Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಂವಿವಿಯಲ್ಲಿ ಮನಮೋಹನ್ ಸಿಂಗ್...

ಬೆಂವಿವಿಯಲ್ಲಿ ಮನಮೋಹನ್ ಸಿಂಗ್ ಹೆಸರಿನಲ್ಲಿ ಅಧ್ಯಯನ ಕೇಂದ್ರ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ27 Dec 2024 6:23 PM IST
share
ಬೆಂವಿವಿಯಲ್ಲಿ ಮನಮೋಹನ್ ಸಿಂಗ್ ಹೆಸರಿನಲ್ಲಿ ಅಧ್ಯಯನ ಕೇಂದ್ರ : ಡಿ.ಕೆ.ಶಿವಕುಮಾರ್

ಬೆಳಗಾವಿ : ಬೆಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೆಸರಿನಲ್ಲಿ ಆರ್ಥಿಕ ಸಂಶೋಧನಾ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪನೆ ಮಾಡಬೇಕೆಂದು ಉನ್ನತ ಶಿಕ್ಷಣ ಸಚಿವರಲ್ಲಿ ಮನವಿ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಂದಿನ ಪೀಳಿಗೆಗೆ ಮನಮೋಹನ್ ಸಿಂಗ್‍ರ ಆರ್ಥಿಕ ಕ್ರಾಂತಿ ಸೇರಿದಂತೆ ದೇಶಕ್ಕೆ ನೀಡಿದ ಕೊಡುಗೆಗಳನ್ನು ತಲುಪಿಸುವುದೇ ನಿಜವಾದ ಶ್ರದ್ಧಾಂಜಲಿ. ವಿದ್ಯಾರ್ಥಿಗಳು ಇವರ ಆರ್ಥಿಕ ನೀತಿಗಳನ್ನು ಅಧ್ಯಯನ ಮಾಡುವ ಮೂಲಕ ಮನಮೋಹನ್ ಸಿಂಗ್ ಅವರ ಜ್ಞಾನವನ್ನು ಪಸರಿಸುವ ಹಾಗೂ ಉಳಿಸುವ ಕೆಲಸವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಮನಮೋಹನ್ ಸಿಂಗ್ ಈ ದೇಶದ ಶ್ರೇಷ್ಠ ಪ್ರಧಾನ ಮಂತ್ರಿ. ದೇಶದ ಎಲ್ಲ ವರ್ಗದ ಜನರನ್ನು ಕಾಪಾಡಿದ ನಿಜವಾದ ಆರ್ಥಿಕ ತಜ್ಞ ಹಾಗೂ ಕ್ರಾಂತಿಕಾರಿ. ಮನಮೋಹನ್ ಸಿಂಗ್ ಪುಣ್ಯದ ಹಾಗೂ ಅಭಿವೃದ್ಧಿಯ ಬೀಜವನ್ನು ಬಿತ್ತಿ ಹೋಗಿದ್ದಾರೆ ಅದನ್ನು ನಾವು ಬೆಳೆಸೋಣ ಉಳಿಸೋಣ ಎಂದು ಅವರು ಹೇಳಿದರು.

‘ಗಾಂಧಿಯವರ ಇತಿಹಾಸವನ್ನು ಮೆಲುಕು ಹಾಕಲು ಇಡೀ ದೇಶದ ಮೂಲೆ ಮೂಲೆಗಳಿಂದ ನಾಯಕರು ಬೆಳಗಾವಿಗೆ ಬಂದಿದ್ದರು. ನಮ್ಮ ಮುಂದಿನ ಪೀಳಿಗೆಗೆ ಗಾಂಧಿ ಅವರ ಆದರ್ಶಗಳನ್ನು ತಲುಪಿಸುವ ಕೆಲಸಕ್ಕೆ ನಾವು ಮುಂದಾಗಿದ್ದೆವು. ಆದರೆ, ವಿಧಿಯಾಟ ಬೇರೆಯಾಗಿತ್ತು’ ಎಂದು ಅವರು ಹೇಳಿದರು.

ಇಡೀ ಗಾಂಧಿ ಭಾರತ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ ಸಾಕ್ಷಿಯಾಗಲಿ ಎಂದು ಝೂಮ್ ಆಪ್ ಮುಖಾಂತರ ಅವರಿಗೆ ಕಾರ್ಯಕ್ರಮದ ಕೊಂಡಿಯನ್ನು ಕಳಿಸಲಾಗಿತ್ತು. ವೇಣುಗೋಪಾಲ್ ಸಲಹೆಯಂತೆ ಮನಮೋಹನ್ ಸಿಂಗ್ ಅವರನ್ನು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ನಾವು ಬಯಸಿದ್ದೆವು. ಈ ಕಾರಣಕ್ಕೆ ಅವರ ಕಚೇರಿಯನ್ನು ಸಂಪರ್ಕಿಸಿದಾಗ ಸಿಂಗ್ ಅವರ ಆರೋಗ್ಯ ಸರಿ ಇಲ್ಲ, ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ದೊರೆಯಿತು. ಅವರು ಆರೋಗ್ಯಯುತವಾಗಿ ಮರಳಿ ಬರುವ ವಿಶ್ವಾಸವಿತ್ತು. ಆದರೆ ಇಂದು ಅವರು ನಮ್ಮ ಜೊತೆಯಲ್ಲಿಲ್ಲ ಎಂದು ಅವರು ನುಡಿದರು.

‘ನಾವೆಲ್ಲರೂ ಗಾಂಧಿ ಭಾರತ ಕಾರ್ಯಕ್ರಮ ಮಾಡಲು ಸಜ್ಜಾಗಿದ್ದೆವು ಆದರೆ, ಇದೇ ಚಪ್ಪರದ ಅಡಿಯಲ್ಲಿ ಆರ್ಥಿಕತೆಯ ಗಾಂಧಿ ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಭೆಯನ್ನು ನಡೆಸುತ್ತಿದ್ದೇವೆ. ಇದನ್ನೇ ವಿಧಿಯಾಟ ಎಂದು ಕರೆಯಲಾಗುತ್ತದೆ. ಇದು ಅತ್ಯಂತ ದುಃಖದ ಸಂಗತಿ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

‘ತಮ್ಮ ಆಡಳಿತ ಅವಧಿಯಲ್ಲಿ ಸಿಂಗ್ ರೂಪಿಸಿರುವ ಕಾಯ್ದೆಗಳು ಕರಾರುವಕ್ಕಾಗಿದ್ದವು. ಶಿಕ್ಷಣ ಹಕ್ಕು, ಆರೋಗ್ಯದ ಹಕ್ಕು, ಆಹಾರದ ಹಕ್ಕನ್ನು ಪ್ರತಿಪಾದಿಸಿದವರು. ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡಲು ಆಶಾ ಕಾರ್ಯಕರ್ತರ ಯೋಜನೆಯನ್ನು ರೂಪಿಸಿದವರು’ ಎಂದು ಶಿವಕುಮಾರ್ ಸ್ಮರಿಸಿದರು.

‘ರೈತರ ಭೂಸ್ವಾಧೀನದ ವೇಳೆ ನಗರ ಭಾಗದಲ್ಲಿ ದುಪ್ಪಟ್ಟು ಪರಿಹಾರ. ನಗರದ ವ್ಯಾಪ್ತಿಗಿಂತ 18 ಕಿಲೋಮೀಟರ್ ದೂರ ಇದ್ದರೆ ಮೂರು ಪಟ್ಟು ಪರಿಹಾರ, ಗ್ರಾಮೀಣ ಭಾಗದಲ್ಲಿ ನಾಲ್ಕು ಪಟ್ಟು ಪರಿಹಾರ ನೀಡಬೇಕು ಎನ್ನುವ ರೈತ ಪರವಾದ ಕಾನೂನು ತಂದರು’ ಎಂದು ಅವರು ಹೇಳಿದರು.

2010ರ ಬಳ್ಳಾರಿ ಪಾದಯಾತ್ರೆ ನಡೆಸುವ ವೇಳೆ ದಾರಿ ಮಧ್ಯೆ ಗ್ರಾಮೀಣ ಭಾಗದ ಮಹಿಳೆಯರು ಇತರೇ ಜಮೀನುಗಳಲ್ಲಿ ದುಡಿಯುತ್ತಿದ್ದರು. ಆಗ ಅವರ ಜೊತೆ ಸಂವಾದ ಮಾಡಿದಾಗ ಹೊಸ ಆಲೋಚನೆಗಳು ಬಂದವು. ಆನಂತರ ಸೋನಿಯಾ ಗಾಂಧಿಯನ್ನು ಭೇಟಿಯಾಗಿ ನರೇಗಾ ಕುರಿತಾಗಿ ಅನೇಕ ವಿಚಾರವನ್ನು ಹಂಚಿಕೊಂಡೆ. ಕರ್ನಾಟಕದ ಒಂದಷ್ಟು ಭಾಗದಲ್ಲಿ ಬೇರೆಯವರ ಜಮೀನಿಗೆ ಹೋಗಿ ರೈತರು ದುಡಿಯುವುದಿಲ್ಲ ಎನ್ನುವ ಅಂಶವನ್ನು ಗಮನಕ್ಕೆ ತಂದೆವು ಎಂದು ಅವರು ಹೇಳಿದರು.

‘ನಾನು, ಧ್ರುವನಾರಾಯಣ ನಿಯೋಗ ಮಾಡಿಕೊಂಡು ಈ ವಿಚಾರವನ್ನು ಸೋನಿಯಾ ಗಾಂಧಿ ಗಮನಕ್ಕೆ ತಂದು, ಸಣ್ಣ-ಪುಟ್ಟ ಬದಲಾವಣೆಗಳನ್ನು ಅವರಿಗೆ ವಿವರಣೆ ನೀಡಲಾಯಿತು. ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಸಿ.ಪಿ.ಜೋಶಿ ಅವರಿಗೆ ಸಲ್ಲಿಸಿ ಎಂದು ಸೂಚನೆ ನೀಡಿದರು. ಆದರೆ ಸಿ.ಪಿ.ಜೋಶಿಯನ್ನು ನಾವುಗಳು ಗಮನ ಸೆಳೆಯಲು ಆಗಲಿಲ್ಲ. ಆನಂತರ ಒಂದಷ್ಟು ಪರಿಷ್ಕರಣೆ ನಡೆಸಿದ ನಂತರ ರೈತನು ಸ್ವಂತ ಜಮೀನಿನಲ್ಲಿಯೂ ನರೇಗಾ ಮೂಲಕ ಅಭಿವೃದ್ಧಿ ಕೆಲಸಗಳನ್ನು ಮಾಡಿಸಬಹುದು ಎನ್ನುವ ತಿದ್ದುಪಡಿ ತಂದವರು ಮನಮೋಹನ್ ಸಿಂಗ್. ಇದು ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಸಾಕಷ್ಟು ಅವಕಾಶ ನೀಡಿತು ಎಂದು ಅವರು ಹೇಳಿದರು.

ರಾಜ್ಯದಲ್ಲಿ 2013ರಲ್ಲಿ ಸಿದ್ದರಾಮಯ್ಯ ಸರಕಾರ ಅನ್ನಭಾಗ್ಯ ಯೋಜನೆಗೆ ಮುನ್ನುಡಿ ಬರೆದಿದ್ದೆ ಮನಮೋಹನ್ ಸಿಂಗ್ ಅವರ ಆಹಾರ ಭದ್ರತಾ ಕಾಯ್ದೆಯಿಂದಾಗಿ. ಉದ್ದಿಮೆಗಳ ಸಿಎಸ್‍ಆರ್ ಯೋಜನೆಯನ್ನು ಪ್ರಾರಂಭ ಮಾಡಿದ್ದು ಇವರೇ. ಅರಣ್ಯ ಭೂಮಿ ಹಕ್ಕು ಕಾಯ್ದೆಯನ್ನು ಜಾರಿಗೆ ತಂದು ದಶಕಗಳಿಂದ ಅರಣ್ಯ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿದ್ದ ರೈತರಿಗೆ, ಪರಿಶಿಷ್ಟ ಜನಾಂಗ ಮತ್ತು ವರ್ಗದವರಿಗೆ ಅನುಕೂಲ ಮಾಡಿಕೊಟ್ಟರು ಎಂದು ಉಪ ಮುಖ್ಯಮಂತ್ರಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X