Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಮಹಾತ್ಮ ಗಾಂಧೀಜಿ ಭಾರತದ ಆತ್ಮ,...

ಮಹಾತ್ಮ ಗಾಂಧೀಜಿ ಭಾರತದ ಆತ್ಮ, ವಿಶ್ವಕ್ಕೆ ಶಾಂತಿ-ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ : ಡಿ.ಕೆ.ಶಿವಕುಮಾರ್

"ಹೆಗಲ ಮೇಲೆ ಕೇಸರಿ, ಬಿಳಿ, ಹಸಿರಿನ ಕಾಂಗ್ರೆಸ್ ಶಾಲಿದೆ, ಎದೆಯ ಒಳಗೆ ಪವಿತ್ರ ಸಂವಿಧಾನವಿದೆ"

ವಾರ್ತಾಭಾರತಿವಾರ್ತಾಭಾರತಿ21 Jan 2025 3:58 PM IST
share
ಮಹಾತ್ಮ ಗಾಂಧೀಜಿ ಭಾರತದ ಆತ್ಮ, ವಿಶ್ವಕ್ಕೆ ಶಾಂತಿ-ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ : ಡಿ.ಕೆ.ಶಿವಕುಮಾರ್

ಬೆಳಗಾವಿ : “ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ʼಜೈ ಬಾಪು, ಜೈ ಭೀಮ್, ಜೈ ಸಂವಿಧಾನʼ ಸಮಾವೇಶದಲ್ಲಿ ಶಿವಕುಮಾರ್ ಅವರು ದೇಶಕ್ಕೆ ಗಾಂಧೀಜಿ ಅವರ ಕೊಡುಗೆಯನ್ನು ಸ್ಮರಿಸಿದರು.

“ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ಕಾಂಗ್ರೆಸ್ ನಾಯಕತ್ವ ವಹಿಸಿಕೊಂಡು ದೇಶದ ಸ್ವಾತಂತ್ರ್ಯ ಹೋರಾಟ ಮುನ್ನಡೆಸಿದ್ದರು. ಈಗ ನೂರು ವರ್ಷಗಳ ನಂತರ ಈ ಐತಿಹಾಸಿಕ ಕಾರ್ಯಕ್ರಮವನ್ನು ನಡೆಸಿ ಮುಂದಿನ ಪೀಳಿಗೆಗೆ ಗಾಂಧೀಜಿ ಅವರ ತತ್ವ, ಆದರ್ಶವನ್ನು ಸಾರಲು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

“ಇದು ದೇಶದ ಜನರು, ದೇಶದ ಐಕ್ಯತೆ, ಸಮಗ್ರತೆಗೆ ಗಾಂಧೀಜಿ, ಅಂಬೇಡ್ಕರ್ ಸ್ಮರಣೆ ಹಾಗೂ ಸಂವಿಧಾನ ರಕ್ಷಣೆ ಈ ಸಮಾವೇಶದ ಮುಖ್ಯ ಉದ್ದೇಶ. 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ" ಇವು ಕೇವಲ ಘೋಷಣೆಗಳಲ್ಲ, ಭಾರತದ ಶಕ್ತಿ ಮಂತ್ರಗಳು. ಇತ್ತೀಚೆಗೆ ನಾವು ಸಂಕ್ರಾಂತಿ ಹಬ್ಬ ಆಚರಿಸಿದ್ದೇವೆ. ಸಂಕ್ರಾಂತಿ ಎಂದರೆ ಹೊಸತನ, ಹೊಸ ಹುರುಪು, ಹೊಸ ಉತ್ಸಾಹ” ಎಂದು ತಿಳಿಸಿದರು.

“ಅಂದು ಮಹಾತ್ಮ ಗಾಂಧೀಜಿ ಜವಾಹರ್ ಲಾಲ್ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಕುಳಿತ ಸ್ಥಾನದಲ್ಲಿ ಇಂದು ಕನ್ನಡನಾಡಿನ ವರಪುತ್ರ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿದ್ದಾರೆ” ಎಂದು ತಿಳಿಸಿದರು.

“1924 ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಸ್ವಾತಂತ್ರ್ಯ ಹೋರಾಟಗಾರರಿಗೆ ಸಂಕ್ರಾಂತಿ ಆಗಿ, ಹುರುಪು ತಂದಿತ್ತು. ಗಾಂಧೀಜಿ ದೇಶಕ್ಕೆ ಸ್ವಾತಂತ್ರ್ಯ ತಂದರು. ಅಂಬೇಡ್ಕರ್ ಸಂವಿಧಾನ ಕೊಟ್ಟರು. ಗಾಂಧಿ ಭಾರತ ಎಂದರೆ ಸ್ವಾಭಿಮಾನಿಗಳ ಭಾರತ, ಏಕತೆಯ ಭಾರತ, ಸಾಮರಸ್ಯದ ಬದುಕಿನ ಭಾರತ, ಜಾತ್ಯತೀತ ಭಾರತ, ಸರ್ವೋದಯ ಭಾರತ” ಎಂದರು.

“ನೀವು ಕ್ರಾಂತಿಕಾರಿಯನ್ನು ಕೊಲ್ಲಬಹುದು, ಆದರೆ ಕ್ರಾಂತಿಯನ್ನು ಕೊಲ್ಲಲು ಆಗುವುದಿಲ್ಲ ಎಂದು ಗಾಂಧೀಜಿ ಅವರು ಹೇಳಿದ್ದಾರೆ. ವ್ಯಕ್ತಿ ಸಾಯಬಹುದು, ಆದರೆ ಅವರ ತತ್ವಗಳು ಸಾಯುವುದಿಲ್ಲ. ನನ್ನ ದೇಹವನ್ನು ನಾಶ ಮಾಡಬಹುದು, ಆದರೆ ನನ್ನ ಚಿಂತನೆಗಳನ್ನು ನಾಶ ಮಾಡಲು ಸಾಧ್ಯವಿಲ್ಲ ಎಂದು ಗಾಂಧಿ ಹೇಳಿದ್ದರು. ಪಾಪಗಳನ್ನು ನಾಶ ಮಾಡು, ಪಾಪಿಗಳನ್ನು ಪ್ರೀತಿಸು ಎಂದು ಗಾಂಧಿ ಹೇಳಿದ್ದಾರೆ” ಎಂದು ಗಾಂಧೀಜಿ ಅವರ ಸಂದೇಶಗಳನ್ನು ಸ್ಮರಿಸಿದರು.

“ನಮ್ಮ ಹೆಗಲ ಮೇಲೆ ಕೇಸರಿ, ಬಿಳಿ, ಹಸಿರಿನ ಕಾಂಗ್ರೆಸ್ ಶಾಲಿದೆ. ಎದೆಯ ಒಳಗೆ ಪವಿತ್ರ ಸಂವಿಧಾನವಿದೆ. ಇದನ್ನು ನಾವು ಮರೆಯಲು ಸಾಧ್ಯವಿಲ್ಲ. ಸಂವಿಧಾನವೇ ನಮ್ಮ ತಂದೆ ತಾಯಿ, ಸಂವಿಧಾನವೇ ನಮ್ಮ ಬಂಧು ಬಳಗ, ಸಂವಿಧಾನವೇ ನಮ್ಮ ಧರ್ಮಗ್ರಂಥ. ಭಗವದ್ಗೀತೆ, ಬೈಬಲ್, ಕುರಾನ್ ಧರ್ಮ ಗ್ರಂಥಗಳಂತೆ ನಮಗೆ ಶ್ರೇಷ್ಠ ಗ್ರಂಥ ನಮ್ಮ ಸಂವಿಧಾನ” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X