Belagavi | ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ಇಬ್ಬರ ಮೃತ್ಯು

ಬೆಳಗಾವಿ : ಗೋವಾದಿಂದ ಬೆಳಗಾವಿಗೆ ಬೈಕ್ನಲ್ಲಿ ಬರುತ್ತಿದ್ದ ವಡಗಾಂವ್ ಹಾಗೂ ಶಹಾಪುರದ ಇಬ್ಬರು ಯುವಕರು ಚೋರ್ಲಾ ಘಾಟ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ಬೆಳಗಾವಿಯ ವಡಗಾಂವ್ ನಿವಾಸಿ ನಿರಂಜನ ಉಮೇಶ ಭಡಾಯೆ (25) ಹಾಗೂ ಶಹಾಪುರ ನಿವಾಸಿ ಸಾಹಿಲ್ ಪ್ರವೀಣ ಕಣಗೋಳ ಎಂದು ಗುರುತಿಸಲಾಗಿದೆ.
ರವಿವಾರ ಸಂಜೆ ಸುಮಾರು 5 ಗಂಟೆಗೆ ಚೋರ್ಲಾ ಘಾಟ್ ಮಾರ್ಗವಾಗಿ ಗೋವಾದಿಂದ ಬೆಳಗಾವಿಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ಇಬ್ಬರೂ ಸವಾರರು ರಸ್ತೆ ಪಕ್ಕದ ಆಳವಾದ ಕಂದಕಕ್ಕೆ ಎಸೆಯಲ್ಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಇಬ್ಬರ ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಾಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
Next Story




