Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ ರಾಜ್ಯದ ಎರಡನೆ ರಾಜಧಾನಿ,...

ಬೆಳಗಾವಿ ರಾಜ್ಯದ ಎರಡನೆ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ17 Dec 2025 4:47 PM IST
share
ಬೆಳಗಾವಿ ರಾಜ್ಯದ ಎರಡನೆ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ: ಡಿ.ಕೆ.ಶಿವಕುಮಾರ್

ಬೆಳಗಾವಿ : ಬೆಳಗಾವಿ ರಾಜ್ಯದ ಎರಡನೆ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬುಧವಾರ ಬೆಳಗಾವಿಯ ಅಶೋಕ ವೃತ್ತದಲ್ಲಿ ನಗರಾಭಿವೃದ್ಧಿ ಹಾಗೂ ಪೌರಾಡಳಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸ್ವಚ್ಛತಾ ಓಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮೆಲ್ಲರಿಗೂ ದೊಡ್ಡ ಜವಾಬ್ದಾರಿ ಇದೆ. ನಮಗೆ ಎಲ್ಲ ಧರ್ಮ, ಜಾತಿ ಒಂದೇ. ನಮಗೆ ಎಲ್ಲದರ ಮೇಲೂ ನಂಬಿಕೆ ಇದೆ. ನಾವೆಲ್ಲರೂ ನಮಗೆ ಸಿಕ್ಕ ಅವಕಾಶದಲ್ಲಿ ಪರಿಸರ ಕಾಪಾಡಲು ನಮ್ಮ ಸರಕಾರದ ಯೋಜನೆಯಲ್ಲಿ ಅನುದಾನ ನೀಡಲಾಗಿದೆ ಎಂದು ಹೇಳಿದರು.

ಬೈರತಿ ಸುರೇಶ್ ನಗರಾಭಿವೃದ್ಧಿ ಸಚಿವರಾದ ಬಳಿಕ ಸುಮಾರು 200 ಕೋಟಿ ರೂ.ಗಳಷ್ಟು ಅನುದಾನವನ್ನು ಅನೇಕ ಯೋಜನೆಗಳ ಮೂಲಕ ಈ ನಗರಕ್ಕೆ ನೀಡಿದ್ದಾರೆ. ಮುಂದೆ ನಮ್ಮ ಸರಕಾರ ಈ ಪ್ರದೇಶದ ಅಭಿವೃದ್ಧಿ ಮಾಡಿ, ಉದ್ಯೋಗ ನೀಡಲು ಅಗತ್ಯ ಕ್ರಮ ಕೈಗೊಳ್ಳಲಿದೆ. ನಾವು ನೀವು ಜೊತೆಯಾಗಿ ಕೈ ಜೋಡಿಸಿ ಹೆಜ್ಜೆ ಹಾಕೋಣ ಎಂದು ಶಿವಕುಮಾರ್ ಕರೆ ನೀಡಿದರು.

ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧಿ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿದ್ದರು. ಅದರ ಶತಮಾನೋತ್ಸವ ಹಿನ್ನೆಲೆಯಲ್ಲಿ ಕಳೆದ ವರ್ಷ ನಾವು ಬೆಳಗಾವಿಗೆ ಬಂದು ಗಾಂಧಿ ಭಾರತ ಎಂಬ ಕಾರ್ಯಕ್ರಮ ಮಾಡಿದೆವು. ಸ್ವಚ್ಛತೆ ಹಾಗೂ ಪರಿಸರ ಕಾಪಾಡುವುದು ಅದರ ಉದ್ದೇಶವಾಗಿತ್ತು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ನಾನು ಚಿಕ್ಕ ವಯಸ್ಸಿನಲ್ಲಿ ಕ್ರಾಸ್ ಕಂಟ್ರಿ ಓಡುತ್ತಿದ್ದೆ. ಈಗ ವಯಸ್ಸಾಗಿದೆ. ಆದರೆ ನನ್ನ ಮನಸ್ಸು ನಿಮ್ಮಷ್ಟೇ ತಾರುಣ್ಯವಾಗಿದೆ. ನನ್ನ ಕೈಲಾದಷ್ಟು ನಡೆಯುತ್ತೇನೆ. ನಿಮಗೆ ಒಳ್ಳೆಯದಾಗಲಿ ಎಂದು ಶಿವಕುಮಾರ್ ತಿಳಿಸಿದರು.

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾತನಾಡಿ, ಕುಂದಾನಗರಿ ಬೆಳಗಾವಿ ಎಲ್ಲ ಕ್ಷೇತ್ರಗಳಲ್ಲಿ ಕ್ಷಿಪ್ರ ಗತಿಯಲ್ಲಿ ಬೆಳೆಯುತ್ತಿದ್ದು, ಬೆಂಗಳೂರಿನಂತೆ ಉನ್ನತ ಮಟ್ಟಕ್ಕೆ ಏರುವತ್ತ ದಾಪುಗಾಲು ಇಟ್ಟಿದೆ. ನಮ್ಮ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿರಬೇಕೆಂಬುದು ಮಹಾತ್ಮ ಗಾಂಧಿಯವರ ಕನಸಾಗಿತ್ತು. ಅವರ ಕನಸನ್ನು ನನಸು ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.

ನಮ್ಮ ಸರಕಾರ ನಗರ ಪ್ರದೇಶಗಳು ಸೇರಿದಂತೆ ಪ್ರತಿಯೊಂದು ಪ್ರದೇಶದ ಸ್ವಚ್ಛತೆಗೆ ಆದ್ಯತೆ ನೀಡಿದೆ. ನಗರಗಳಲ್ಲಿ ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಲಾಗುತ್ತಿದೆ. ದೇಶದ ಸ್ವಚ್ಛ ನಗರಗಳ ಅಗ್ರ ಪಟ್ಟಿಯಲ್ಲಿ ನಮ್ಮ ರಾಜ್ಯದ ನಗರಗಳೂ ಸ್ಥಾನ ಪಡೆಯುತ್ತಿರುವುದು ಸಂತಸದ ವಿಚಾರ. ಮುಂಬರುವ ದಿನಗಳಲ್ಲಿ ಬೆಳಗಾವಿ ಸೇರಿ ಇನ್ನೂ ಹೆಚ್ಚಿನ ನಗರಗಳು ಈ ಪಟ್ಟಿಯಲ್ಲಿ ಸೇರುವಂತೆ ಮಾಡಲು ಸರಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X