Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ |...

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ | ತಮ್ಮ ಮೇಲಿನ ಆರೋಪ ಸಂಪೂರ್ಣ ಸುಳ್ಳು : ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ26 Sept 2026 8:09 PM IST
share
ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ | ತಮ್ಮ ಮೇಲಿನ ಆರೋಪ ಸಂಪೂರ್ಣ ಸುಳ್ಳು : ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ


ಬೆಳಗಾವಿ : ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಆರೋಪವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಳ್ಳಿಹಾಕಿದ್ದು, ತಾವು ಯಾವುದೇ ರೀತಿಯ ಹಲ್ಲೆ ಮಾಡಿಲ್ಲ. ತಮ್ಮ ಮೇಲಿನ ಆರೋಪ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯ ಕುವೆಂಪು ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಹಾಗೂ ಕ್ರಷರ್ ಮಾಲೀಕರು ತಮ್ಮನ್ನು ಭೇಟಿ ಮಾಡಿ ವಿದ್ಯುತ್ ಸಮಸ್ಯೆಗಳ ಕುರಿತು ಗಮನ ಸೆಳೆದಿದ್ದರು. ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಹಾಗೂ ಹಲವು ವಿದ್ಯುತ್ ಪರಿವರ್ತಕಗಳು ಸುಟ್ಟುಹೋಗಿರುವ ಬಗ್ಗೆ ಸಮಸ್ಯೆಗಳನ್ನು ತಿಳಿಸಿದ್ದರು. ಕೆಲ ದಿನಗಳ ಹಿಂದೆ ಬಾಳೆಕುಂದರಗಿ ಬಳಿ ರೈತರು ವಿದ್ಯುತ್ ಸಮಸ್ಯೆ ಕುರಿತು ಪ್ರತಿಭಟನೆ ನಡೆಸಿದ್ದರು ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಹಾಗೂ ಕ್ರಷರ್‌ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ವಿಚಾರದ ಕುರಿತು ಚರ್ಚಿಸಲು ಹೆಸ್ಕಾಂ ಸಿಬ್ಬಂದಿಯನ್ನು ಕರೆಸಲಾಗಿತ್ತು ಎಂದು ಅವರು ತಿಳಿಸಿದರು.

‘ನೋಟಿಸ್ ನೀಡಿ, ನಿಯಮಾನುಸಾರವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಹೆಸ್ಕಾಂ ಸಿಬ್ಬಂದಿಗೆ ಸೂಚಿಸಿದ್ದೇನೆ. ಸಿಬ್ಬಂದಿಗೆ ಬುದ್ಧಿವಾದ ಹೇಳಿದ್ದು ನಿಜ. ಆದರೆ ಯಾವುದೇ ರೀತಿಯ ಹಲ್ಲೆ ಮಾಡಿಲ್ಲ’ ಎಂದು ಚನ್ನರಾಜ ಹಟ್ಟಿಹೊಳಿ ಸ್ಪಷ್ಟಪಡಿಸಿದರು.

ತಮ್ಮ ರಾಜಕೀಯ ಜೀವನದಲ್ಲಿ ಇದುವರೆಗೆ ಯಾವುದೇ ಅಧಿಕಾರಿ ಅಥವಾ ಸಾಮಾನ್ಯ ವ್ಯಕ್ತಿಗೆ ಬೈದಿಲ್ಲ. ಅಸಂವಿಧಾನಿಕ ಪದಗಳನ್ನು ಬಳಸಿಲ್ಲ ಎಂದು ಅವರು ಹೇಳಿದರು.

‘ಸುಮಾರು 50ರಿಂದ 60 ಜನರ ಸಮ್ಮುಖದಲ್ಲೇ ಮಾತುಕತೆ ನಡೆದಿದೆ. ಸಮಸ್ಯೆ ಕುರಿತು ಸಿಬ್ಬಂದಿಗೆ ಬುದ್ಧಿವಾದ ಹೇಳುವುದು ತಪ್ಪೇ? ನನ್ನ ಮಾತಿನಿಂದ ಸಿಬ್ಬಂದಿಯ ಮನಸ್ಸಿಗೆ ನೋವಾಗಿದ್ದರೆ, ನನ್ನೊಂದಿಗೆ ಮಾತನಾಡಬಹುದಿತ್ತು. ಆದರೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಮಾಡಿರುವುದು ಶುದ್ಧ ತಪ್ಪು’ ಎಂದು ಹೇಳಿದರು.

ತಮ್ಮನ್ನು ಭೇಟಿ ಮಾಡಲು ಬಂದವರ ಸಮಸ್ಯೆ ಕುರಿತು ಚರ್ಚಿಸುವ ಉದ್ದೇಶದಿಂದಲೇ ಹೆಸ್ಕಾಂ ಸಿಬ್ಬಂದಿಯನ್ನು ಕರೆಸಲಾಗಿತ್ತು. ಸುಮಾರು 5 ನಿಮಿಷ ಮಾತ್ರ ಅವರೊಂದಿಗೆ ಮಾತನಾಡಿದ್ದು, ಯಾವುದೇ ರೀತಿಯ ಹಲ್ಲೆ ನಡೆದಿಲ್ಲ ಎಂದು ಪುನರುಚ್ಚರಿಸಿದರು.

ಹೆಸ್ಕಾಂ ಸಿಬ್ಬಂದಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಸೂಕ್ತ ರೀತಿಯಲ್ಲಿ ನೋಟಿಸ್ ನೀಡಿ, ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಮಾತ್ರ ಸೂಚಿಸಿದ್ದೇನೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.

ಹಲ್ಲೆ ಆರೋಪದ ಹಿನ್ನೆಲೆಯಲ್ಲಿ ಹೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಕುಳಿತು ಮಾತನಾಡಲು ತಾವು ಸಿದ್ಧರಿರುವುದಾಗಿ ಅವರು ಹೇಳಿದರು. ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿ ವಾಸ್ತವಾಂಶ ತಿಳಿದುಕೊಳ್ಳುವುದಾಗಿ ತಿಳಿಸಿದರು.

Tags

Channaraja Hattiholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X