Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಮಹದಾಯಿ, ಭದ್ರಾ ಮೇಲ್ದಂಡೆ, ಮೇಕೆದಾಟು...

ಮಹದಾಯಿ, ಭದ್ರಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಕೇಂದ್ರ ಸಹಕಾರ ನೀಡುತ್ತಿಲ್ಲ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ6 March 2024 11:07 PM IST
share
ಮಹದಾಯಿ, ಭದ್ರಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಕೇಂದ್ರ ಸಹಕಾರ ನೀಡುತ್ತಿಲ್ಲ : ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಜಿಲ್ಲೆಗೆ 1500 ಕೋಟಿ ರೂ.ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಕೊಡುವ ಮೂಲಕ ಶಾಸಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ಅವರಿಗೆ ಸದ್ಯದಲ್ಲೆ ಒಳ್ಳೆಯ ಭವಿಷ್ಯವಿದೆ. ನಮ್ಮ ಕಾಂಗ್ರೆಸ್ ಸರಕಾರ ಈ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಬುಧವಾರ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿಯ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಯೋಜನೆಯಿಂದ ಎರಡು ರೀತಿಯ ಲಾಭ ಆಗಲಿದೆ. ಮೊದಲಿಗೆ ಒಣ ಭೂಮಿ ಇರುವ ಜಮೀನುಗಳಿಗೆ ನೀರು ಒದಗುತ್ತದೆ. ಎರಡನೆಯದಾಗಿ ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಅಭಿವೃದ್ಧಿ ಆಗುತ್ತದೆ ಎಂದು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಉದಾಹರಣೆಗಳನ್ನು ನೀಡಿ ವಿವರಿಸಿದರು.

ಕೇಂದ್ರ ಸಹಕಾರ ನೀಡುತ್ತಿಲ್ಲ

ಕೇಂದ್ರದ ಹಾಲಿ ಸರಕಾರ ಮತ್ತು ರಾಜ್ಯದಲ್ಲಿ ಈ ಹಿಂದೆ ಇದ್ದ ಬಿಜೆಪಿ ಸರಕಾರ ರಾಜ್ಯದ ಯಾವ ನೀರಾವರಿ ಯೋಜನೆಗಳಿಗೂ ಬೆಂಬಲ ನೀಡಲಿಲ್ಲ. ಕೃಷ್ಣ ಮೇಲ್ದಂಡೆ, ಮಹದಾಯಿ, ಭದ್ರಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಕೇಂದ್ರ ಒಂಚೂರು ಸಹಕಾರ ನೀಡುತ್ತಿಲ್ಲ ಎಂದು ಅವರು ದೂರಿದರು.

ಬೆಳಗಾವಿಯಲ್ಲಿ ಗೆದ್ದಿರುವ ಇಬ್ಬರು ಸಂಸದರು ಸೇರಿ ಬಿಜೆಪಿಯ ಒಬ್ಬೆ ಒಬ್ಬ ಸಂಸದ ಸಂಸತ್ತಿನಲ್ಲಿ ಈ ಬಗ್ಗೆ ಧ್ವನಿ ಎತ್ತಲಿಲ್ಲ. ಇದು ಬೆಳಗಾವಿ ಜನತೆಗೆ, ರಾಜ್ಯದ ಜನತೆಗೆ ಬಿಜೆಪಿ ಸಂಸದರು ಬಗೆದ ದ್ರೋಹ ಅಲ್ಲವೆ ಎಂದು ಮುಖ್ಯಮಂತ್ರಿ ಖಾರವಾಗಿ ಪ್ರಶ್ನಿಸಿದರು.

ನೀರಾವರಿ ಯೋಜನೆಗಳ ಬಗ್ಗೆಯೂ ಈ ಸಂಸದರು ಬಾಯಿಯನ್ನೇ ಬಿಡಲಿಲ್ಲ, ರಾಜ್ಯಕ್ಕೆ ಆರ್ಥಿಕವಾಗಿ ವಂಚಿಸುತ್ತಿರುವ ಬಗ್ಗೆಯೂ ತುಟಿ ಬಿಡದ ಈ ಸಂಸದರಿಗೆ ನೀವು ಕೊಟ್ಟ ಮತಕ್ಕೆ ಏನು ಗೌರವ ಬಂತು ಹೇಳಿ. ಬಿಜೆಪಿ ಇವತ್ತಿನವರೆಗೂ ನುಡಿದಂತೆ ನಡೆದ ಒಂದೇ ಒಂದು ಉದಾಹರಣೆ ಇದೆಯಾ ನೀವೇ ವಿಚಾರ ಮಾಡಿ ಎಂದು ಸಿದ್ದರಾಮಯ್ಯ ಹೇಳಿದರು.

ನಮ್ಮ ಸರಕಾರ ಕೊಟ್ಟ ಮಾತಿನಂತೆ ನಡೆದುಕೊಂಡು ನೀವು ಕೊಟ್ಟ ಮತಕ್ಕೆ ಗೌರವ ಕೊಟ್ಟಿದ್ದೇವೆ. ಹೌದೋ ಇಲ್ಲವೋ ಎದೆ ಮುಟ್ಟಿಕೊಂಡು ಕೇಳಿಕೊಳ್ಳಿ. ನಿಮ್ಮ ಬದುಕಿಗೆ ಆಸರೆ ಆಗುತ್ತಿರುವ, ಕುಟುಂಬದ ಕಷ್ಟಗಳಿಗೆ ಸ್ಪಂದಿಸುವ ಕಾರ್ಯಕ್ರಮ ಕೊಡುತ್ತಿರುವ ನಾವು ಬೇಕೋ-ದೇವರ ಹೆಸರಲ್ಲಿ ನಿಮ್ಮ ಭಾವನೆ ಕೆರಳಿಸಿ ನಿಮ್ಮ ಬದುಕಿಗೆ ವಂಚಿಸುತ್ತಿರುವ ಬಿಜೆಪಿ ಬೇಕಾ? ನಿಮ್ಮ ಹೃದಯವನ್ನು ಕೇಳಿಕೊಳ್ಳಿ. ನಿಮ್ಮ ಹೃದಯ ಹೇಳಿದವರಿಗೆ ಮತ ಹಾಕಿ ಎಂದು ಮುಖ್ಯಮಂತ್ರಿ ಕರೆ ನೀಡಿದರು.

ನರೇಂದ್ರ ಮೋದಿಯವರ ಸುಳ್ಳುಗಳಿಗೆ, ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯಗಳಿಗೆ ಕೋಲೆ ಬಸವನಂತೆ ತಲೆ ಆಡಿಸುವ ಬಿಜೆಪಿಯನ್ನು ತಿರಸ್ಕರಿಸಿ. ನಾವು ಕೆಲಸ ಮಾಡಿ ಕೂಲಿ ಕೇಳುತ್ತಿದ್ದೇವೆ. ಕೆಲಸ ಮಾಡಿದವರಿಗೆ ನೀವು ಕೂಲಿ ಕೊಡಿ ಎಂದು ಅವರು ಮನವಿ ಮಾಡಿದರು.

ನಾಡಿನ ಬಡವರ, ಮಧ್ಯಮ ವರ್ಗದವರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದು ತಪ್ಪಾ? ಆದರೆ ಬಿಜೆಪಿ ಇದನ್ನು ವಿರೋಧಿಸುತ್ತಿದೆ. ನಾಡಿನ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು ಬಿಜೆಪಿ ಅವಮಾನಿಸುತ್ತಿದೆ. ನಿಮ್ಮನ್ನು ಅವಮಾನಿಸುವವರನ್ನು ಕ್ಷಮಿಸಬೇಡಿ ಎಂದು ಸಿದ್ದರಾಮಯ್ಯ ಕರೆ ನೀಡಿದರು

ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಲಕ್ಷ್ಮಣ ಸವದಿ ವಹಿಸಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್, ಶಾಸಕರಾದ ಮಹೇಂದ್ರ ತಮ್ಮಣ್ಣವರ, ಅಶೋಕ್ ಪಟ್ಟಣ್ ಸೇರಿ ಹಲವು ನಾಯಕರು ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X