Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ ಅಧಿವೇಶನ | ಕರ್ನಾಟಕ...

ಬೆಳಗಾವಿ ಅಧಿವೇಶನ | ಕರ್ನಾಟಕ ಸರಕು-ಸೇವೆಗಳ ತೆರಿಗೆ (2ನೇ ತಿದ್ದುಪಡಿ) ವಿಧೇಯಕ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ17 Dec 2024 9:27 PM IST
share
ಬೆಳಗಾವಿ ಅಧಿವೇಶನ | ಕರ್ನಾಟಕ ಸರಕು-ಸೇವೆಗಳ ತೆರಿಗೆ (2ನೇ ತಿದ್ದುಪಡಿ) ವಿಧೇಯಕ ಅಂಗೀಕಾರ

ಬೆಳಗಾವಿ (ಸುವರ್ಣ ವಿಧಾನಸೌಧ) : ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (2ನೇ ತಿದ್ದುಪಡಿ) ವಿಧೇಯಕ 2024ವು ಮಂಗಳವಾರ ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಯಿತು.

ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2024ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ 2024ವನ್ನು ಪರ್ಯಾಯಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ಪರವಾಗಿ ಸಚಿವ ಕೃಷ್ಣ ಭೈರೇಗೌಡ ಅವರು ಸದನಕ್ಕೆ ಸೂಚಿಸಿದರು. ಈ ವೇಳೆ ವಿಧೇಯಕದ ಪರ್ಯಾಲೋಚನೆಗೆ ಸಭಾಪತಿಯವರು ಅವಕಾಶ ಕಲ್ಪಿಸಿದರು.

ತಿದ್ದುಪಡಿ ವಿಧೇಯಕ ಮೇಲೆ ಸದಸ್ಯರಾದ ನವೀನ್, ತಿಪ್ಪೇಸ್ವಾಮಿ ಹಾಗೂ ಇನ್ನಿತರರು ಮಾತನಾಡಿ, ಜಿಎಸ್‍ಟಿಗೆ ಸಂಬಂಧಿಸಿದಂತೆ 2015ರಿಂದ ಈಚೆಗೆ ಇಲಾಖೆ ಮತ್ತು ವ್ಯವಹಾರಸ್ಥರ ಮೇಲೆ ಘರ್ಷಣೆ ನಡೆಯುತ್ತಲೇ ಇವೆ. ಕಟ್ಟುನಿಟ್ಟಿನಿಂದ ವ್ಯವಹಾರ ಮಾಡುವ ವ್ಯಾಪಾರಸ್ಥರಿಗೆ ಹಿನ್ನೆಡೆಯಾಗದ ರೀತಿಯಲ್ಲಿ ಎಚ್ಚರಿಕೆ ವಹಿಸಿ ಜಿಎಸ್ಟಿ ಕಾಯ್ದೆ ತಿದ್ದುಪಡಿ ಅನುಷ್ಠಾನಕ್ಕೆ ಮುಂದಾಗಬೇಕು. ಜಿಎಸ್‍ಟಿ ಎರಡನೇ ತಿದ್ದುಪಡಿ ವಿಧೇಯಕವು ಸಣ್ಣ ವ್ಯಾಪಾರಸ್ಥರ ಪರವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಕಾಯ್ದೆಯನ್ನು ಮತ್ತಷ್ಟು ಸರಳೀಕರಣಗೊಳಿಸುವ ಪ್ರಯತ್ನದ ಭಾಗವಾಗಿ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ 2024ವನ್ನು ಜಾರಿಗೊಳಿಸುತ್ತಿರುವುದು ಸ್ವಾಗತಾರ್ಹ ಎಂದು ವಿಪಕ್ಷ ಸದಸ್ಯರು ವಿಧೇಯಕಕ್ಕೆ ಬೆಂಬಲ ನೀಡಿದರು.

ಜಿಎಸ್‍ಟಿ ತಿದ್ದುಪಡಿ ವಿಧೇಯಕದ ಬಗ್ಗೆ ವಿಪಕ್ಷ ಸದಸ್ಯರಿಂದ ಬಂದಿರುವ ಸಲಹೆಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ತೆರಿಗೆದಾರರಿಂದ ಬಂದಿರುವ ಸಲಹೆಗಳನ್ನು ಕೂಡ ಪರಿಗಣಿಸಲಾಗಿದೆ. ಸಾರ್ವಜನಿಕ ಹಿತಾಸಕ್ತಿಯನುಸಾರ ಕಾಯಿದೆಯನ್ನು ಸರಳೀಕರಣಗೊಳಿಸುವ ಪ್ರಯತ್ನದ ಭಾಗವಾಗಿ ಮಾಡಲಾಗಿರುವ ಈ ತಿದ್ದುಪಡಿಗೆ ಅನುಮೋದನೆ ನೀಡಬೇಕು ಎಂದು ಸಚಿವ ಕೃಷ್ಣ ಭೈರೇಗೌಡ ಅವರು ಸದನಕ್ಕೆ ತಿಳಿಸಿ ವಿಧೇಯಕವನ್ನು ಅಂಗೀಕರಿಸಲು ಕೋರಿದರು. ಬಳಿಕ ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಲಾಯಿತು.

Tags

Belgaum
share
ವಾರ್ತಾಭಾರತಿ
ವಾರ್ತಾಭಾರತಿ
Next Story
X