ರೈತರ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ : ಸಿಎಂ ಡಿ.ಕೆ.ಶಿವಕುಮಾರ್
"ಸಕ್ಕರೆ ಕಾರ್ಖಾನೆ ಮಾಲೀಕರು-ರೈತರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ"

ಬೆಳಗಾವಿ : ರೈತರ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ರೈತರೊಂದಿಗೆ ಚರ್ಚಿಸಿ, ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸುವ ವಿಚಾರದಲ್ಲಿ ಕೇಂದ್ರ ಸರಕಾರದ ಪಾತ್ರ ಶೇ. 90ರಷ್ಟಿದ್ದರೆ, ರಾಜ್ಯ ಸರಕಾರದ ಪಾತ್ರ ಶೇ. 10ರಷ್ಟಿದೆ ಎಂದು ತಿಳಿಸಿದರು.
ಕಬ್ಬು ಬೆಳೆಗಾರರ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರವೂ ಕೇಂದ್ರದ ಮೇಲೆ ಒತ್ತಡ ಹೇರಲಿದೆ. ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಚರ್ಚೆ ನಡೆಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
Next Story




