಿತ್ತುಕೊಂಡರು ಎನ್ನಲಾಗಿದೆ. ಇದರಿಂದ ಎರಡೂ ಬಣಗಳ ನಡುವೆ ವಾಗ್ವಾದ ತೀವ್ರಗೊಂಡಿತು.

ಮಧ್ಯಪ್ರವೇಶಿಸಿದ ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜೇರಿ, ಎಲ್ಲರನ್ನೂ ಸಮಾಧಾನಪಡಿಸಲು ಯತ್ನಿಸಿದರು. “ನಾವು ಹೋರಾಟ ನಡೆಸಿ ಈ ಸಭೆ ನಡೆಯುವಂತೆ ಮಾಡಿದ್ದೇವೆ. ನಮಗೂ ಮಾತನಾಡುವ ಹಕ್ಕಿದೆ. ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ದರ ನಿಗದಿಪಡಿಸುವಂತೆ ಒತ್ತಾಯಿಸಲಾಗುವುದು” ಎಂದು ಹೇಳುತ್ತಿದ್ದಂತೆ ಕೋಡಿಹಳ್ಳಿ ಬಣದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.

“ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ದರಕ್ಕಾಗಿ ಹೋರಾಟ ನಡೆಸಿ ಈಗ 4,500 ರೂಪಾಯಿ ಎಂದು ಹೇಳುತ್ತಿರುವುದೇಕೆ?” ಎಂದು ಅವರು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಚೂನಪ್ಪ ಪೂಜೇರಿ, “4,500 ರೂಪಾಯಿ ಕಬ್ಬಿನ ದರವಾಗಿದ್ದು, ಉಳಿದ 1,000 ರೂಪಾಯಿ ರಾಜ್ಯ ಸರ್ಕಾರದ ಪ್ರೋತ್ಸಾಹಧನವಾಗಿದೆ. ಎರಡನ್ನೂ ಸೇರಿಸಿದರೆ ಒಟ್ಟು 5,500 ರೂಪಾಯಿ ಆಗುತ್ತದೆ” ಎಂದು ಸ್ಪಷ್ಟಪಡಿಸಲು ಯತ್ನಿಸಿದರು.

ಆದರೆ, ಎರಡೂ ಬಣಗಳ ಮುಖಂಡರು ಜೋರಾಗಿ ಮಾತನಾಡತೊಡಗಿದ್ದರಿಂದ ಸಭಾಂಗಣದಲ್ಲಿ ಯಾರ ಮಾತೂ ಸ್ಪಷ್ಟವಾಗಿ ಕೇಳದ ಪರಿಸ್ಥಿತಿ ನಿರ್ಮಾಣವಾಯಿತು. ಗದ್ದಲದ ನಡುವೆ ಚೂನಪ್ಪ ಪೂಜೇರಿ ಬಣದ ಕೆಲವರು ನೀರಿನ ಗಾಜಿನ ಲೋಟಗಳನ್ನು ಎದುರಾಳಿ ಬಣದತ್ತ ಎಸೆದರು ಎನ್ನಲಾಗಿದೆ. ಅವು ತಗುಲಿ ಇಬ್ಬರಿಗೆ ಎದೆಭಾಗದಲ್ಲಿ ಪೆಟ್ಟಾಗಿದೆ ಎಂದು ತಿಳಿದುಬಂದಿದೆ. ಬಳಿಕ ಕೋಡಿಹಳ್ಳಿ ಬಣದವರೂ ತಳ್ಳಾಟ ಮತ್ತು ನೂಕಾಟದಲ್ಲಿ ತೊಡಗಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಅವರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಲು ಹಲವು ಬಾರಿ ಮನವಿ ಮಾಡಿದರೂ ಗದ್ದಲ ನಿಯಂತ್ರಣಕ್ಕೆ ಬರಲಿಲ್ಲ. ಕೊನೆಗೆ ಮಧ್ಯಪ್ರವೇಶಿಸಿದ ಪೊಲೀಸರು ಗದ್ದಲದಲ್ಲಿ ತೊಡಗಿದ್ದವರನ್ನು ಸಭಾಂಗಣದಿಂದ ಹೊರಗೆ ಕರೆದೊಯ್ದರು.

ಕಬ್ಬಿನ ಬೆಲೆ ನಿಗದಿ ಹಾಗೂ ರೈತರ ಬೇಡಿಕೆಗಳ ಕುರಿತು ಚರ್ಚೆ ನಡೆಯಬೇಕಿದ್ದ ಸಭೆ, ಮುಖಂಡರ ನಡುವಿನ ವಾಗ್ವಾದ ಮತ್ತು ಹೊಡೆದಾಟದಿಂದಾಗಿ ಕೆಲಕಾಲ ಅಸ್ತವ್ಯಸ್ತಗೊಂಡಿತು.

Tags

Belagavifarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X