Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಡಿ.27ಕ್ಕೆ ಸುವರ್ಣ ವಿಧಾನಸೌಧದಲ್ಲಿ...

ಡಿ.27ಕ್ಕೆ ಸುವರ್ಣ ವಿಧಾನಸೌಧದಲ್ಲಿ ಬೃಹತ್ ಗಾಂಧೀ ಪ್ರತಿಮೆ ಅನಾವರಣ

‘ಬೆಳಗಾವಿ ಅಧಿವೇಶನದ ಶತಮಾನೋತ್ಸವ’ ವರ್ಷವಿಡೀ ಕಾರ್ಯಕ್ರಮ : ಸಚಿವ ಎಚ್.ಕೆ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ25 Dec 2024 5:24 PM IST
share
ಡಿ.27ಕ್ಕೆ ಸುವರ್ಣ ವಿಧಾನಸೌಧದಲ್ಲಿ ಬೃಹತ್ ಗಾಂಧೀ ಪ್ರತಿಮೆ ಅನಾವರಣ

ಬೆಳಗಾವಿ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ‘ಶತಮಾನೊತ್ಸವ ಕಾರ್ಯಕ್ರಮ’ವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮಾ ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಪ್ರವಾಸೊದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಬುಧವಾರ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣ ಸಮಾರಂಭದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಅಧಿವೇಶನ ಕೇವಲ ಪಕ್ಷದ ಅಧಿವೇಶನವಾಗಿರದೇ, ಸಾಮಾಜಿಕ ಸುಧಾರಣೆಯ ಅಸ್ತ್ರವಾಗಿತ್ತು ಎಂದು ಬಣ್ಣಿಸಿದರು.

ಸಮಾಜದಲ್ಲಿನ ಅಸ್ಪ್ರಶ್ಯತೆಯನ್ನು ನಿವಾರಿಸಿ ಭ್ರಾತೃತ್ವ ಭಾವನೆಯನ್ನು ಬೆಸೆಯುವುದರ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಲಾಯಿತು. 1924ರಲ್ಲಿ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವನ್ನು ಆಚರಿಸುವ ಮೂಲಕ ಇತಿಹಾಸ ಮರುಕಳಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಪಾಟೀಲ್ ವಿವರಿಸಿದರು.

ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೂ ಪರಿಚಯಿಸುವ ಉದ್ದೇಶದೊಂದಿಗೆ ಶತಮಾನೋತ್ಸವದ ಅಂಗವಾಗಿ ರಾಜ್ಯ ಸರಕಾರ 41 ಕಾರ್ಯಕ್ರಮಗಳನ್ನು ಘೋಷಣೆ ಮಾಡಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಸುವರ್ಣ ವಿಧಾನಸೌಧದಲ್ಲಿನ ಗಾಂಧೀಜಿ ಅವರ ಪ್ರತಿಮೆಯನ್ನು ಡಿ.27ರ ಬೆಳಗ್ಗೆ 10 ಗಂಟೆಗೆ ಅನಾವರಣಗೊಳಿಸಲಾಗುವುದು. ಈ ಕಾರ್ಯಕ್ರಮಕ್ಕೆ ಸರ್ವಪಕ್ಷದ ನಾಯಕರು, ಸ್ವಾತಂತ್ರ್ಯ ಹೊರಾಟಗಾರರನ್ನು, ಆಹ್ವಾನಿಸಲಾಗಿದೆ ಎಂದರು.

ನಾಳೆ(ಡಿ.26) ನಗರದ ವೀರಸೌಧದಲ್ಲಿನ ಗಾಂಧೀಜಿಯವರ ಪ್ರತಿಮೆ ಹಾಗೂ ರಾಮತೀರ್ಥ ನಗರದಲ್ಲಿನ ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ ಉದ್ಘಾಟಿಸಲಾಗುವುದು ಎಂದು ಎಚ್.ಕೆ.ಪಾಟೀಲ್ ಅವರು ತಿಳಿಸಿದರು. ಈ ವೇಳೆ ಮಾಜಿ ಸಿಎಂ ಡಾ.ಎಂ.ವೀರಪ್ಪ ಮೊಯಿಲಿ, ಮಾಜಿ ಸಭಾಪತಿ ಬಿ.ಎಲ್. ಶಂಕರ್, ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್, ಜಿ.ಪಂ. ಸಿಇಓ ರಾಹುಲ್ ಶಿಂಧೆ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X