Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಕಾಂಗ್ರೆಸ್ ಅಭಿವೃದ್ಧಿ ನೋಡಿ...

ಕಾಂಗ್ರೆಸ್ ಅಭಿವೃದ್ಧಿ ನೋಡಿ ಬಿಜೆಪಿಯವರಿಗೆ ಭ್ರಮನಿರಸನವಾಗಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

"1.20 ಕೋಟಿ ಮನೆಯ ಯಜಮಾನಿಯರು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ6 March 2024 4:48 PM IST
share
ಕಾಂಗ್ರೆಸ್ ಅಭಿವೃದ್ಧಿ ನೋಡಿ ಬಿಜೆಪಿಯವರಿಗೆ ಭ್ರಮನಿರಸನವಾಗಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಅಥಣಿ: ಕಾಂಗ್ರೆಸ್ ಸರಕಾರ ಗ್ಯಾರಂಟಿಯ ಜೊತೆಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ ಬಿಜೆಪಿಯವರ ಕಣ್ಣಿಗೆ ಇದೆಲ್ಲ ಕಾಣುತ್ತಿಲ್ಲವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ.

ಅಥಣಿಯಲ್ಲಿ ಬುಧವಾರ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

"ಕಾಂಗ್ರೆಸ್ ಎಂದರೆ ಬದ್ದತೆ, ಬಸವಣ್ಣನವರು ಕಂಡ ಸಮಾನತೆಯ ಕನಸನ್ನು ನನಸು ಮಾಡುವ ಪಕ್ಷ. ಆದರೆ ಬಿಜೆಪಿಯವರು ನಮ್ಮ ಗ್ಯಾರಂಟಿಗಳ ಬಗ್ಗೆ ಬಹಳಷ್ಟು ಕೀಳಾಗಿ ಮಾತನಾಡಿದರು. ಗ್ಯಾರಂಟಿ ಸುಳ್ಳು ಎಂದರು, ಗ್ಯಾರಂಟಿಯಿಂದ ಮಹಿಳೆಯರು ದೇವಸ್ಥಾನಗಳಿಗೆ ತಿರುಗುತ್ತಿದ್ದಾರೆ, ಗಂಡಸರು ಕುಡಿದು ಹಾಳಾಗುತ್ತಿದ್ದಾರೆ ಎಂದು ಅವಮಾನ ಮಾಡಿದರು. ಆದರೆ ಮಹಿಳಾ ಸ್ವಾವಲಂಬನೆ ಕಾಂಗ್ರೆಸ್ ಬದ್ದತೆ. ಅದನ್ನು ಅತ್ಯಂತ ಸಮರ್ಥವಾಗಿ ಈಡೇರಿಸಿದ್ದೇವ" ಎಂದು ಅವರು ಹೇಳಿದರು.

"1.20 ಕೋಟಿ ಮನೆಯ ಯಜಮಾನಿಯರು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಎಲ್ಲ 5 ಗ್ಯಾರಂಟಿಗಳನ್ನು ಈಡೇರಿಸಿ ಕಾಂಗ್ರೆಸ್ ಪಕ್ಷ ಜನಪ್ರಿಯತೆ ಪಡೆಯುತ್ತಿರುವುದನ್ನು ಬಿಜೆಪಿಯವರಗೆ ಸಹಿಸಿಕೊಳ್ಳಲು ಆಗುವುದಿಲ್ಲ. 5 ಗ್ಯಾರಂಟಿ ಯೋಜನೆಗೆ ತಿಂಗಳಿಗೆ 5 ಸಾವಿರ ಕೋಟಿ ರೂ ನೀಡಲಾಗುತ್ತಿದೆ. ಜೊತೆಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಿರುವುದು ಬಿಜೆಪಿಯವರಿಗೆ ಕಣ್ಣಿಗೆ ಕಾಣುತ್ತಿಲ್ಲ. ಅವರಿಗೆ ಭ್ರಮನಿರಸನವಾಗಿದೆ‌" ಎಂದು ಹೆಬ್ಬಾಳ್ಕರ್ ಹೇಳಿದರು.

ಕೇವಲ ಶ್ರೀಮಂತರು ಶ್ರೀಮಂತರಾದರೆ ರಾಷ್ಟ್ರ ಬೆಳೆಯುವುದಿಲ್ಲ. ಬಡವರ ಹೊಟ್ಟೆ ತುಂಬಬೇಕು, ಬಡವರು ಸ್ವಾವಲಂಬಿ ಜೀವನ ನಡೆಸಬೇಕು. ಅಂತಹ ಅವಕಾಶವನ್ನು ಕಾಂಗ್ರೆಸ್ ಸರಕಾರ ನೀಡುತ್ತಿದೆ ಎಂದು ನುಡಿದರು.

ಲಕ್ಷ್ಮಣ ಸವದಿಯವರು ತಮ್ಮ ಕ್ಷೇತ್ರದ ಜನರಿಗೆ ನೀರಾವರಿ ಯೋಜನೆ ಬೇಕೆನ್ನುವ ಬೇಡಿಕೆಯನ್ನು ಮಾತ್ರ ಕಾಂಗ್ರೆಸ್ ಸೇರುವಾಗ ಇಟ್ಟಿದ್ದರು. ಅದರಂತೆ ಈಗ 1486 ಕೋಟಿ ರೂ.ಗಳ ಈ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಮಂಜೂರಾಗಿದೆ. ನನ್ನ ಕ್ಷೇತ್ರಕ್ಕೆ ಕೂಡ 800 ಕೋಟಿ ರೂ.ಗಳ ಯೋಜನೆ ಮಂಜೂರು ಮಾಡಲಾಗಿದೆ. 2018ರಲ್ಲೇ ಯೋಜನೆ ಮಂಜೂರಾಗಿತ್ತು. ಆದರೆ ನಂತರ ಬಂದ ಸರಕಾರ ನನಗೆ ಹೆಸರು ಬರುತ್ತದೆ ಎಂದು ಹೇಳಿ ನನ್ನ ಕ್ಷೇತ್ರದ ಯೋಜನೆ ತಡೆದಿದ್ದರು. ಈಗ ಮತ್ತೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಅವರು ಯೋಜನೆಗೆ ಮಂಜೂರಾತಿ ನೀಡಿದ್ದಾರೆ. ಅವರಿಗೆ ನಾನು ಕೋಟಿ ಕೋಟಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿದರು. ಶಾಸಕರಾದ ಲಕ್ಷ್ಮಣ್ ಎಂ‌ ಸವದಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಹಾಗೂ ಬೃಹತ್ ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಬ ಹಟ್ಟಿಹೊಳಿ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಶಾಸಕರಾದ ಮಹೇಂದ್ರ ತಮ್ಮಣ್ಣವರ, ಅಶೋಕ ಮ ಪಟ್ಟಣ, ಮಹಾರಾಷ್ಟ್ರದ ಮಾಜಿ ಸಚಿವ ವಿಶ್ವಜಿತ್ ಕದಂ ಸೇರಿ ಹಲವು ನಾಯಕರು ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X