Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಮನಮೋಹನ್ ಸಿಂಗ್ ಮಧ್ಯಮ ಮತ್ತು ಬಡ ಜನರ...

ಮನಮೋಹನ್ ಸಿಂಗ್ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆ ರೂಪಿಸಿದ ತಜ್ಞ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ27 Dec 2024 6:19 PM IST
share
ಮನಮೋಹನ್ ಸಿಂಗ್ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆ ರೂಪಿಸಿದ ತಜ್ಞ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಶುಕ್ರವಾರ ಬೆಳಗಾವಿ ಕ್ಲಬ್ ರಸ್ತೆಯಲ್ಲಿರುವ ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗತ್ತೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ ಎರಡು ಬಾರಿ ದೇಶದ ಪ್ರಧಾನಿಯಾದರು ಎಂದು ಹೇಳಿದರು.

ಮನಮೋಹನ್ ಸಿಂಗ್ ಅವರಿಗಿಂತ ದೊಡ್ಡ ಆರ್ಥಿಕ ತಜ್ಞರು ಇರಬಹುದು. ಆದರೆ, ಬಹಳ ಮೃದು ಸ್ವಭಾವದ, ಮಿತ ಭಾಷಿಯಾಗಿ ಮಧ್ಯಮ ಮತ್ತು ಬಡ ಜನರ ದೃಷ್ಟಿಯಿಂದ ಈ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ನಾಯಕ ಎಂದು ಮುಖ್ಯಮಂತ್ರಿ ಹೇಳಿದರು.

ನಾನು ಹಲವು ಬಾರಿ ಇವರನ್ನು ಭೇಟಿಯಾಗಿದ್ದೆ. ಸಂಯಮದಿಂದ ನಮ್ಮ ಮಾತನ್ನು ಕೇಳಿಸಿಕೊಂಡು ಬಳಿಕ ಪ್ರಾಮಾಣಿಕ ಅಭಿಪ್ರಾಯ ನೀಡುತ್ತಿದ್ದರು. ತಾವು ಅಲಂಕರಿಸಿದ ಎಲ್ಲ ಹುದ್ದೆಗಳಿಗೂ ನ್ಯಾಯ ಒದಗಿಸಿದವರು. ಆರ್‌ಬಿಐ ಗವರ್ನರ್ ಆಗಿ, ಆರ್ಥಿಕ ಸಚಿವರಾಗಿ, ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಎಲ್ಲ ಹುದ್ದೆಗಳಿಗೂ ಪ್ರಾಮಾಣಿಕ ನ್ಯಾಯ ಒದಗಿಸಿದರು ಎಂದು ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಭಾರತ ಆರ್ಥಿಕ ಸಂಕಷ್ಟದಲ್ಲಿದ್ದಾಗ ಉದಾರೀಕರಣ ಜಾರಿ ಮಾಡಿ ದೇಶವನ್ನು ಆರ್ಥಿಕವಾಗಿ ಮೇಲೆತ್ತಿದರು. ಮನಮೋಹನ್ ಸಿಂಗ್ ಅವರಿಗಿಂತ ಮೊದಲು ದೇಶದ ಆರ್ಥಿಕತೆಯನ್ನು ವಿಶ್ವ ಆರ್ಥಿಕತೆ ಜೊತೆಗೆ ಮುಕ್ತ ಮಾಡಿರಲಿಲ್ಲ. ಇವರು ಮುಕ್ತಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತುಂಬಿದರು ಎಂದು ಅವರು ಹೇಳಿದರು.

ನಮ್ಮ ಸಂವಿಧಾನದ ಮೂಲಭೂತ ಆಶಯಗಳನ್ನು ಮನಮೋಹನ್ ಸಿಂಗ್ ಅಕ್ಷರಶಃ ಜಾರಿ ಮಾಡಿದರು. ಆಹಾರ ಭದ್ರತೆ, ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಹಲವು ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಿ ದೇಶದ ಬಡವರು, ಮಧ್ಯಮವರ್ಗದವರನ್ನು ಆರ್ಥಿಕವಾಗಿ ಮೇಲೆತ್ತುವುದರಲ್ಲಿ ಯಶಸ್ವಿಯಾದರು ಎಂದು ಅವರು ಹೇಳಿದರು.

ಮನಮೋಹನ್ ಸಿಂಗ್ ಅವರ ಅಗಲಿಕೆ ಇಡೀ ವಿಶ್ವದ ಆರ್ಥಿಕತೆಗೆ ಆಗಿರುವ ನಷ್ಟ. ಬೆಂಗಳೂರಿನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನಾವು ಆರಂಭಿಸಿದಾಗ ಮನಮೋಹನ್ ಸಿಂಗ್ ಅವರನ್ನು ಕರೆಸಿದ್ದೆವು. ಕರ್ನಾಟಕದ ಆರ್ಥಿಕತೆ ಬಗ್ಗೆ ಒಂದು ಕಾರ್ಯಕ್ರಮಕ್ಕೆ ನಾವು ಕರೆಸಿದ್ದೆವು. ಆಗ, ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕತೆ ಅತ್ಯಂತ ಸದೃಢವಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದರು. ಅವರ ಜ್ಞಾನ ಭಾರತದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಯಿತು ಎಂದು ಅವರು ಅಭಿಪ್ರಾಯ ಪಟ್ಟರು.

ದೇಶದ ಆರ್ಥಿಕ ಸಮಸ್ಯೆಗಳನ್ನು ನಿಖರವಾಗಿ ಗ್ರಹಿಸಿ, ಪರಿಹರಿಸುತ್ತಿದ್ದ ಅವರು ನಿಗರ್ವಿ ಆಗಿದ್ದರು. ಅತ್ಯಂತ ವಿನಯಶೀಲರಾಗಿದ್ದರು. ನಾನು ಬದುಕಿರುವಾಗ ನನ್ನ ಕೆಲಸಗಳಿಗೆ ಹೆಚ್ಚು ಮಾನ್ಯ ಸಿಗದಿದ್ದರೂ ನಾನು ಸತ್ತ ನಂತರ ನಮ್ಮ ಕೆಲಸಗಳಿಗೆ ಹೆಚ್ಚು ಮಹತ್ವ ಸಿಗಲಿದೆ ಎಂದು ಮನಮೋಹನ್ ಸಿಂಗ್ ಅವತ್ತೇ ಹೇಳಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X