Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಮುಂದಿನ ಬಜೆಟ್ ಒಳಗಾಗಿ ಎಲ್ಲ ಕೆರೆಗಳ...

ಮುಂದಿನ ಬಜೆಟ್ ಒಳಗಾಗಿ ಎಲ್ಲ ಕೆರೆಗಳ ಒತ್ತುವರಿ ತೆರವುಗೊಳಿಸುವ ಗುರಿ : ಸಚಿವ ಭೋಸರಾಜು

ವಾರ್ತಾಭಾರತಿವಾರ್ತಾಭಾರತಿ17 Dec 2025 12:23 AM IST
share
ಮುಂದಿನ ಬಜೆಟ್ ಒಳಗಾಗಿ ಎಲ್ಲ ಕೆರೆಗಳ ಒತ್ತುವರಿ ತೆರವುಗೊಳಿಸುವ ಗುರಿ : ಸಚಿವ ಭೋಸರಾಜು

ಬೆಳಗಾವಿ : ರಾಜ್ಯದಲ್ಲಿರುವ ಜಲಮೂಲಗಳ ಸಂರಕ್ಷಣೆಗೆ ಸರಕಾರ ಬದ್ಧವಾಗಿದ್ದು, ಮುಂದಿನ ಆಯವ್ಯಯ ಮಂಡನೆಯ ಒಳಗಾಗಿ ರಾಜ್ಯದ ಎಲ್ಲ ಕೆರೆಗಳ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.

ಮಂಗಳವಾರ ಸುವರ್ಣ ವಿಧಾನಸೌಧದಲ್ಲಿನ ಸೆಂಟ್ರಲ್ ಹಾಲ್‍ನಲ್ಲಿ ‘ಕೆರೆ ಬಳಕೆದಾರರ ಸಂಘ’ಗಳ ಪದಾಧಿಕಾರಿಗಳಿಗೆ ಕೆರೆಗಳ ನಿರ್ವಹಣೆ ಕುರಿತ ಕಾರ್ಯಾಗಾರ'ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಸರಕಾರ ಕೆರೆಗಳ ಸಂರಕ್ಷಣೆಗೆ ಮಹತ್ವದ ಹೆಜ್ಜೆಯಿಟ್ಟಿದೆ. ರಾಜ್ಯಾದ್ಯಂತ ಸುಮಾರು 41,849 ಜಲಮೂಲಗಳಿವೆ. ಇವುಗಳ ಪೈಕಿ ಒತ್ತುವರಿ ತೆರವು ಕಾರ್ಯ ಭರದಿಂದ ಸಾಗಿದ್ದು, ಪ್ರಸ್ತುತ ಕೇವಲ 6,500 ಕೆರೆಗಳ ಒತ್ತುವರಿ ತೆರವು ಮಾತ್ರ ಬಾಕಿ ಉಳಿದಿದೆ. ಇದನ್ನು ಸಮರೋಪಾದಿಯಲ್ಲಿ ಕೈಗೊಂಡು, ಮುಂದಿನ ಬಜೆಟ್ ವೇಳೆಗೆ ಸಂಪೂರ್ಣ ಒತ್ತುವರಿ ಮುಕ್ತಗೊಳಿಸುವ ಗುರಿಯನ್ನು ಹೊಂದಿದ್ದೇವೆ ಎಂದರು.

ಸಂಪನ್ಮೂಲ ಕ್ರೋಢೀಕರಣಕ್ಕೆ ಹೊಸ ಚಿಂತನೆ: ಕೆರೆಗಳ ನಿರ್ವಹಣೆಗೆ ಆರ್ಥಿಕ ಸ್ವಾವಲಂಬನೆ ಕಂಡುಕೊಳ್ಳುವ ನಿಟ್ಟಿನಲ್ಲಿಯೂ ಸರಕಾರ ಚಿಂತನೆ ನಡೆಸಿದೆ. ವರ್ಷಪೂರ್ತಿ ಏತ ನೀರಾವರಿ ಯೋಜನೆಗಳ ಮೂಲಕ ಶೇ.50ಕ್ಕೂ ಹೆಚ್ಚು ನೀರು ಹೊಂದಿರುವ ಕೆರೆಗಳಲ್ಲಿ, ಮೀನುಗಾರಿಕೆ ಹಕ್ಕನ್ನು ಹರಾಜು ಹಾಕುವ ಮೂಲಕ ಕೆರೆಗಳ ನಿರ್ವಹಣೆಗೆ ಅಗತ್ಯ ಸಂಪನ್ಮೂಲ ಕ್ರೋಢೀಕರಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಬಳಕೆದಾರರ ಸಂಘಗಳಿಗೆ ಮರುಜೀವ: ಜಲಮೂಲಗಳ ಸಮರ್ಪಕ ನಿರ್ವಹಣೆಯಲ್ಲಿ ಸ್ಥಳೀಯ ಸಮುದಾಯದ ಪಾತ್ರ ನಿರ್ಣಾಯಕ. ಕೆರೆಗಳ ಉಸ್ತುವಾರಿಗಾಗಿ ರಚಿಸಲಾಗಿದ್ದ ಕೆರೆ ಬಳಕೆದಾರರ ಸಂಘಗಳು ಆಡಿಟ್ ಮತ್ತಿತರ ತಾಂತ್ರಿಕ ಸಮಸ್ಯೆಗಳಿಂದಾಗಿ ನಿಷ್ಕ್ರಿಯಗೊಂಡಿದ್ದವು. ಈ ಸಂಘಗಳು ಕೆರೆಗಳ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ, ಆಡಿಟ್ ಸಮಸ್ಯೆಗಳನ್ನು ಬಗೆಹರಿಸಿ, ಈ ಸಮುದಾಯ ಆಧಾರಿತ ಸಂಘಗಳಿಗೆ ಮರುಜೀವ ತುಂಬಲು ಸರಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಕೆರೆಗಳ ಸಂರಕ್ಷಣೆ ಮುಖ್ಯ. ಜಲಸಂಪನ್ಮೂಲ, ಗ್ರಾಮೀಣಾಭಿವೃದ್ದಿ ಹಾಗೂ ಸಣ್ಣ ನೀರಾವರಿ ಇಲಾಖೆಗಳ ವ್ಯಾಪ್ತಿಯಲ್ಲಿ ಹಂಚಿಹೋಗಿವೆ. ಯಾವುದೇ ಇಲಾಖೆಯ ವ್ಯಾಪ್ತಿಯಲ್ಲಿದ್ದರೂ ಅವುಗಳ ಸಮರ್ಪಕ ನಿರ್ವಹಣೆಗೆ ಸಮುದಾಯ ಆಧಾರಿತ ಕೆರೆ ಬಳಕೆದಾರರ ಸಂಘಗಳ ಅಗತ್ಯ. ಇವುಗಳನ್ನ ಆರ್ಥಿಕವಾಗಿ ಸಧೃಡಗೊಳಿಸುವ ನಿಟ್ಟಿನಲ್ಲಿ ಸರಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.

ಕಾರ್ಯಾಗಾರದಲ್ಲಿ ಕೆರೆ ಬಳಕೆದಾರರ ಸಂಘಗಳ ನಿರ್ವಹಣೆಯ ಕೈಪಿಡಿ ಹಾಗೂ ‘ನೀರಿದ್ದರೆ ನಾಳೆ' ಕರಪತ್ರವನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ ಖರ್ಗೆ, ಅಂತರ್ಜಲ ಅಭಿವೃದ್ದಿ ಇಲಾಖೆಯ ಕಾರ್ಯದರ್ಶಿ ಬಿ.ಕೆ.ಪವಿತ್ರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಕೆರೆ ಬಳಕೆದಾರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X