Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ...

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ18 Dec 2025 4:42 PM IST
share
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಳಗಾವಿ : ಮಾನಸಿಕ ಆರೋಗ್ಯ ಸಂಸ್ಥೆಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆಯ ಪರಿಭಾಷೆಯೊಳಗೆ ಸೇರಿಸಲು ಹಾಗೂ ಇತರೆ ವೈದ್ಯಕೀಯ ಸಂಸ್ಥೆಗಳ ನೊಂದಣಿಯನ್ನು ಸರಳಗೊಳಿಸುವ ಉದ್ದೇಶದಿಂದ ರೂಪಿಸಲಾದ 2025ನೆ ಸಾಲಿನ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರಕಿತು.

ಗುರುವಾರ ವಿಧಾನಸಭೆಯ ಶಾಸನ ರಚನೆ ಕಲಾಪದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಬಳಿಕ ವಿವರಣೆ ನೀಡಿದ ಅವರು, ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ಅನ್ನು ತಿದ್ದುಪಡಿ ಮಾಡಲು ಉದ್ದೇಶಿಸಿದ್ದು, ಪ್ರಸ್ತುತ ಖಾಸಗಿ ವೈದ್ಯಕೀಯ ಸಂಸ್ಥೆಗಳು ಈ ಅಧಿನಿಯಮದಡಿ ಸೇರ್ಪಡೆಗೊಂಡಿರಲಿಲ್ಲ, ಇದರಿಂದಾಗಿ ಕೆಲವು ನಿಯಮಗಳನ್ನು ಪಾಲಿಸುವುದರಲ್ಲಿ ತೊಡಕಿತ್ತು. ಹೀಗಾಗಿ ಮಾನಸಿಕ ಆರೋಗ್ಯ ಸಂಸ್ಥೆಗಳನ್ನೂ ಕೂಡ ಅಧಿನಿಯಮದಡಿ ಖಾಸಗಿ ವೈದ್ಯಕೀಯ ಸಂಸ್ಥೆಯ ಪರಿಭಾಷೆಯೊಳಗೆ ಸೇರ್ಪಡೆಗೊಳಿಸಲಾಗುತ್ತಿದೆ.

ಅಲ್ಲದೆ, ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಕೆಪಿಎಂಇ ಸಮಿತಿಯಡಿ ನೊಂದಣಿ ಮತ್ತು ಪರವಾನಗಿ ಪಡೆಯುವ ನಿಟ್ಟಿನಲ್ಲಿ ವಿಳಂಬವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದ್ದವು. ಹೀಗಾಗಿ ತಾತ್ಕಾಲಿಕ ನೊಂದಣಿ ಪ್ರಮಾಣ ಪತ್ರ ಮಂಜೂರು ಮಾಡಲು ಅಥವಾ ನವೀಕರಣ ಮಾಡುವುದು ಸೇರಿದಂತೆ ವಿವಿಧ ಪ್ರಕ್ರಿಯೆಗಳ ಸರಳೀಕರಣಕ್ಕಾಗಿ ಈ ಅಧಿನಿಯಮಕ್ಕೆ ತಿದ್ದುಪಡಿ ತರಲಾಗುತ್ತಿದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಮತ್ತು ಕುಂದುಕೊರತೆ ಪರಿಹಾರ ಪ್ರಾಧಿಕಾರಕ್ಕೆ ನಾಮನಿರ್ದೇಶನ ಮಾಡಲು ವಿಧೇಯಕದಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.

ಖಾಸಗಿ ಕ್ಲಿನಿಕ್‍ಗಳಿಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣೆ ಪತ್ರ ನೀಡುವುದನ್ನು ಕಡ್ಡಾಯಗೊಳಿಸಿದ್ದು, ಇದರಿಂದ ಸಣ್ಣ ಪುಟ್ಟ ಖಾಸಗಿ ಕ್ಲಿನಿಕ್‍ಗಳಿಗೂ ತೊಂದರೆಯಾಗುತ್ತಿದೆ. ಇದನ್ನು ಸಡಿಲಗೊಳಿಸುವಂತೆ ಸದಸ್ಯರಾದ ಡಾ.ಶಿವರಾಜ್ ಪಾಟೀಲ್, ಡಾ.ಶ್ರೀನಿವಾಸ್ ಸೇರಿದಂತೆ ಹಲವರು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಆಸ್ಪತ್ರೆ ಸೇರಿದಂತೆ ವಿವಿಧ ಬಗೆಯ ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿ ಆಕಸ್ಮಿಕದಿಂದ ಜೀವ ಹಾನಿ ಅಥವಾ ಆಸ್ತಿ ಹಾನಿಯಾಗದಂತೆ ತಡೆಗಟ್ಟುವ ಉದ್ದೇಶದಿಂದ ಅಗ್ನಿಶಾಮಕ ಇಲಾಖೆ ಈ ನಿಯಮ ರೂಪಿಸಿದೆ. ಹೀಗಾಗಿ ನಿಯಮಗಳನ್ನು ಸಡಿಲಗೊಳಿಸುವ ಅಧಿಕಾರವ್ಯಾಪ್ತಿ ಆರೋಗ್ಯ ಇಲಾಖೆಗೆ ಬರುವುದಿಲ್ಲ ಎಂದರು. ಬಳಿಕ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X