Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ ಜಿಪಂ ಸಿಇಒ ನಿವಾಸದಲ್ಲಿ ಗೋಪ್ಯ...

ಬೆಳಗಾವಿ ಜಿಪಂ ಸಿಇಒ ನಿವಾಸದಲ್ಲಿ ಗೋಪ್ಯ ಸಭೆ ಆರೋಪ; ಆಕ್ರೋಶಿತ ಕಬ್ಬು ಬೆಳೆಗಾರರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Nov 2026 11:58 PM IST
share
ಬೆಳಗಾವಿ ಜಿಪಂ ಸಿಇಒ ನಿವಾಸದಲ್ಲಿ ಗೋಪ್ಯ ಸಭೆ ಆರೋಪ; ಆಕ್ರೋಶಿತ ಕಬ್ಬು ಬೆಳೆಗಾರರಿಂದ ಪ್ರತಿಭಟನೆ

ಬೆಳಗಾವಿ : ಕಬ್ಬಿನ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದಿದ್ದ ಸಭೆ, ರೈತ ಮುಖಂಡರ ನಡುವಿನ ಪ್ರತಿಷ್ಠೆಯ ಕಾಳಗದಿಂದಾಗಿ ಗೊಂದಲದ ಗೂಡಾಯಿತು.

ಸಭೆಯಲ್ಲಿ ಯಾರು ಪಾಲ್ಗೊಳ್ಳಬೇಕು ಎಂಬ ವಿಚಾರವೇ ದೊಡ್ಡ ವಿವಾದವಾಗಿ ಮಾರ್ಪಟ್ಟು, ದಿನವಿಡೀ ವಾಗ್ವಾದ, ಘೋಷಣೆ ಹಾಗೂ ಪ್ರತಿಭಟನೆಗಳಿಗೆ ವೇದಿಕೆಯಾಯಿತು. ಮತ್ತೊಂದೆಡೆ, ಸಿಇಒ ನಿವಾಸದಲ್ಲಿ ಗೋಪ್ಯ ಸಭೆ ನಡೆಸಲಾಗಿದೆ ಎಂಬ ಮಾಹಿತಿ ಹರಡುತ್ತಿದ್ದಂತೆಯೇ ಆಕ್ರೋಶಗೊಂಡ ರೈತರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಮಧ್ಯಾಹ್ನ 3 ಗಂಟೆಗೆ ನಿಗದಿಯಾಗಿದ್ದ ಸಭೆ ಸಂಜೆ 6 ಗಂಟೆಯಾದರೂ ಆರಂಭವಾಗಲಿಲ್ಲ. ಸಭೆಯಲ್ಲಿ ಪಾಲ್ಗೊಳ್ಳುವ ರೈತ ಮುಖಂಡರ ಆಯ್ಕೆ ವಿಚಾರವಾಗಿ ಸಂಘಟನೆಗಳ ವಿವಿಧ ಬಣಗಳ ನಡುವೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಯೇ ಮುಖಂಡರು ಪರಸ್ಪರ ಏರುಧ್ವನಿಯಲ್ಲಿ ವಾಗ್ವಾದ ನಡೆಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಭಾಂಗಣದಿಂದ ಹೊರನಡೆದರು. ಜಿಲ್ಲೆಯ 29 ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು ಹಾಗೂ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಪ್ರತಿನಿಧಿಗಳು ನಡೆದ ಬೆಳವಣಿಗೆಗಳನ್ನು ಮೂಕಪ್ರೇಕ್ಷಕರಂತೆ ವೀಕ್ಷಿಸುವಂತಾಯಿತು.

ಕಬ್ಬಿಗೆ ಪ್ರತೀ ಟನ್‌ಗೆ 4,500 ರೂ. ದರ ನಿಗದಿಪಡಿಸಬೇಕು, ರಾಜ್ಯ ಸರಕಾರ 1,000 ರೂ. ಪ್ರೋತ್ಸಾಹಧನ ಘೋಷಿಸಬೇಕು ಹಾಗೂ ಕೇಂದ್ರ ಸರಕಾರ ಸಕ್ಕರೆಯ ಕನಿಷ್ಠ ಮಾರಾಟ ದರವನ್ನು 60 ರೂಪಾಯಿಗೆ ಹೆಚ್ಚಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ರೈತರು ಮುಂದಿಟ್ಟಿದ್ದಾರೆ. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.4ರಂದು ಜೈಲ್ ಭರೋ ಚಳವಳಿಗೂ ಕರೆ ನೀಡಿದ್ದಾರೆ. ಇದರ ಭಾಗವಾಗಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ಜಾರಕಿಹೊಳಿ ಅವರ ನಿವಾಸದ ಎದುರು ರೈತರು ಧರಣಿ ನಡೆಸಿದ್ದರು. ಈ ಸಂದರ್ಭದಲ್ಲಿ ಮಂಗಳವಾರ ಸಭೆ ನಡೆಸಿ ಚರ್ಚಿಸುವುದಾಗಿ ಸಚಿವರು ತಿಳಿಸಿದ್ದರು.

ಅದರಂತೆ ಮಂಗಳವಾರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪಾಲ್ಗೊಳ್ಳಬೇಕಾದವರ ಕುರಿತು ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್ ಅವರು 11 ರೈತ ಮುಖಂಡರ ಹೆಸರಿನ ಪಟ್ಟಿಯನ್ನು ಸಿದ್ಧಪಡಿಸಿದ್ದರು. ಆದರೆ, ಈ ಆಯ್ಕೆ ಇತರ ಸಂಘಟನೆಗಳು ಮತ್ತು ಬಣಗಳ ಅಸಮಾಧಾನಕ್ಕೆ ಕಾರಣವಾಯಿತು.

Tags

Belagavi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X