ಬೆಳಗಾವಿ ಮಹಾನಗರ ಪಾಲಿಕೆ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಕಚೇರಿಗೆ ಇಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಪಾಲಿಕೆಯ ಉಪ ಆಯುಕ್ತ ಉದಯಕುಮಾರ್ ತಳವಾರ್ ಅವರಿಗೆ ಪಾಲಿಕೆಯ ಕಚೇರಿಯಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಕೂಡಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಮಾರ್ಕೆಟ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕಾಲಿಮಿರ್ಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಇದೊಂದು ಹುಸಿ ಬಾಂಬ್ ಕರೆ ಎಂದು ಪೊಲೀಸರು ಖಚಿತಪಡಿಸಿದರು.
Next Story




