Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ...

ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್‌ನಿಂದ ಸುವರ್ಣಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 Dec 2025 12:58 PM IST
share
ಕೇಂದ್ರದ  ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್‌ನಿಂದ ಸುವರ್ಣಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ
‘ನ್ಯಾಷನಲ್ ಹೆರಾಲ್ಡ್ ಪ್ರಕರಣʼ ಬಿಜೆಪಿ ಕುತಂತ್ರಕ್ಕೆ ನ್ಯಾಯಾಲಯದಲ್ಲಿ ನ್ಯಾಯ ಸಿಕ್ಕಿದೆ : ಸಿದ್ದರಾಮಯ್ಯ

ಬೆಳಗಾವಿ : ಕೇಂದ್ರ ಸರಕಾರವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ, ಇಲ್ಲಿನ ಸುವರ್ಣ ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು‌ ಬುಧವಾರ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಸಚಿವರು, ಶಾಸಕರು ಪಾಲ್ಗೊಂಡಿದ್ದರು. ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರು ಬಿಜೆಪಿ, ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದರು.‌

ಬಿಜೆಪಿ ಕುತಂತ್ರಕ್ಕೆ ನ್ಯಾಯಾಲಯದಲ್ಲಿ ನ್ಯಾಯ ಸಿಕ್ಕಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಪ್ರಕರಣಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ತಿಳಿಸಿದರು.

ಬಿಜೆಪಿಯವರದ್ದು ದ್ವೇಷದ ರಾಜಕಾರಣ. ಕೇಂದ್ರ ಅಥವಾ ರಾಜ್ಯಗಳಾಗಲಿ, ಬಿಜೆಪಿ ಅಧಿಕಾರದಲ್ಲಿರುವ ಕಡೆಗಳೆಲ್ಲ ಕಾಂಗ್ರೆಸ್ ನವರನ್ನು ಗುರಿಯಾಗಿಸಿ, ಅವರನ್ನು ಅಪರಾಧಿಗಳಾಗಿ ಬಿಂಬಿಸಿ, ನ್ಯಾಯಾಲಯಕ್ಕೆ ಎಡತಾಕುವಂತೆ ಮಾಡುತ್ತಿದ್ದಾರೆ. ಇಂತಹ ಅಸತ್ಯವಾದ ವಿಚಾರವನ್ನು ಮುನ್ನಲೆಗೆ ತಂದು ಬಿಜೆಪಿಯು ದುರುದ್ದೇಶದಲ್ಲಿ ತೊಡಗಿದೆ ಎಂದು ಅವರು ಕಿಡಿಗಾರಿದರು.

ಬಿಜೆಪಿಯವರು ತಮ್ಮ ತಪ್ಪುಗಳನ್ನು ಮರೆಮಾಚಲು ಇಂತಹ ದುಷ್ಕೃತ್ಯ ಕ್ಕೆ ಕೈಹಾಕಿದ್ದಾರೆ. ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ದೇಶದಲ್ಲಿ ಹಣದುಬ್ಬರ ಹೆಚ್ಚಿದ್ದು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜನರ ಮೇಲೆ ತೆರಿಗೆಗಳನ್ನು ಮನಬಂದಂತೆ ಹೇರಿ, ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಸುಳ್ಳು ಪ್ರಕರಣಕ್ಕೆ ಮೊರೆ ಹೋಗುವ ಬಿಜೆಪಿ:

ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಾಲ ಸುಮಾರು 53.11 ಲಕ್ಷ ಕೋಟಿ ರೂ. ಆಗಿತ್ತು. ಆದರೆ ಮೋದಿ ಅಧಿಕಾರಕ್ಕೆ ಬಂದ ನಂತರ ಸಾಲದ ಮೊತ್ತ ಸುಮಾರು 2 ಲಕ್ಷ ಕೋಟಿ ರೂ.ಗಳನ್ನೂ ಮೀರಿದೆ. ಕಳೆದ 11 ವರ್ಷಗಳಲ್ಲಿ ಈ ಸಾಲದ ಮೊತ್ತವು 148 ಲಕ್ಷ ಕೋಟಿ ರೂ. ಹೆಚ್ಚಾಗಿದೆ. ಬಿಜೆಪಿಯವರು ತಮ್ಮ ಈ ತಪ್ಪನ್ನು ಮರೆಮಾಚಲು ಇಂತಹ ಸುಳ್ಳು ಪ್ರಕರಣಗಳ ಮೊರೆಹೋಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ಮೋದಿಯ ಸುಳ್ಳು ಭರವಸೆ:

ಪ್ರತಿವರ್ಷ 2 ಕೋಟಿ ಉದ್ಯೋಗವನ್ನು ಸೃಷ್ಟಿಸುವುದಾಗಿ ಘೋಷಿಸಿದ್ದರು. ವಿದೇಶದಲ್ಲಿನ ಕಪ್ಪುಹಣವನ್ನು ದೇಶಕ್ಕೆ ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದರು. ಈ ಯಾವುದೇ ಭರವಸೆಗಳನ್ನು ಮೋದಿ ಈಡೇರಿಸಲಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇತ್ತೀಚೆಗೆ ದೈನಂದಿನ ಬಳಕೆಯ ಪೆಟ್ರೋಲ್, ಡೀಸೆಲ್, ಅನಿಲ ಬೆಲೆಗಳು ಗಗನಕ್ಕೇರಿವೆ. ಬಿಜೆಪಿಯವರು ತಮ್ಮ ಇಂತಹ ತಪ್ಪುಗಳನ್ನು ಮರೆಮಾಚಲು, ಇಂತಹ ಸುಳ್ಳು ಪ್ರಕರಣಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ, ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದರು.

1937ರಲ್ಲಿ ಜವಾಹರ್ ಲಾಲ್ ನೆಹರೂ ರವರು ದೇಶದ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಾರಂಭಿಸಿದರು, ಇದು ಕಾಂಗ್ರೆಸ್ ಪಕ್ಷದ ಆಸ್ತಿ. ನಂತರ ಈ ಪತ್ರಿಕೆಯನ್ನು ಯಂಗ್ ಇಂಡಿಯಾ ಸಂಸ್ಥೆ ವಹಿಸಿಕೊಂಡಿತು. ಸಂಸ್ಥೆಗೆ ಸೇರಿದ್ದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ ಮತ್ತು ಆಸ್ಕರ್ ಫರ್ನಾಂಡಿಸ್‌ ಇವರ ಮೇಲೆ ಪ್ರಕರಣ ದಾಖಲಿಸಿ, ಈ.ಡಿ ತನಿಖೆಯನ್ನು ಮಾಡಿಸಲಾಯಿತು ಎಂದು ಅವರು ಹೇಳಿದರು.

2012ರಲ್ಲಿ ಬಿಜೆಪಿ ನಾಯಕ ಸುಬ್ರಮಣ್ಯಂಸ್ವಾಮಿ ಇವರ ವಿರುದ್ಧ ದಾವೆ ಹೂಡಿದ್ದರು. ಪ್ರಸ್ತುತ ಈ.ಡಿ ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿದೆ. ಈ ಪ್ರಕರಣವನ್ನು ಸುಳ್ಳು ಎಂದು ಹೈಕೋರ್ಟ್ ನ್ಯಾಯವನ್ನು ಎತ್ತಿಹಿಡಿದಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಹೆಸರು ಬದಲಾಯಿಸುವುದಷ್ಟೇ ಬಿಜೆಪಿ ಕಾಯಕ:

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಯನ್ನು ಬದಲಿಸಿ ‘ವಿಬಿ-ಜಿ ರಾಮ್ ಜಿ’ ಯೋಜನೆ ಎಂದು ಬದಲಿಸಿದ್ದಾರೆ. ರಾಜಭವನವನ್ನು ಇಂದು ಲೋಕಭವನ ಎಂದು ಬದಲಾಯಿಸಿದ್ದಾರೆ. ಇದು ಸರಕಾರದ ಆಸ್ತಿಯಾಗಿದ್ದು, ಇದರ ಹೆಸರನ್ನು ಬದಲಾವಣೆ ಮಾಡಿದ್ದು ಸರಿಯಲ್ಲ. ಬಿಜೆಪಿ ಹೆಸರು ಬದಲಾಯಿಸುವ ಕಾರ್ಯದಲ್ಲಿ ನಿರತವಾಗಿದೆಯೆ ಹೊರತು ಬಡವರಿಗೆ ಅನುಕೂಲ ಕಲ್ಪಿಸುವ ಕೆಲಸವನ್ನು ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯವರಿಗೆ ಬಡವರ ಬಗ್ಗೆ ಕಾಳಜಿಯಿಲ್ಲ:

ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ರವರ ಚಿಂತನೆಗಳನ್ನು ಇಷ್ಟಪಡದ ಬಿಜೆಪಿಯವರಿಗೆ ಬಡವರನ್ನೂ ಕಂಡರೂ ಆಗುವುದಿಲ್ಲ. ಬಡವರಿಗೆಂದು ತಂದಿರುವ ಯಾವುದೆ ಯೋಜನೆಗಳಿಗೆ ಬಿಜೆಪಿಯವರ ಒಪ್ಪಿಗೆ ಇಲ್ಲ. ಬಡವರು, ದೀನ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರನ್ನು ಕಡೆಗಣಿಸುವ ಬಿಜೆಪಿಯವರು, ಕರ್ನಾಟಕದಲ್ಲಿ ಬಡವರಿಗಾಗಿ ತಂದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದರು. ಆದರೆ ಈ ಜನಪರ ಯೋಜನೆಯನ್ನು ದೇಶದೆಲ್ಲೆಡೆ ಬಿಜೆಪಿ ಅನುಸರಿಸುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿ, ದ್ವೇಷದ ರಾಜಕಾರಣ ಬಿಜೆಪಿ ಆಸ್ತಿ: ಡಿ.ಕೆ.ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿ. ದ್ವೇಷ ರಾಜಕಾರಣ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಪ್ರಕರಣಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ಮಂಗಳವಾರ ಬಂದ ನ್ಯಾಯಾಲಯದ ಆದೇಶವೆ ಸಾಕ್ಷಿ. ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ, ದ್ವೇಷದಿಂದ ಕುಗ್ಗಿಸಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ಸುವರ್ಣ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ನಡೆಸಿದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ಎಷ್ಟೇ ಪಿತೂರಿ ಮಾಡಿದರೂ ನಮಗೆ ನ್ಯಾಯ ಸಿಕ್ಕಿದೆ. ಬಿಜೆಪಿ ಎಂದರೆ ಬುರುಡೆ ಜನತಾ ಪಕ್ಷವಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಜೈಲಿಗೆ ಹಾಕಲು ಪಿತೂರಿ ಮಾಡಲಾಗಿದೆ. ಈ ದ್ವೇಷ ರಾಜಕಾರಣ ಇಲ್ಲಿಗೆ ಕೊನೆಯಾಗಬೇಕು. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಈ ಪ್ರತಿಭಟನೆ ಮುಂದುವರಿಯಲಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜೊತೆ ನಿಂತು ಅವರ ಕೈ ಬಲಪಡಿಸೋಣ ಎಂದು ಅವರು ಕರೆ ನೀಡಿದರು.

ಈ ಪ್ರಕರಣದಲ್ಲಿ ಈ.ಡಿ ಸಂಸ್ಥೆ ನನಗೆ, ನನ್ನ ಸಹೋದರನಿಗೆ, ದಿವಂಗತ ಶಾಮನೂರು ಶಿವಶಂಕರಪ್ಪ ಹಾಗೂ ಅವರ ಕುಟುಂಬದವರಿಗೆ ನೋಟೀಸ್ ನೀಡಿತ್ತು. ಈ ಸಂಸ್ಥೆಗೆ ನಮ್ಮ ಅನೇಕ ಕಾರ್ಯಕರ್ತರು ದೇಣಿಗೆ ನೀಡಿದ್ದಾರೆ. ಆಸ್ಕರ್ ಫರ್ನಾಂಡಿಸ್‌ ಈ ಸಂಸ್ಥೆಯ ಮಂಡಳಿಯ ನಿರ್ದೇಶಕರಾಗಿ ಕೆಲಸ ಮಾಡಿದ್ದರು ಎಂದು ಅವರು ಹೇಳಿದರು.

Tags

CongressProtest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X