ಬೆಳಗಾವಿ | ಬಸ್ ಪಲ್ಟಿ : ಇಬ್ಬರು ಮೃತ್ಯು, 11 ಮಂದಿಗೆ ಗಾಯ

ಬೆಳಗಾವಿ: ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, 11 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ಬೆಳಗಾವಿ ತಾಲ್ಲೂಕಿನ ಬಡೇಕೊಳ್ಳಮಠದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್ ರಾತ್ರಿ 10.30ರ ಸುಮಾರಿಗೆ ಬಡೇಕೊಳ್ಳ ಘಾಟ್ ಬಳಿ ನಿಯಂತ್ರಣ ತಪ್ಪಿ, ಕಿರು ಸೇತುವೆಯ ಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಯಿಂದ ಬಸ್ಸಿನೊಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
Next Story





