Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ವಿಧಾನಸಭೆಯಲ್ಲಿ 5 ಪ್ರಮುಖ ವಿಧೇಯಕಗಳ...

ವಿಧಾನಸಭೆಯಲ್ಲಿ 5 ಪ್ರಮುಖ ವಿಧೇಯಕಗಳ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ18 Dec 2025 12:08 AM IST
share
ವಿಧಾನಸಭೆಯಲ್ಲಿ 5 ಪ್ರಮುಖ ವಿಧೇಯಕಗಳ ಅಂಗೀಕಾರ

ಬೆಳಗಾವಿ : 2025ನೇ ಸಾಲಿನ ಔಷಧ ಮತ್ತು ಪ್ರಸಾಧನ ಸಾಮಗ್ರಿ (ಕರ್ನಾಟಕ ತಿದ್ದುಪಡಿ) ವಿಧೇಯಕ ಸೇರಿದಂತೆ ಪ್ರಮುಖ 5 ವಿಧೇಯಕಗಳಿಗೆ ಅಂಗೀಕಾರ ದೊರೆಯಿತು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಬುಧವಾರ ವಿಧಾನಸಭೆ ಕಲಾಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಡಿಸಿದ 2025ನೇ ಸಾಲಿನ ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧೀಕಾರ (ತಿದ್ದುಪಡಿ) ವಿಧೇಯಕ ಮಂಡಿಸಿದರು.

ಬಳಿಕ ಈ ಬಗ್ಗೆ ವಿವರಣೆ ನೀಡಿದ ಅವರು, 2022 ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ಅಧಿನಿಯಮದಲ್ಲಿರುವ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ಮತ್ತು ಕಾರ್ಯಕಾರಿ ಸಮಿತಿಯನ್ನು ಪರಿಷ್ಕರಿಸಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹಾಪೌರರು ಮತ್ತು ಆಯುಕ್ತರನ್ನು ಮತ್ತು 2024ರ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮದ ಅನುಷ್ಠಾನದ ತತ್ಪರಿಣಾಮವಾಗಿ ಗ್ರೇಟರ್ ಬೆಂಗಳೂರು ಪ್ರದೇಶದ ನಗರ ಪಾಲಿಕೆಗಳನ್ನು ಸೇರಿಸಲು ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದರು.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪರವಾಗಿ ಕಾನೂನು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು 2025ನೇ ಸಾಲಿನ ಬಾಂಬೆ ಸಾರ್ವಜನಿಕ ನ್ಯಾಸ(ಕರ್ನಾಟಕ ತಿದ್ದುಪಡಿ) ವಿಧೇಯಕ ಮತ್ತು 2025ನೇ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ವಿಧೇಯಕಗಳು ಹಾಗೂ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಪರವಾಗಿ 2025ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಎರಡನೇ ತಿದ್ದುಪಡಿ ವಿಧೇಯಕ ಮಂಡಿಸಿದರು.

ಬಳಿಕ ಈ ಬಗ್ಗೆ ವಿವರಣೆ ನೀಡಿದ ಅವರು, 1950ರ ಬಾಂಬೆ ಸಾರ್ವಜನಿಕ ನ್ಯಾಸ ಅಧಿನಿಯಮಕ್ಕೆ ತಿದ್ದುಪಡಿ ತಂದು ಬೆಳಗಾವಿ ಪ್ರಾದೇಶಿಕ ಆಯುಕ್ತರನ್ನು ಧರ್ಮಾದಾಯ ಆಯುಕ್ತರನ್ನಾಗಿ, ಜಿಲ್ಲಾಧಿಕಾರಿಯನ್ನು ಜಂಟಿ ಧರ್ಮಾದಾಯ ಆಯುಕ್ತರನ್ನಾಗಿ ಹಾಗೂ ಸಂಬಂಧಪಟ್ಟ ಉಪವಿಭಾಗದ ಉಪವಿಭಾಗಾಧಿಕಾರಿಯನ್ನು ಉಪ ಧರ್ಮಾದಾಯ ಆಯುಕ್ತರನ್ನಾಗಿ ಹಾಗೂ ಸಂಬಂಧಪಟ್ಟ ತಹಶೀಲ್ದಾರನ್ನು ಸಹಾಯಕ ಧರ್ಮಾದಾಯ ಆಯುಕ್ತರನ್ನಾಗಿ ಪದನಾಮಿಸಲು ತಿದ್ದುಪಡಿ ತರಲಾಗಿದೆ ಎಂದರು.

2025ನೇ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರಕ್ಕೆ ವಾಹನಗಳ ನೋಂದಣಿ ಮಾಡುವ ಸಮಯದಲ್ಲಿ ಒಂದು ಬಾರಿಯ ಸೆಸ್ ಅನ್ನು ಹೆಚ್ಚಿನ ಮಿತಿಯಲ್ಲಿ ವಿಧಿಸುವುದನ್ನು ಮತ್ತು ಸಂಗ್ರಹಿಸುವುದನ್ನು ಬಿಟ್ಟುಬಿಡುವುದಕ್ಕಾಗಿ ತಿದ್ದುಪಡಿ ತರಲಾಗಿದೆ.

2025ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನಿರ್ದೇಶಕರು, ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಇಲಾಖೆ ಮತ್ತು ಮುಖ್ಯ ನಗರ ಯೋಜಕರನ್ನು ಸದಸ್ಯರನ್ನಾಗಿ ನೇಮಿಸಲು ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, 2025ನೇ ಸಾಲಿನ ಔಷಧ ಮತ್ತು ಪ್ರಸಾಧನ ಸಾಮಗ್ರಿ ಕರ್ನಾಟಕ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.

ಬಳಿಕ ಈ ಬಗ್ಗೆ ವಿವರಣೆ ನೀಡಿದ ಅವರು, 1940ರ ಔಷಧ ಮತ್ತು ಪ್ರಸಾಧನ ಸಾಮಗ್ರಿ ಕೇಂದ್ರ ಅಧಿನಿಯಮಕ್ಕೆ ಕರ್ನಾಟಕ ರಾಜ್ಯಕ್ಕೆ ಅನ್ವಯವಾಗುವಂತೆ, ಕೇಂದ್ರ ಸರಕಾರದ ಪೂರ್ವಾನುಮೋದನೆಯೊಂದಿಗೆ ರಾಜ್ಯದಲ್ಲಿ ಕೇಂದ್ರ ಔಷಧಗಳ ಪ್ರಯೋಗಾಲಯ ಸ್ಥಾಪಿಸಿ, ಅದರ ನಿರ್ದೇಶಕರ ಪ್ರಕಾರ್ಯಗಳನ್ನು ಅನುಕ್ರಮವಾಗಿ ರಾಜ್ಯ ಸರಕಾರ ನಿರ್ಧಿಷ್ಟ ಪಡಿಸಬಹುದಾದ ಪ್ರಾಧಿಕಾರ ಮತ್ತು ಅಧಿಕಾರಿ ನಿರ್ವಹಿಸಲು ಅಧಿಕಾರ ನೀಡಲು ತಿದ್ದುಪಡಿ ತರಲಾಗಿದೆ.

ಇದರೊಂದಿಗೆ ಕಲಬೆರೆಕೆ ಔಷಧಗಳ ಪ್ರಕರಣಗಳಲ್ಲಿ ಕಲಬೆರೆಕೆ ಔಷಧಗಳನ್ನು ಯಾರಿಂದ ವಶಪಡಿಸಿಕೊಳ್ಳಲಾಗಿದೆಯೋ, ಅವರೇ ಕಲಬೆರಕೆ ವಸ್ತುಗಳ ತಯಾರಕರು ಯಾರೆಂದು ಹಾಗೂ ತಾವು ತಯಾರಿಸಿಲ್ಲ ಎನ್ನುವ ರುಜುವಾತುಪಡಿಸುವ ಭಾರವನ್ನು ತಿದ್ದುಪಡಿ ವಿಧೇಯಕದಲ್ಲಿ ತರಲಾಗಿದೆ. ಪ್ರಕರಣ 30ರ ಅಡಿ ದಂಡನೆಗಳನ್ನು ಜೀವಾವಧಿ ಕಾರಾವಾಸಕ್ಕೆ ಹೆಚ್ಚಿಸಲು ಮತ್ತು ಕಲಬೆರಕೆ ಅಪರಾಧಗಳನ್ನು ಜಾಮೀನು ರಹಿತ ಪ್ರಕರಣಗಳೆಂದು ಪರಿಗಣಿಸಲು ಹಾಗೂ ಇತರ ನಿಯಮಗಳನ್ನು ರಚಿಸಲು ತಿದ್ದುಪಡಿಯನ್ನು ವಿಧೇಯಕದಲ್ಲಿ ತರಲಾಗಿದೆ ಎಂದು ಸಚಿವರು ಹೇಳಿದರು.

ಆನಂತರ, ಚರ್ಚೆಯ ಬಳಿಕ ವಿಧಾನಸಭೆಯಲ್ಲಿ 5 ತಿದ್ದುಪಡಿ ವಿಧೇಯಕಗಳಿಗೆ ಅನುಮೋದಿಸಿ ಅಂಗೀಕಾರ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X