Belagavi | ಭೀಕರ ರಸ್ತೆ ಅಪಘಾತ: ಬುಲೆರೋ ಚಾಲಕ ಸ್ಥಳದಲ್ಲೇ ಮೃತ್ಯು

ಸಾಂದರ್ಭಿಕ ಚಿತ್ರ
ಬೆಳಗಾವಿ: ಬುಲೆರೋ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬುಲೆರೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಅಥಣಿ–ತಂಗಡಿ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಅಥಣಿ ಪಟ್ಟಣದ ನಿವಾಸಿ ಶಂಕರ ಪ್ರಕಾಶ ಪೂಜಾರಿ (32) ಎಂದು ಗುರುತಿಸಲಾಗಿದೆ. ಬುಲೆರೋ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಢಿಕ್ಕಿಯ ರಭಸಕ್ಕೆ ಬುಲೆರೋ ಸಂಪೂರ್ಣ ನಜ್ಜುಗುಜ್ಜಾಗಿದೆ. ವಾಹನ ಚಲಾಯಿಸುತ್ತಿದ್ದ ಶಂಕರ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story




