Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. Belagavi | ಕನ್ನಡಿಗರಿಗೆ ಉದ್ಯೋಗ...

Belagavi | ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿ ಬಳಿಕವೇ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕು : ಟಿ.ಎ.ನಾರಾಯಣ ಗೌಡ

‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಕಾರ್ಯಕ್ರಮ; 32 ಸಾಧಕರಿಗೆ ‘ಕರ್ನಾಟಕ ಸಾರ್ವಭೌಮ’ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ23 Nov 2026 12:22 PM IST
share
Belagavi | ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿ ಬಳಿಕವೇ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕು : ಟಿ.ಎ.ನಾರಾಯಣ ಗೌಡ

ಬೆಳಗಾವಿ: ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಿದ ಬಳಿಕವಷ್ಟೇ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕು. ಇಲ್ಲದಿದ್ದರೆ ಸಮ್ಮೇಳನ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಗರದ ಜೀರಗೆ ಸಭಾಂಗಣದಲ್ಲಿ ರವಿವಾರ ಆಯೋಜಿಸಿದ್ದ ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 32 ಸಾಧಕರಿಗೆ ‘ಕರ್ನಾಟಕ ಸಾರ್ವಭೌಮ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ರಾಜ್ಯದ ಲಕ್ಷಾಂತರ ವಿದ್ಯಾವಂತ ಯುವಕರು ಉದ್ಯೋಗ ಅರಸಿ ವಿದೇಶಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ, ಬೆಂಗಳೂರಿನಲ್ಲಿ ಹೊರರಾಜ್ಯದವರ ಪ್ರಾಬಲ್ಯ ಹೆಚ್ಚುತ್ತಿದ್ದು, ಕನ್ನಡಿಗರೇ ತಮ್ಮ ನೆಲದಲ್ಲಿ ಅನಾಥರಾಗುವಂತಾಗಿದೆ. ಉದ್ಯಮಿಗಳ ಲಾಭದಲ್ಲಿ ಪಾಲು ಕೇಳುತ್ತಿಲ್ಲ, ನಮ್ಮ ಯುವಕರಿಗೆ ದುಡಿಯಲು ಅವಕಾಶ ಕೇಳುತ್ತಿದ್ದೇವೆ. ಇದು ಕನ್ನಡಿಗರ ಹಕ್ಕಾಗಿದೆ. ಕನ್ನಡದ ಉದ್ಯಮಿಗಳು ಕರ್ನಾಟಕದಲ್ಲಿಯೇ ಉದ್ಯಮಗಳನ್ನು ಸ್ಥಾಪಿಸಿ, ಸ್ಥಳೀಯ ಯುವಕರಿಗೆ ಉದ್ಯೋಗ ನೀಡುವ ಮೂಲಕ ನಾಡಿನ ಋಣ ತೀರಿಸಬೇಕು ಎಂದು ಕರೆ ನೀಡಿದರು.

ಬೆಳಗಾವಿಯ ಗಡಿ ವಿಚಾರ ಪ್ರಸ್ತಾಪಿಸಿ ಎಂಇಎಸ್ ವಿರುದ್ಧ ಆಕ್ರೋಶವ್ಯಕ್ತಪಡಿಸಿದ ಅವರು, ಬೆಳಗಾವಿಗೆ ಧಕ್ಕೆಯಾದರೆ ಇಡೀ ಕರ್ನಾಟಕ ಒಂದಾಗಲಿದೆ. ಬೆಳಗಾವಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ. ಈ ನೆಲದ ಒಂದಿಂಚು ಜಾಗವನ್ನು ಕಬಳಿಸಲು ಪ್ರಯತ್ನಿಸಿದರೂ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ರಾಣಿ ಚನ್ನಮ್ಮ ಮತ್ತು ಬೆಳವಡಿ ಮಲ್ಲಮ್ಮ ಅವರಂತಹ ವೀರ ಮಹಿಳೆಯರ ಇತಿಹಾಸ ಹೊಂದಿರುವ ಬೆಳಗಾವಿ ಗಂಡುಮೆಟ್ಟಿನ ಹಾಗೂ ಹೆಣ್ಣುಮೆಟ್ಟಿನ ನೆಲವಾಗಿದೆ. ಇಲ್ಲಿನ ಕೆಲವು ರಾಜಕಾರಣಿಗಳು ಮರಾಠಿ ಮತಗಳ ಕಾರಣಕ್ಕೆ ಕನ್ನಡಪರ ಕಾರ್ಯಕ್ರಮಗಳಿಂದ ದೂರ ಉಳಿಯುತ್ತಿದ್ದ ಸಂದರ್ಭಗಳಿದ್ದವು. ಆದರೆ, ಕನ್ನಡದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ಮಠಾಧೀಶರು ಮತ್ತು ಪ್ರಭಾಕರ ಕೋರೆ ಅವರಂತಹ ಗಣ್ಯರು ಈ ಭಾಗದಲ್ಲಿ ಕನ್ನಡದ ಅಸ್ಮಿತೆಯನ್ನು ಗಟ್ಟಿಗೊಳಿಸಿದ್ದಾರೆ ಎಂದರು.

ಪದ್ಮಶ್ರೀ ಪುರಸ್ಕೃತ ಹಾಗೂ ಕೆಎಲ್‌ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಮಾತನಾಡಿ, ಈ ಭಾಗದಲ್ಲಿ ಕೇವಲ 32 ಕನ್ನಡ ಶಾಲೆಗಳಿದ್ದ ಸಂದರ್ಭದಲ್ಲಿ ಡೆಪ್ಯುಟಿ ಚನ್ನಬಸಪ್ಪ ಅವರು 600 ಶಾಲೆಗಳು ಆರಂಭವಾಗಲು ಶ್ರಮಿಸಿದ್ದರು. ಅವರ ಪ್ರಯತ್ನದಿಂದ ಕನ್ನಡ ಶಿಕ್ಷಣಕ್ಕೆ ದೊಡ್ಡ ಬಲ ದೊರಕಿದೆ. ಬೆಳಗಾವಿ ಕರ್ನಾಟಕದಲ್ಲಿಯೇ ಉಳಿಯಲು ಕೆಎಲ್‌ಇ ಸಂಸ್ಥೆಯ ಕೊಡುಗೆಯೂ ಮಹತ್ವದ್ದಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ನಂಜುಂಡಪ್ಪ ವರದಿಯ ಆಶಯದಂತೆ ಈ ಭಾಗಕ್ಕೆ ಅಭಿವೃದ್ಧಿ ದೊರೆತಿಲ್ಲ. ಕೃಷ್ಣಾ ನದಿ ನೀರಿನ ಸಮರ್ಪಕ ಬಳಕೆಯ ವಿಚಾರದಲ್ಲಿಯೂ ಹೆಚ್ಚಿನ ಗಮನ ಹರಿಸಬೇಕಿದೆ. ಈ ಭಾಗದ ನ್ಯಾಯಯುತ ಬೇಡಿಕೆಗಳಿಗಾಗಿ ಕರವೇ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಪರ ಹೋರಾಟಕ್ಕೆ ಮಾತ್ರ ಸೀಮಿತವಾಗದೆ, ನ್ಯಾಯಪರ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿದೆ. ಬೆಂಗಳೂರಿನಲ್ಲಿ ಕರವೇ ಕೇಂದ್ರ ಕಚೇರಿ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ಶಾಸಕ ಆಸಿಫ್ ಸೇಠ್ ಮಾತನಾಡಿ, ಕನ್ನಡ ಭಾಷೆ ಹಾಗೂ ಕರ್ನಾಟಕದ ಒಳಿತಿಗಾಗಿ ನಾರಾಯಣ ಗೌಡರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರ ಎಲ್ಲ ಕನ್ನಡಪರ ಕಾರ್ಯಗಳಿಗೆ ನಮ್ಮ ಬೆಂಬಲವಿದೆ ಎಂದು ತಿಳಿಸಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಹುಲ್ ಸತೀಶ ಜಾರಕಿಹೊಳಿ ಮಾತನಾಡಿ, ಕರವೇ ರಾಜಕೀಯ ಪಕ್ಷಕ್ಕಿಂತಲೂ ಬಲಿಷ್ಠವಾಗಿ ಬೆಳೆದಿದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಸತ್ಯವಾಗಿದೆ. ಮೈಸೂರು ದಸರಾ ಮಾದರಿಯಲ್ಲಿ ಲಕ್ಷಾಂತರ ಕನ್ನಡಿಗರನ್ನು ಒಂದೆಡೆ ಸೇರಿಸುವ ಸಾಮರ್ಥ್ಯ ಬೆಳಗಾವಿಯ ರಾಜ್ಯೋತ್ಸವಕ್ಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ನಾಗನೂರು ರುದ್ರಾಕ್ಷಿ ಮಠದ ಶ್ರೀ ಅಲ್ಲಮಪ್ರಭು ಸ್ವಾಮೀಜಿ ಆಶೀರ್ವಚನ ನೀಡಿದರು. ಉಪಮೇಯರ್ ಹಣಮಂತ ಕೊಂಗಾಲಿ, ಕರವೇ ರಾಜ್ಯ ಸಂಚಾಲಕ ಸುರೇಶ ಉಪಸ್ಥಿತರಿದ್ದರು. ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಸ್ವಾಗತಿಸಿದರು.

Tags

BelagaviKannada ConferenceKannadigasT.A.Narayana Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X