Belagavi | ನವಜಾತ ಶಿಶುವಿನ ಮೃತದೇಹ ಪತ್ತೆ

ಸಾಂದರ್ಭಿಕ ಚಿತ್ರ
ಬೆಳಗಾವಿ : ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನವಜಾತ ಶಿಶುವಿನ ಮೃತದೇಹ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಬೀದಿ ನಾಯಿಗಳು ಮಗುವಿನ ದೇಹವನ್ನು ಎಳೆದಾಡಿರುವ ಘಟನೆ ವರದಿಯಾಗಿದೆ.
ಅಥಣಿ ಪಟ್ಟಣದ ಕಾಗವಾಡ ರಸ್ತೆಯ ಪಕ್ಕದ ನಿರ್ಜನ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ರಸ್ತೆ ಬದಿಯಲ್ಲಿ ಬೀದಿ ನಾಯಿಗಳು ಯಾವುದೋ ವಸ್ತುವನ್ನು ಎಳೆದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರಿಗೆ ಅನುಮಾನ ಮೂಡಿದೆ. ಕೂಡಲೇ ಹತ್ತಿರ ಹೋಗಿ ಪರಿಶೀಲಿಸಿದಾಗ, ನಾಯಿಗಳು ನವಜಾತ ಶಿಶುವಿನ ಮೃತದೇಹವನ್ನು ಎಳೆದಾಡುತ್ತಿರುವುದು ಕಂಡುಬಂದಿದೆ. ಮಗುವಿನ ತಲೆ ಹಾಗೂ ಒಂದು ಕಾಲು ಕಾಣಿಸಿಕೊಂಡಿದ್ದು, ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಸ್ಥಳೀಯರು ತಕ್ಷಣ ಅಥಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಲಕ್ಕಪ್ಪ ಅಗ್ನಿ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದು, ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ.
Next Story




