Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ ಅಧಿವೇಶನ | 5,317 ಕೋಟಿ...

ಬೆಳಗಾವಿ ಅಧಿವೇಶನ | 5,317 ಕೋಟಿ ರೂ.ಪೂರಕ ಅಂದಾಜುಗಳ ಮಂಡನೆ

ಉಪ ಚುನಾವಣೆ ವೆಚ್ಚಕ್ಕೆ 2.11ಕೋಟಿ ರೂ., ಸಾಹಿತ್ಯ ಸಮ್ಮೇಳನಕ್ಕೆ 5ಕೋಟಿ ರೂ.ಹೆಚ್ಚುವರಿ ಅನುದಾನ

ವಾರ್ತಾಭಾರತಿವಾರ್ತಾಭಾರತಿ16 Dec 2024 4:19 PM IST
share
ಬೆಳಗಾವಿ ಅಧಿವೇಶನ |  5,317 ಕೋಟಿ ರೂ.ಪೂರಕ ಅಂದಾಜುಗಳ ಮಂಡನೆ

ಬೆಳಗಾವಿ : ಮೂರು ಕ್ಷೇತ್ರಗಳ ಉಪಚುನಾವಣೆ ವೆಚ್ಚಕ್ಕೆ 2.11ಕೋಟಿ ರೂ., ಮಂಡ್ಯದಲ್ಲಿ ಇದೇ ತಿಂಗಳು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 5ಕೋಟಿ ರೂ. ಹಾಗೂ ನಾಯಕರ ಓಡಾಟಕ್ಕೆ ಮೀಸಲಾದ ಹೆಲಿಕಾಪ್ಟರ್ ನಿರ್ವಹಣೆ ವೆಚ್ಚಕ್ಕಾಗಿ 4.5ಕೋಟಿ ರೂ.ಗಳು ಹೆಚ್ಚುವರಿ ಸೇರಿದಂತೆ ಒಟ್ಟು 5,317.83 ಕೋಟಿ ರೂ.ಮೊತ್ತದ 2024-25ನೆ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಸೋಮವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಪರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪೂರಕ ಅಂದಾಜುಗಳನ್ನು ಮಂಡಿಸಿದರು. ಬೆಳಗಾವಿಯಲ್ಲಿ ಡಿ.26ರಿಂದ ನಡೆಯಲಿರುವ ಕಾಂಗ್ರೆಸ್ ಅಧಿವೇಶದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಹೆಚ್ಚುವರಿಯಾಗಿ 8 ಕೋಟಿ ರೂ,ಗಳನ್ನು ಒದಗಿಸಲಾಗಿದೆ. ಜತೆಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಡಿ ರಸ್ತೆಗಳ ನಿರ್ಮಾಣಕ್ಕೆ 500 ಕೋಟಿ ರೂ., ಆನೆಗಳ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ 150 ಕೋಟಿ ರೂ.ಗಳನ್ನು ನೀಡಲಾಗಿದೆ.

ರಾಜ್ಯದ ಖರ್ಚು-ವೆಚ್ಚಗಳನ್ನು ಕಡಿತಗೊಳಿಸಿ, ಹೆಚ್ಚುವರಿ ಆದಾಯ ತರುವ ಸಲುವಾಗಿ ಸಲಹೆ ನೀಡಲು ‘ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್’ ಎಂಬ ವಿದೇಶಿ ಸಂಸ್ಥೆ ನೇಮಿಸಿಕೊಂಡಿದೆ. ಆ ಸಂಸ್ಥೆಗೆ 5.6ಕೋಟಿ ರೂ.ಪಾವತಿಗೆ ಪೂರಕ ಅಂದಾಜಿನಲ್ಲಿ ಹಣ ನೀಡಿದ್ದು, ಈ ಸಂಸ್ಥೆಗೆ ಆರು ತಿಂಗಳಿಗೆ 9.5 ಕೋಟಿ ರೂ.ಸಂಭಾವನೆಯನ್ನು ನಿಗದಿಪಡಿಸಿದೆ. ಸಿಎಂ ವಿಶೇಷ ಅನುದಾನದಡಿ ಕಾಮಗಾರಿಗಳ ಬಾಕಿ ಬಿಲ್‍ಗಳ ಪಾವತಿಗೆ 300ಕೋಟಿ ರೂಗಳನ್ನು ಒದಗಿಸಲಾಗಿದೆ.

ಅತಿವೃಷ್ಟಿಯಿಂದ ಹಾನಿಯಾದ ರಸ್ತೆ, ಸೇತುವೆಗಳ ದುರಸ್ತಿಗೆ 200 ಕೋಟಿ ರೂ., ಎಸ್‍ಸಿಎಸ್ಪಿ-ಟಿಎಸ್ಪಿ ಯೋಜನೆಗಳಿಗೆ 193ಕೋಟಿ ರೂ., ಅಲ್ಲದೆ, ಮಂಡ್ಯ ಅಖಿಲ ಭಾರತ ಕನ್ನ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚುವರಿ 5 ಕೋಟಿ ರೂ.ಒದಗಿಸಿದ್ದು, ಈ ಮೊದಲು ಸಾಹಿತ್ಯ ಸಮ್ಮೇಳನಕ್ಕೆ 15 ಕೋಟಿ ರೂ. ನೀಡಿದ್ದು, ಒಟ್ಟು 20 ಕೋಟಿ ರೂ.ಗಳನ್ನು ಸಾಹಿತ್ಯ ಸಮ್ಮೇಳನಕ್ಕಾಗಿ ಸರಕಾರ ಒದಗಿಸಿದೆ. ಅಲ್ಲದೆ, ಬೆಳಗಾವಿಯ ವಿಧಾನ ಮಂಡಲ ಅಧಿವೇಶನಕ್ಕೆ ಹೆಚ್ಚುವರಿಯಾಗಿ 7.4ಕೋಟಿ ರೂ.ಗಳನ್ನು ನೀಡಲಾಗಿದೆ.

ಹಾಲಿ ಶಾಸಕರ ವೈದ್ಯಕೀಯ ವೆಚ್ಚದ ಮರುಪಾವತಿಗೆ 1.25ಕೋಟಿ ರೂ., ಮಾಜಿ ಶಾಸಕರ ವೈದ್ಯಕೀಯ ವೆಚ್ಚದ ಮರುಪಾವತಿಗೆ 3 ಕೋಟಿ ರೂ., ನಾಗಮಂಗಲ ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆದ ಕೋಮುಗಲಭೆಯಿಂದ ಹಾನಿಯಾದ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರವಾಗಿ 2.66 ಕೋಟಿ ರೂ. ನೀಡಲಾಗಿದೆ. ಈ ಮೊದಲು ಉಪಚುನಾವಣೆಗಾಗಿ 3.10 ಕೋಟಿ ರೂ.ಒದಗಿಸಿದ್ದ ಸರಕಾರ ಇದೀಗ ಪೂರಕ ಅಂದಾಜಿನಲ್ಲಿ 2.11 ಕೋಟಿ ರೂ.ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X