Belagavi | ನೀರು ತರಲು ಹೋದ ವೇಳೆ ಬಾವಿಗೆ ಬಿದ್ದು ಯುವಕ ಮೃತ್ಯು

ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಗಳತಗಾ ಗ್ರಾಮದಲ್ಲಿ ನೀರು ತರಲು ಹೋದ ವೇಳೆ ಕಾಲು ಜಾರಿ ಬಾವಿಗೆ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಸುನೀಲ್ ಬಾಳಾಸಾಹೇಬ ತಳಕರ (21) ಎಂದು ಗುರುತಿಸಲಾಗಿದೆ. ಅವರು ಕಬ್ಬು ಕಟಾವು ಮಾಡುವ ಗುಂಪಿನಲ್ಲಿ ಕೆಲಸ ಮಾಡುತ್ತಿದ್ದು, ಕೆಲಸದ ವೇಳೆ ಸಹಚರರಿಗೆ ನೀರು ತರಲು ತೆರಳಿದಾಗ ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸದಲಗಾ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಬಾವಿಯಿಂದ ಮೃತದೇಹವನ್ನು ಹೊರತೆಗೆದರು.
ಈ ಘಟನೆ ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story





