ಗೆಜೆಟೆಡ್ ಪ್ರೊಬೆಷನರ್ಸ್ 384 ಹುದ್ದೆಗಳ ಪರೀಕ್ಷೋತ್ತರ ಪ್ರಕ್ರಿಯೆ 20 ದಿನದಲ್ಲಿ ಪೂರ್ಣ: ಭೋಸರಾಜು

ಬೆಳಗಾವಿ : 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 3.5.2025ರಿಂದ 9.5.2025ರವರೆಗೆ ಮುಖ್ಯ ಪರೀಕ್ಷೆ ನಡೆಸಿದ್ದು, ಪ್ರಸ್ತುತ ಮುಖ್ಯ ಪರೀಕ್ಷೆಯ ಪರೀಕ್ಷೋತ್ತರ ಕಾರ್ಯಗಳು ಪ್ರಗತಿಯಲ್ಲಿದ್ದು, 20 ದಿನದಲ್ಲಿ ಪೂರ್ಣಗೊಳ್ಳಲಿದೆ ಎಂದು ಸಣ್ಣ ನಿರಾವರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.
ಗುರುವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ನಿರಾಣಿ ಹನುಮಂತ ರುದ್ರಪ್ಪ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರು, ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆದು ಪಾಸಾದ ಪರೀಕ್ಷೆಯ ಅಭ್ಯರ್ಥಿಗಳ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಗೆಜೆಟೆಡ್ ಪ್ರೊಬೆಷನರ್ಸ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ನಿಯಮಗಳು 1997 ಹಾಗೂ ತಿದ್ದುಪಡಿ ನಿಯಮಗಳನ್ವಯ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
Next Story





