ಬೆಳಗಾವಿ ಅಗ್ನಿ ಅವಘಡ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ-ಮಗ ಮೃತ್ಯು

ಬೆಳಗಾವಿ : ಇಲ್ಲಿನ ಚವಾಟ ಗಲ್ಲಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮನೆಯ ಮಾಲೀಕ ಗಜಾನನ ರಾಜಾರಾಮ ಧಮೋನೆ (65) ಹಾಗೂ ಅವರ ಪುತ್ರ ರೋಷನ್ (21) ಬುಧವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಗಜಾನನ ಅವರ ಪತ್ನಿ ಶಾರದಾ (45), ಪುತ್ರಿಯರಾದ ಪ್ರಿಯಾ (28), ಗಂಗಾ (25) ಹಾಗೂ ಸಹೋದರಿ ಭಾರತಿ (50) ಸೋಮವಾರ ರಾತ್ರಿ ಅಗ್ನಿ ಅವಘಡದಲ್ಲಿ ಮೃತಪಟ್ಟಿದ್ದರು. ಶೇ 90ಕ್ಕೂ ಹೆಚ್ಚು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಗಜಾನನ ಹಾಗೂ ರೋಷನ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಎರಡು ದಿನಗಳ ಕಾಲ ಜೀವನ್ಮರಣದ ನಡುವೆ ಹೋರಾಡಿದ ತಂದೆ-ಮಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಅಥವಾ ಹಳೆಯ ಫ್ರಿಜ್‌ನಲ್ಲಿನ ದೋಷ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಈ ಕುರಿತು ತನಿಖೆ ಮುಂದುವರಿದಿದೆ.
Next Story




