ಬೆಳಗಾವಿ | ಅಡುಗೆ ಮಾಡುವ ವೇಳೆ ಬೆಂಕಿ ತಗುಲಿ ವೃದ್ಧೆ ಮೃತ್ಯು

ಬೆಳಗಾವಿ : ಮನೆಯಲ್ಲಿ ಅಡುಗೆ ಮಾಡುವ ವೇಳೆ ಬೆಂಕಿ ತಗುಲಿ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ನಗರದ ನಾರವೇಕರ್ ಗಲ್ಲಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತರನ್ನು ಸುಪ್ರೀಯಾ ಬೈಲೂರ (78) ಎಂದು ಗುರುತಿಸಲಾಗಿದೆ.
ಅಡುಗೆ ಮಾಡುವ ವೇಳೆ ಬೆಂಕಿ ತಗುಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಖಡೇಬಜಾರ್ ಸಿಪಿಐ ಶ್ರೀಶೈಲ ಗಾಬಿ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ, ಈ ವೇಳೆ ವೃದ್ಧೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮನೆಯಲ್ಲಿದ್ದ ಸಾಮಾನುಗಳು, ಪೀಠೋಪಕರಣಗಳು ಸೇರಿದಂತೆ ಅನೇಕ ವಸ್ತುಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ.
ಖಡೇಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Next Story





