Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಜಿಬಿಎ ಆಡಳಿತ 2ನೆ ತಿದ್ದುಪಡಿ...

ಜಿಬಿಎ ಆಡಳಿತ 2ನೆ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ; ನಾಮನಿರ್ದೇಶಿತ ಸದಸ್ಯತ್ವ ಕೈಬಿಡುತ್ತೇವೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ16 Dec 2025 4:40 PM IST
share
ಜಿಬಿಎ ಆಡಳಿತ 2ನೆ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ; ನಾಮನಿರ್ದೇಶಿತ ಸದಸ್ಯತ್ವ ಕೈಬಿಡುತ್ತೇವೆ : ಡಿ.ಕೆ.ಶಿವಕುಮಾರ್

ಬೆಳಗಾವಿ : 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೆ ತಿದ್ದುಪಡಿ) ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಶಾಸನ ರಚನೆ ಕಲಾಪದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 2024ನೆ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ ಅನುಮೋದನೆ ಕೋರಿದರು.

ಈ ಬಗ್ಗೆ ವಿವರಣೆ ನೀಡಿದ ಅವರು, ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ಚಿಕ್ಕಬಳ್ಳಾಪುರದ ಸಂಸದ ಸುಧಾಕರ್ ಅವರ ಕ್ಷೇತ್ರದ ಕೆಲವು ಭಾಗ ಪಾಲಿಕೆ ವ್ಯಾಪ್ತಿಗೆ ಬರುತ್ತಿವೆ. ಜೊತೆಗೆ ಜಿಬಿಎ ಸದಸ್ಯರ ಪಟ್ಟಿಯಲ್ಲಿ ಪಾಲಿಕೆ ವ್ಯಾಪ್ತಿಯ ನಿವಾಸಿಯಾಗಿರುವ ಜನಪ್ರತಿನಿಧಿಗಳ ಹೆಸರು ಬಿಟ್ಟು ಹೋಗಿದ್ದು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಪರಿಷತ್ ಸದಸ್ಯರನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲು ಈ ತಿದ್ದುಪಡಿ ತರಲಾಗಿದೆ ಎಂದರು,

ಮುಖ್ಯಮಂತ್ರಿಗಳೇ ಜಿಬಿಎ ಮುಖ್ಯಸ್ಥರಾಗಿರುವ ಹಿನ್ನೆಲೆಯಲ್ಲಿ ಮುಖ್ಯಕಾರ್ಯದರ್ಶಿಗಳು ಹಾಗೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರ ಹೆಸರು ಸೇರಿಸಲಾಗಿದೆ. ಹಣಕಾಸು ಇಲಾಖೆ ಕಾರ್ಯದರ್ಶಿಗಳನ್ನು ಈ ಸದಸ್ಯರ ಸಮಿತಿಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ನಡೆದ ಜಿಬಿಎ ಮೊದಲ ಸಭೆಯಲ್ಲಿ ನಾವು ಈ ವಿಚಾರವನ್ನು ಗಮನಿಸಿದೆವು. ವಿರೋಧ ಪಕ್ಷದ ಸದಸ್ಯರು ತಮ್ಮ ರಾಜಕೀಯ ನಿಲುವಿನಿಂದಾಗಿ ಈ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಹೀಗಾಗಿ ನಾವು ಈ ತಿದ್ದುಪಡಿ ತಂದು ಇವರುಗಳನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲಾಗುತ್ತಿದೆ ಎಂದರು.

ಈ ವೇಳೆ ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಮಾತನಾಡಿ, ಈಗಾಗಲೇ 369 ಪಾಲಿಕೆ ಸದಸ್ಯರಿರುತ್ತಾರೆ. ಸರಕಾರ 20 ಸಾವಿರ ಜನರಿಗೆ ಒಬ್ಬ ನಾಮನಿರ್ದೇಶಿತ ಸದಸ್ಯರನ್ನಾಗಿ ಮಾಡಿದರೆ, ಮತ್ತೆ 369 ಮಂದಿ ಸದಸ್ಯರು ಬರುತ್ತಾರೆ. ಇದು ಯಾವ ರೀತಿ ಸೂಕ್ತ ಎಂಬ ಗೊಂದಲ ಜನರಲ್ಲಿದೆ ಎಂದು ಉಲ್ಲೇಖಿಸಿದರು.

ಇದಕ್ಕೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಯಾವುದೇ ರೀತಿಯ ಚುನಾವಣೆ ನಡೆಯುವುದಿಲ್ಲ. ಇದು ರಾಜ್ಯಮಟ್ಟದ ಸಂಸ್ಥೆಯಾಗಿದೆ. ಈ ವಿಚಾರವಾಗಿ ಸದ್ಯಕ್ಕೆ ಸಮಸ್ಯೆ ಬರುವುದಿಲ್ಲ. ಮುಂದೆ ಹೊಸ ಪ್ರದೇಶವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಂಡಾಗ ಆ ಭಾಗದಲ್ಲಿ 6 ತಿಂಗಳ ಒಳಗಾಗಿ ಚುನಾವಣೆ ನಡೆಸಬೇಕಾಗುತ್ತದೆ. ಈ ಪ್ರದೇಶದಲ್ಲಿ ಯಾರಾದರೂ ಪಂಚಾಯಿತಿ ಸದಸ್ಯನಾಗಿದ್ದರೆ, ಅವರಿಗೆ ಇದರಲ್ಲಿ ಮತದಾನದ ಹಕ್ಕು ಬರುವುದಿಲ್ಲ. ಈ ಬದಲಾವಣೆಯ ಹಂತದಲ್ಲಿ ಆ ಪ್ರದೇಶವನ್ನು ಪ್ರತಿನಿಧಿಸಲು ಒಂದು ಅವಕಾಶ ಕಲ್ಪಿಸಿದ್ದೇವೆ. ಇದು ಅಗತ್ಯವಿಲ್ಲ, ಬೇಡ ಎಂದರೆ ಇದನ್ನು ತೆಗೆದುಹಾಕಲು ಸಿದ್ಧವಿದ್ದೇನೆ. ನಿಮ್ಮ ಸಲಹೆಯಂತೆ ನಾಮನಿರ್ದೇಶಿತ ಸದಸ್ಯರ ಸೇರ್ಪಡೆಯನ್ನು ಕೈಬಿಡುತ್ತೇನೆ ಎಂದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ತಿನ ಚುನಾಯಿತ ಪ್ರತಿನಿಧಿಗಳು ಒಂದೊಂದು ನಗರ ಸಭೆ, ಪುರಸಭೆಗಳಿಗೆ ಬದಲಾವಣೆ ಮಾಡಿಕೊಂಡು ಹೋಗುತ್ತಿರುತ್ತಾರೆ. ಬೆಂಗಳೂರು ಪಾಲಿಕೆ ಚುನಾವಣೆ, ಬಳ್ಳಾರಿ ನಗರ ಸಭೆ ಚುನಾವಣೆ, ಬೀದರ್ ನಲ್ಲಿ ನಡೆಯುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೋಗಿ ಮತ ಚಲಾಯಿಸುತ್ತಾರೆ. ಇದು ನಕಲಿ ಮತದಾನದಂತಾಗುತ್ತದೆ. ಹೀಗಾಗಿ ಅವರು ಯಾವುದಾದರೂ ಒಂದು ಕಡೆ ಐದು ವರ್ಷ ತಮ್ಮ ಮತದಾನದ ಅಧಿಕಾರ ಹೊಂದಿರಬೇಕು ಎಂದು ತಿಳಿಸಿದರು.

ಇದಕ್ಕೆ ಸ್ಪಷ್ಟನೆ ನೀಡಿದ ಶಿವಕುಮಾರ್, ನಾನು ವಿರೋಧ ಪಕ್ಷದ ನಾಯಕರ ಸಲಹೆಯನ್ನು ಒಪ್ಪುತ್ತೇನೆ. ಯಾರೇ ಆದರೂ ಒಂದೇ ಕಡೆ ಮತ ಹಾಕುವಂತಾಗಬೇಕು. ಆದರೆ ಜಿಬಿಎ ಚುನಾಯಿತ ಸಂಸ್ಥೆಯಲ್ಲ ಎಂದು ಅವರು ಹೇಳಿದರು.

ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯ ಬಸವರಾಜ ರಾಯರೆಡ್ಡಿ, ಈ ರೀತಿ ಮಾಡಲು ಜನಪ್ರತಿನಿಧಿಗಳ ಕಾಯ್ದೆ ಇದಕ್ಕೆ ಅವಕಾಶ ನೀಡುವುದಿಲ್ಲ. ವಿಳಾಸ ಬದಲಾವಣೆ ಮಾಡಿದರೆ, ನಾನು ಆ ಭಾಗದ ಮತದಾರನಾಗುತ್ತೇನೆ. ಹೀಗಾಗಿ ಜನಪ್ರತಿನಿಧಿಗಳ ಕಾಯ್ದೆಯನ್ನು ಪರಿಶೀಲಿಸಿ ತೀರ್ಮಾನಕ್ಕೆ ಬನ್ನಿ ಎಂದರು. ಆಗ ಶಿವಕುಮಾರ್ ಅವರು, ಹಾಗೆಂದು ಮತದಾನವನ್ನು ಟೂರಿಂಗ್ ಟಾಕೀಸ್ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅನಂತರ ಈ ವಿಧೇಯಕ ಧ್ವನಿಮತ ಮೂಲಕ ಅಂಗೀಕಾರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X