Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 5...

ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 5 ವರ್ಷಗಳ ಸ್ಟ್ರಾಟೆಜಿಕ್ ಪ್ಲಾನ್ ತಯಾರಿಗೆ ಪ್ರಸ್ತಾವ

ವಾರ್ತಾಭಾರತಿವಾರ್ತಾಭಾರತಿ17 Dec 2025 12:43 AM IST
share
ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 5 ವರ್ಷಗಳ ಸ್ಟ್ರಾಟೆಜಿಕ್ ಪ್ಲಾನ್ ತಯಾರಿಗೆ ಪ್ರಸ್ತಾವ

ಬೆಳಗಾವಿ : ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 5 ವರ್ಷಗಳ ಸ್ಟ್ರಾಟೆಜಿಕ್ ಪ್ಲಾನ್ ತಯಾರಿಸುವ ಪ್ರಸ್ತಾವವು ಪರಿಶೀಲನೆಯಲ್ಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಮಂಗಳವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಡಾ.ಡಿ.ತಿಮ್ಮಯ್ಯ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾನವ ಪ್ರಾಣಹಾನಿಗೆ ಕಾರಣವಾದ ಹುಲಿ ಹಾಗೂ ಆನೆಯನ್ನು ನಿರ್ದಿಷ್ಟವಾಗಿ ಗುರುತಿಸಿ ಸೆರಹಿಡಿಯಲಾಗಿದೆ ಎಂದರು.

ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಳ್ಳಬೇಟೆ ಶಿಬಿರಗಳ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ ಸಂಘರ್ಷ ಸಂಭವಿಸುತ್ತಿರುವ ಅರಣ್ಯದಂಚಿನ ಗಡಿರೇಖೆಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ. ಶಿಬಿರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸಂಘರ್ಷವಿರುವ ವಲಯಗಳಲ್ಲಿ ನಿರಂತರವಾಗಿ ಮುಂದಿನ ಮೂರು ತಿಂಗಳವರೆಗೆ ಗಸ್ತು ನಡೆಸಿ, ಮಾನವ ವನ್ಯಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಕ್ರಮವಹಿಸಲಾಗಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.

ಮಾನವ-ವನ್ಯಜೀವಿ ಸಂಘರ್ಷ ಸಮಸ್ಯೆ ಇರುವ ಪ್ರತಿಯೊಂದು ವನ್ಯಜೀವಿ ವಲಯಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಉಂಟಾಗುವ ಸಂದರ್ಭದಲ್ಲಿ ತಕ್ಷಣದ ಪ್ರತಿಕ್ರಿಯೆಗಾಗಿ ಕ್ಷಿಪ್ರಸ್ಪಂದನ ವಾಹನ ಹಾಗೂ ಡೋನ್ ಒಳಗೊಂಡಂತೆ ಇತರೆ ಉಪಕರಣಗಳೊಂದಿಗೆ ಒಂದು ಕ್ಷಿಪ್ರಸ್ಪಂದನ ತಂಡವನ್ನು ಪಾಳಿ ಆಧಾರದ ಮೇಲೆ ರಚಿಸಿ, ಈ ಕ್ಷಿಪ್ರಸ್ಪಂದನ ತಂಡಕ್ಕೆ ಸಿಬ್ಬಂದಿಗಳನ್ನು ಪ್ರಸ್ತುತ ಅಸ್ತಿತ್ವದಲ್ಲಿರುವ ಆನೆ ಕಾರ್ಯಪಡೆ, ಕ್ಷಿಪ್ರ ಸ್ಪಂದನ ತಂಡ, ವಿಶೇಷ ಹುಲಿ ಸಂರಕ್ಷಣಾ ದಳದಿಂದ ನಿಯೋಜಿಸಲಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಲಭ್ಯವಿರುವ ಕ್ಯಾಮರಾ ಟ್ರಾಪ್ಸ್‌ ಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಅರಣ್ಯ ಪ್ರದೇಶದ ಅಂಚಿನಲ್ಲಿರುವ ಕಾನಫ್ಲಿಕ್ಟ್ ಝೋನ್‍ನಲ್ಲಿ ಅಳವಡಿಸಿ ಪ್ರಾಣಿಗಳ ಚಲನವಲನಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಈಶ್ವರ್ ಖಂಡ್ರೆ ಮಾಹಿತಿ ನೀಡಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X