Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಅಧಿಕಾರಿಗಳು ಜನರ ಬಳಿ ತೆರಳಿ...

ಅಧಿಕಾರಿಗಳು ಜನರ ಬಳಿ ತೆರಳಿ ಸಮಸ್ಯೆಗಳನ್ನು ಆಲಿಸಿ: ಡಿಸಿಎಂ ಜಿ.ಪರಮೇಶ್ವರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 July 2026 7:23 PM IST
share
ಅಧಿಕಾರಿಗಳು ಜನರ ಬಳಿ ತೆರಳಿ ಸಮಸ್ಯೆಗಳನ್ನು ಆಲಿಸಿ: ಡಿಸಿಎಂ ಜಿ.ಪರಮೇಶ್ವರ್ ಸೂಚನೆ

ಬೆಳಗಾವಿ : ರಾಜ್ಯದ ಅಭಿವೃದ್ಧಿಯ ಬಗ್ಗೆ ಹೊಸ ಆಲೋಚನೆ, ದೃಷ್ಟಿಕೋನ ಹೊಂದಿರುವ ಮುಖ್ಯಮಂತ್ರಿಯ ಆಶಯದಂತೆ ಕೆಲಸಗಳು ತೀಕ್ಷ್ಣವಾಗಿ ಆಗಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಗುರುವಾರ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಪ್ರಾದೇಶಿಕ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಎಲ್ಲ ಜಿಲ್ಲೆಗಳ ಡಿಸಿ, ಸಿಇಒ, ಎಸ್‍ಪಿ ಹಾಗೂ ಇತರೆ ಅಧಿಕಾರಿಗಳು ಅಭಿವೃದ್ಧಿಯ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಜನರ ಬಳಿ ತೆರಳಿ ಅವರ ಸಮಸ್ಯೆಗಳನ್ನು ಆಲಿಸಬೇಕು. ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಗೆ ಪೂರಕವಾಗಿವೆ. ಗ್ಯಾರಂಟಿ ಅನುಷ್ಠಾನದಿಂದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂಬ ಪ್ರತಿಪಕ್ಷಗಳ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಅವರು ತಿಳಿಸಿದರು.

ಈ ಬಾರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕುಂಠಿತವಾಗಿದೆ. ಈ ಭಾಗದಲ್ಲಿ ಒಟ್ಟಾರೆ ಶೇ.17ರಷ್ಟು ಮಳೆ ಕೊರತೆಯಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾ-ತಾಲ್ಲೂಕು ಮಟ್ಟದ ಟಾಸ್ಕ್‌ ಫೋರ್ಸ್‍ಗಳು ನಿಯಮಿತವಾಗಿ ಸಭೆ ನಡೆಸಿ, ಎದುರಾಗಬಹುದಾದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ನಿರ್ದೇಶಿಸಿದರು.

ಮೇವಿನ ಕೊರತೆ ಆಧರಿಸಿ ಮೇವಿನ ಕಿಟ್‍ಗಳನ್ನು ನೀಡಬೇಕು. ಮಳೆ ಪ್ರಮಾಣವನ್ನು ನಿಖರವಾಗಿ ತಿಳಿಯಲು ಮಳೆ ಮಾಪನ ಕೇಂದ್ರಗಳನ್ನು ಆಧುನಿಕರಣಗೊಳಿಸಬೇಕು. ಬೆಳಗಾವಿ ಕಂದಾಯ ವಿಭಾಗದ ಜಿಲ್ಲೆಗಳಲ್ಲಿ ಭೂಸುರಕ್ಷಾ ಯೋಜನೆಯ ಶೇ.14.88ರಷ್ಟು ದಾಖಲೆಗಳ ಡಿಜಿಟಲೀಕರಣ ಬಾಕಿ ಇದೆ. ಇದನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.

ಅಲ್ಲದೇ, ಒಟ್ಟು 1457 ಹೊಸ ಕಂದಾಯ ಗ್ರಾಮ ರಚನೆ ಮಾಡಬೇಕಾಗಿದ್ದು, ಇದರಲ್ಲಿ 937 ಗ್ರಾಮಗಳಿಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಜನಗಣತಿ-2027ರ ಕಾರಣ ಅಂತಿಮ ಅಧಿಸೂಚನೆ ಹೊರಡಿಸುವುದು ಬಾಕಿಯಿದೆ. ಜನಗಣತಿ ಕಾರ್ಯಪೂರ್ಣಗೊಂಡ ನಂತರ ಯಾವುದೇ ವಿಳಂಬಕ್ಕೆ ಆಸ್ಪದ ಕೊಡದೆ ಕ್ರಮವಹಿಸಬೇಕು ಎಂದು ಪರಮೇಶ್ವರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Tags

DCM G.Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X