Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು,...

ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ4 Oct 2025 3:19 PM IST
share
ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಸರಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನೆ, ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಲ್ಲಿ ನಿರ್ಮಾಣಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆ, ರಾಣಿ ಚನ್ನಮ್ಮ ವಿವಿಯ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ಪಿ.ಎಂ ಉಷಾ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿವಿಯ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಬರೀ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು. ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂದರು.

ಸದ್ಯ ಪ್ರಭಾಕರ್ ಕೋರೆ ಅವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರಕಾರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕಾಗಿ ಕೋರೆ ಅವರಿಗೆ ಅಭಿನಂದಿಸುತ್ತೇನೆ ಎಂದರು.

ನಮ್ಮ ಸರಕಾರ ಅಸಮಾನತೆಯನ್ನು ಅಳಿಸುವ ದಿಕ್ಕಿನಲ್ಲಿ ತಳ ಸಮುದಾಯಗಳಿಗೆ ಅವಕಾಶ ಮತ್ತು ಅನುಕೂಲಗಳನ್ನು ಕಲ್ಪಿಸುತ್ತಿದೆ. ಅಸಮಾನತೆ ಇರುವವರೆಗೆ ತಳ ಸಮುದಾಯಗಳ ಜನ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದರು.

ಬುದ್ದ-ಬಸವ-ಗಾಂಧಿ-ಅಂಬೇಡ್ಕರ್ ಆಶಯದಂತೆ ನಮ್ಮ ಸರಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಸಮಾಜದ ಕಟ್ಟ ಕಡೆಯವರಿಗೂ ಅಭಿವೃದ್ಧಿ ತಲುಪಿದಾಗ ಮಾತ್ರ ಸಮಾಜದ, ದೇಶದ ಅಭಿವೃದ್ಧಿ ಸಾಧ್ಯ ಎನ್ನುವುದು ಎಲ್ಲರ ಆಶಯವಾಗಿದೆ. ಹೀಗಾಗಿ ಎಲ್ಲರ ಕಲ್ಯಾಣ ಕಾರ್ಯಕ್ರಮಗಳನ್ನು ನಾವು ರೂಪಿಸುತ್ತಿದ್ದೇವೆ ಎಂದು ಅವರು ವಿವರಿಸಿದರು.

ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಈಗ ಜಾರಿಗೆ ತಂದಿರುವ ಗ್ಯಾರಂಟಿಗಳು ರಾಜ್ಯದ ಜನರ ಕೊಳ್ಳುವ ಶಕ್ತಿಯನ್ನು, ತಲಾ ಆದಾಯವನ್ನು ಹೆಚ್ಚಿಸಿ‌ ಮಹಿಳೆಯರನ್ನೂ ಆರ್ಥಿಕವಾಗಿ ಸಬಲರನ್ನಾಗಿ ಮಾಡಿದೆ ಎಂದರು.

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶೇ.95ರಷ್ಟು ಅಧಿಕ ಮಳೆಯಾಗಿ ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಬೆಳೆ ನಾಶ ಆಗಿರುವ ಅಂದಾಜಿದೆ. ಈ ಬೆಳೆ ಹಾನಿಗೆ ದಾಖಲೆ ಮೊತ್ತದ ಪರಿಹಾರ ಹಣ ನೀಡಿ ರೈತರು, ಬೆಳೆಗಾರರು, ಕೃಷಿಕರ ನೆರವಿಗೆ ಧಾವಿಸಿದ್ದೇವೆ ಎಂದರು.

ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ರಾಮಲಿಂಗಾರೆಡ್ಡಿ, ಎಂ.ಸಿ.ಸುಧಾಕರ್ ಸೇರಿ ಹಲವು ಗಣ್ಯರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X