ಚಿಕ್ಕೋಡಿ: ದಿ. ಉಮೇಶ್ ಕತ್ತಿ ಕುರಿತ ಪುಸ್ತಕ ಲೋಕಾರ್ಪಣೆ

ಚಿಕ್ಕೋಡಿ: ದಿ. ಉಮೇಶ್ ಕತ್ತಿ ಅವರ ಕುರಿತ ಕೃತಿ ಲೋಕಾರ್ಪಣೆ ಸಮಾರಂಭವು ಚಿಕ್ಕೋಡಿಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ರಾಜ್ಯದ ಅನೇಕ ಪ್ರಮುಖ ರಾಜಕೀಯ ನಾಯಕರು ಹಾಗೂ ಮಠಾಧೀಶರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಸಚಿವ ಪ್ರಕಾಶ ಹುಕ್ಕೇರಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ರಾಮದುರ್ಗ ಶಾಸಕ ಅಶೋಕ್ ಪಟ್ಟಣ, ಹುಬ್ಬಳ್ಳಿ-ಧಾರವಾಡ ಕೇಂದ್ರ ಶಾಸಕ ಅರವಿಂದ್ ಬೆಲ್ಲದ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ, ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ, ಮಾಜಿ ಶಾಸಕ ಅನಿಲ ಬೆನಕೆ, ಸಂಜಯ ಪಾಟೀಲ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ನಂತರ ದಿ. ಉಮೇಶ್ ಕತ್ತಿ ಅವರ ನಡೆದು ಬಂದ ಹಾದಿಯನ್ನು ಒಳಗೊಂಡ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಿ ಅವರನ್ನು ಸ್ಮರಿಸಲಾಯಿತು.
Next Story





