Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಮರಾಠಿಯಲ್ಲಿ ಮಾತು ಆರಂಭಿಸಿದ ಶಾಸಕ...

ಮರಾಠಿಯಲ್ಲಿ ಮಾತು ಆರಂಭಿಸಿದ ಶಾಸಕ ಹಲಗೇಕರಗೆ ವೇದಿಕೆಯಲ್ಲೇ ʼಕನ್ನಡ ಪಾಠʼ ಮಾಡಿದ ಸಿಎಂ ಸಿದ್ದರಾಮಯ್ಯ!

ವಾರ್ತಾಭಾರತಿವಾರ್ತಾಭಾರತಿ19 Jan 2026 11:38 PM IST
share
ಮರಾಠಿಯಲ್ಲಿ ಮಾತು ಆರಂಭಿಸಿದ ಶಾಸಕ ಹಲಗೇಕರಗೆ ವೇದಿಕೆಯಲ್ಲೇ ʼಕನ್ನಡ ಪಾಠʼ ಮಾಡಿದ ಸಿಎಂ ಸಿದ್ದರಾಮಯ್ಯ!

ಬೆಳಗಾವಿ: ಮರಾಠಿಯಲ್ಲಿ ಭಾಷಣ ಆರಂಭಿಸಿದ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆಯಲ್ಲೇ ಕನ್ನಡ ಕಲಿಯುವಂತೆ ಕಿವಿಮಾತು ಹೇಳಿದ ಘಟನೆ ನಂದಗಡದಲ್ಲಿ ನಡೆದ ʼವೀರಭೂಮಿʼ ಉದ್ಘಾಟನಾ ಸಮಾರಂಭದಲ್ಲಿ ಗಮನ ಸೆಳೆಯಿತು.

ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಸೋಮವಾರ ಸಂಗೊಳ್ಳಿ ರಾಯಣ್ಣನ ವಸ್ತು ಸಂಗ್ರಹಾಲಯ ʼವೀರಭೂಮಿʼ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, "ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡ ಕಲಿಯುವಂಥ ವಾತಾವರಣ ನಿರ್ಮಾಣ ಮಾಡಬೇಕು. ಯಾರು ಎಲ್ಲಿಂದ ಬಂದಿರಲಿ, ಕನ್ನಡ ನೆಲದ ಹೆಸರು ಹೇಳುವ ಮುನ್ನ ಕನ್ನಡ ಕಲಿಯಬೇಕು. ಅದನ್ನು ಅನಿವಾರ್ಯ ಮಾಡಬೇಕು. ಆಗ ಮಾತ್ರ ಕರ್ನಾಟಕ ಏಕೀಕರಣಕ್ಕೆ ನಿಜವಾದ ಅರ್ಥ ಸಿಗುತ್ತದೆ" ಎಂದು ಹೇಳಿದರು.

ಮರಾಠಿ ಭಾಷಣಕ್ಕೆ ಜನರಿಂದ ವಿರೋಧ

ಇದಕ್ಕೂ ಮುನ್ನ ಅಧ್ಯಕ್ಷೀಯ ಭಾಷಣಕ್ಕೆ ನಿಂತ ಶಾಸಕ ವಿಠ್ಠಲ ಹಲಗೇಕರ ಮರಾಠಿಯಲ್ಲಿ ಮಾತು ಆರಂಭಿಸುತ್ತಿದ್ದಂತೆ ಜನಸ್ತೋಮದಿಂದ ʼಕನ್ನಡ,ಕನ್ನಡʼ ಎಂಬ ಘೋಷಣೆಗಳು ಮೊಳಗಿದವು. ಕೂಗಾಟ ಹೆಚ್ಚಾದಾಗ ಅವರು, "ನನಗೆ ಕನ್ನಡ ಸರಿಯಾಗಿ ಬರುವುದಿಲ್ಲ ಎಂಬುದು ನಿಮಗೆ ಗೊತ್ತು. ಸಿದ್ದರಾಮಯ್ಯ ಅವರಿಗೆ ಮರಾಠಿ ಅರ್ಥವಾಗುವುದಿಲ್ಲ ಎಂಬುದು ನನಗೂ ಗೊತ್ತು. ನನ್ನ ಮನವಿಗಳನ್ನು ಕನ್ನಡದಲ್ಲೇ ಬರೆಸಿ ತಂದಿದ್ದೇನೆ. ಖಾನಾಪುರದಲ್ಲಿ ಕನ್ನಡ-ಮರಾಠಿ ಎಂಬ ಭೇದವಿಲ್ಲ, ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ" ಎಂದು ಮರಾಠಿಯಲ್ಲೇ ಪ್ರತಿಕ್ರಿಯಿಸಿದರು. ಗಲಾಟೆ ತೀವ್ರಗೊಂಡ ಹಿನ್ನೆಲೆಯಲ್ಲಿ ಅವರು ನಂತರ ಕನ್ನಡದಲ್ಲೇ ಮನವಿ ಓದಿದರು.

"ಕನ್ನಡದ ಅನ್ನ ಉಂಡಮೇಲೆ ಕನ್ನಡ ಕಲಿಯಿರಿ"

ಉದ್ಘಾಟನಾ ಭಾಷಣದಲ್ಲಿ ಮುಖ್ಯಮಂತ್ರಿ, "ಏನಯ್ಯ ವಿಠ್ಠಲ, ಕನ್ನಡ ಅರ್ಥವಾಗುತ್ತದೆಯೇ?" ಎಂದು ಪ್ರಶ್ನಿಸಿದರು. "ಅರ್ಥವಾಗುತ್ತದೆ ಸರ್‌" ಎಂದು ಹಲಗೇಕರ ಉತ್ತರಿಸಿದರು. ಆಗ ಸಿದ್ದರಾಮಯ್ಯ,"ಇಲ್ಲಿರುವವರು ಮಾತ್ರವಲ್ಲ, ಯಾರು ಎಲ್ಲೇ ಇರಲಿ, ಕನ್ನಡದ ಅನ್ನ ಉಂಡಮೇಲೆ ಕನ್ನಡ ಕಲಿಯಲೇಬೇಕು" ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವರು, ಜನಪ್ರತಿನಿಧಿಗಳು ಹಾಗೂ ಸಾವಿರಾರು ಜನ ಭಾಗವಹಿಸಿದ್ದರು.

ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ.

ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ರಾಜ್ಯದಲ್ಲಿ ಕನ್ನಡ ಕಲಿಯದೆಯೇ ಬದುಕಬಹುದಾದ ವಾತಾವರಣವಿದೆ. ಕನ್ನಡ ಕಲಿಯಲೇಬೇಕಾದ ಅನಿವಾರ್ಯತೆ ಇಲ್ಲ. ಬೇರೆ ಭಾಷೆಯಲ್ಲಿ ಮಾತನಾಡುವವರೊಂದಿಗೆ ನಾವು ಕನ್ನಡದಲ್ಲಿಯೇ ಮಾತನಾಡಬೇಕು. pic.twitter.com/WPDeLd8F6n

— Siddaramaiah (@siddaramaiah) January 19, 2026

Tags

CM SiddaramaiahKannadaHalagekarBelagavi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X