Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ ಅಧಿವೇಶನ | ಸದನದಲ್ಲಿ...

ಬೆಳಗಾವಿ ಅಧಿವೇಶನ | ಸದನದಲ್ಲಿ ಪ್ರತಿಧ್ವನಿಸಿದ ಮುನಿರತ್ನ ವಿರುದ್ಧದ ಜಾತಿ ನಿಂದನೆ ಪ್ರಕರಣ ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಕ್ಸಮರ

ವಾರ್ತಾಭಾರತಿವಾರ್ತಾಭಾರತಿ16 Dec 2024 8:59 PM IST
share
ಬೆಳಗಾವಿ ಅಧಿವೇಶನ | ಸದನದಲ್ಲಿ ಪ್ರತಿಧ್ವನಿಸಿದ ಮುನಿರತ್ನ ವಿರುದ್ಧದ ಜಾತಿ ನಿಂದನೆ ಪ್ರಕರಣ ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಕ್ಸಮರ

ಬೆಳಗಾವಿ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಜಾತಿ ನಿಂದನೆ ಪ್ರಕರಣವು ಸೋಮವಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿ, ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ವಾಕ್ಸಮರಕ್ಕೆ ಎಡೆ ಮಾಡಿಕೊಟ್ಟಿತು.

ಸೋಮವಾರ ವಿಧಾನಸಭೆಯಲ್ಲಿ ನಿಯಮ 69ರ ಮೇರೆಗೆ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ, ಜಾತಿ ನಿಂದನೆ ಮತ್ತು ಎಚ್‍ಐವಿ ರೋಗವನ್ನು ಸೋಂಕಿಸಿ ವಿವಿಧ ಗಣ್ಯರ ಜೀವಕ್ಕೆ ಅಪಾಯ ತರಲು ಪ್ರಯತ್ನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಂಡಿರುವ ಪ್ರಕರಣಗಳ ಕುರಿತು ಚರ್ಚೆ ನಡೆಯಿತು.

ವಿಷಯ ಪ್ರಸ್ತಾವಿಸಿ ಮಾತನಾಡಿದ ಕಾಂಗ್ರೆಸ್ ಸದಸ್ಯ ಪಿ.ಎಂ.ನರೇಂದ್ರ ಸ್ವಾಮಿ, ಮುನಿರತ್ನ ವಿರುದ್ಧ ಜಾತಿ ನಿಂದನೆ ಆರೋಪ ಬಂದಿದೆ. ಅವರು ಮಾತನಾಡಿರೋದು ಸತ್ಯ ಎಂದು ಎಫ್‍ಎಸ್‍ಎಲ್ ವರದಿಯಲ್ಲಿ ದೃಢವಾಗಿದೆ. ನಾವು ಜಾತಿನಿಂದನೆಯನ್ನು ಸಹಿಸುವುದಿಲ್ಲ. ನಾನು ಅದೇ ಸಮುದಾಯದಿಂದ ಬಂದವನು. ಮುನಿರತ್ನ ವಿರುದ್ಧ ಕ್ರಮ ಆಗಲೆಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಎಸ್ಸಿ, ಎಸ್ಟಿ ಬಗ್ಗೆ ನಿಂದಿಸಿರುವ ಮುನಿರತ್ನಗೆ ಧಿಕ್ಕಾರ. ಅವರನ್ನು ಬೆಂಬಲಿಸುತ್ತಿರುವವರಿಗೆ ಧಿಕ್ಕಾರ ಎಂದು ಎದ್ದು ನಿಂತು ಘೋಷಣೆಗಳನ್ನು ಕೂಗಿದರು. ಈ ವೇಳೆ ಕಾಂಗ್ರೆಸ್ ಸದಸ್ಯರನ್ನು ಸಮಾಧಾನಪಡಿಸಲು ಸ್ಪೀಕರ್ ಯು.ಟಿ.ಖಾದರ್ ಯತ್ನಿಸಿದರೂ ಪ್ರಯೋಜನವಾಗಲಿಲ್ಲ.

ಜಾತಿ ನಿಂದನೆ ಮಾಡಿರುವ ಮುನಿರತ್ನ ಶಾಸಕನಾಗಿರಲು ಸಾಧ್ಯವಿಲ್ಲ. ನಾವು ಜಾತಿ ನಿಂದನೆ ಸಹಿಸಲು ಸಾಧ್ಯವಿಲ್ಲ. ಮುನಿರತ್ನ ಅಸಾಂವಿಧಾನಿಕ ಹಾಗೂ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಸಮುದಾಯವನ್ನು ದೂಷಣೆ ಮಾಡಿದ್ದಾರೆ. ಅಲ್ಲದೇ, ತುಚ್ಛವಾಗಿ ಮಾತನಾಡಿರುವುದು ಆಡಿಯೋದಲ್ಲಿ ಕೇಳಿ ಬಂದಿದೆ. ಈ ಸದನದಿಂದ ಮುನಿರತ್ನರನ್ನು ಅಮಾನತ್ತು ಮಾಡಬೇಕು ಎಂದು ನರೇಂದ್ರ ಸ್ವಾಮಿ ಆಗ್ರಹಿಸಿದರು.

ಮುನಿರತ್ನ ವಿರುದ್ಧ ಕಾಂಗ್ರೆಸ್ ಸದಸ್ಯರು ಧಿಕ್ಕಾರ ಕೂಗಿದ್ದಕ್ಕೆ ಪ್ರತಿಯಾಗಿ ಬಿಜೆಪಿ ಸದಸ್ಯರು ಕೂಡ ‘ಕಾಂಗ್ರೆಸ್ ವಾಲಾ ಚೋರ್ ಹೈ, ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್’ಗೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು. ನ್ಯಾಯಾಲಯದಲ್ಲಿರುವ ವಿಚಾರವನ್ನು ಇಲ್ಲಿ ಚರ್ಚೆ ಮಾಡೋದು ಸರಿಯಲ್ಲ ಎಂದು ಬಿಜೆಪಿಯವರು ಹೇಳಿದರು.

ನರೇಂದ್ರಸ್ವಾಮಿ ಮಾತಿಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದಾಗಿ, ಸದನದಲ್ಲಿ ಗದ್ದಲ ಏರ್ಪಟ್ಟಿತು. ಬಳಿಕ ಸ್ಪೀಕರ್ ಯು.ಟಿ.ಖಾದರ್ ಸದನವನ್ನು 10 ನಿಮಿಷ ಮುಂದೂಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X