Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಯಾವುದೇ ಭೇದ ಭಾವ, ಮಧ್ಯವರ್ತಿಗಳ ಹಾವಳಿ...

ಯಾವುದೇ ಭೇದ ಭಾವ, ಮಧ್ಯವರ್ತಿಗಳ ಹಾವಳಿ ಇಲ್ಲದೆ ʼಗ್ಯಾರಂಟಿʼಗಳು ಜನರಿಗೆ ತಲುಪುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ15 March 2024 5:49 PM IST
share
ಯಾವುದೇ ಭೇದ ಭಾವ, ಮಧ್ಯವರ್ತಿಗಳ ಹಾವಳಿ ಇಲ್ಲದೆ ʼಗ್ಯಾರಂಟಿʼಗಳು ಜನರಿಗೆ ತಲುಪುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾರಥ್ಯದ ಕಾಂಗ್ರೆಸ್ ಸರಕಾರ ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಶ್ರಮಿಕರ ಅಭಿವೃದ್ಧಿಗಾಗಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳ ಉದ್ದೇಶ ಯಶಸ್ವಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸಂತಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿಯ ತಾಲೂಕು ಗುರು ಭವನದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಕೊಟ್ಟ ಮಾತಿನಂತೆ ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ ಎಂದರು.

ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿವೆ

ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನರು ಬೆಲೆ ಏರಿಕೆಯಿಂದಾಗಿ ತತ್ತರಿಸಿದ್ದರು. ಇಂಥ ಜನರ ಅನುಕೂಲಕ್ಕಾಗಿ ಕಾಂಗ್ರೆಸ್ ಪಕ್ಷ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು. ಪಕ್ಷಾತೀತವಾಗಿ, ಯಾವುದೇ ಭೇದಭಾವ ಇಲ್ಲದೆ, ಮಧ್ಯವರ್ತಿಗಳ ಹಾವಳಿ ಇಲ್ಲದೆ ನಮ್ಮ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿವೆ ಎಂದು ಸಚಿವರು ಹೇಳಿದರು.

ಸವದತ್ತಿ ಕ್ಷೇತ್ರಕ್ಕೆ ಗೃಹಲಕ್ಷ್ಮಿ ಯೋಜನೆಗಾಗಿ ತಿಂಗಳಿಗೆ 15.99 ಕೋಟಿ ರೂ. ನೀಡಲಾಗುತ್ತಿದೆ. ಒಂದು ವರ್ಷ ವರ್ಷಕ್ಕೆ 192 ಕೋಟಿ ನೀಡಲಾಗುತ್ತದೆ. ಐದು ವರ್ಷಕ್ಕೆ ಸಾವಿರ ಕೋಟಿಗಿಂತ ಹೆಚ್ಚು ಆಗುತ್ತದೆ. ಬಡವರಿಗಾಗಿ ಸಿದ್ದರಾಮಯ್ಯ ಇಂಥ ಉಪಯುಕ್ತ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಮೋದಿ, ಬಿಜೆಪಿಯವರು ಮಾಡದಂತ ಕೆಲಸವನ್ನು ಸಿದ್ದರಾಮಯ್ಯ ಮಾಡಿ ತೋರಿಸಿದ್ದಾರೆ ಎಂದು ಹೇಳಿದರು.

ಮೋದಿ ಯಾವುದೇ ಕಾರ್ಯಕ್ರಮಗಳನ್ನು ಮಾಡಿದರೂ ಅಂಬಾನಿ, ಅದಾನಿಯಂತ ಶ್ರೀಮಂತರಿಗಾಗಿ ಮಾತ್ರ ಮಾಡುತ್ತಾರೆ. ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಯಾವುದೇ ಯೋಜನೆಗಳನ್ನು ಜಾರಿಗೆ ತಂದರೂ ರೈತರಿಗೆ, ಬಡವರಿಗಾಗಿ ಮಾತ್ರ. ಅಭಿವೃದ್ಧಿ ಕೆಲಸಗಳು ಕೇವಲ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕಾಂಗ್ರೆಸ್ ಸರ್ಕಾರ ಇರುವವರೆಗೂ ನಮ್ಮ ಯೋಜನೆಗಳು ನಿಲ್ಲುವುದಿಲ್ಲ. ಬಿಜೆಪಿಯವರು ಯೋಜನೆಗಳ ಬಗ್ಗೆ ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಇಂಥ ಊಹಾಪೋಹಗಳಿಗೆ ಕಿವಿಗೊಡದೆ ಸರ್ಕಾರವನ್ನು ಮುಂದಿನ ದಿನಗಳಲ್ಲೂ ಆಶೀರ್ವದಿಸಿ ಎಂದು ಮನವಿ ಮಾಡಿದರು.

ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳ್ಕರ್, ತಹಶಿಲ್ದಾರ್ ಮಧುಸೂದನ್ ಕುಲಕರ್ಣಿ, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಯಶವಂತಕುಮಾರ್, ಬೈಲಹೊಂಗಲ ಎ.ಸಿ. ಪ್ರಭಾವತಿ, ಸಿಡಿಪಿಓ ಸುನಿತಾ, ಆರ್.ವಿ.ಪಾಟೀಲ, ಡಿ ಡಿ ಟೋಪೋಜಿ, ಮಲ್ಲು ಜಕಾತಿ, ಉಮೇಶ ಬಾಳಿ, ಚಂದು ಜಂಬಳಿ, ಮಹಾರಾಜಗೌಡ ಪಾಟೀಲ್, ರಾಮನಗೌಡ ತಿಪ್ಪರಾಶಿ, ತಾಲೂಕಿನ ಫಲಾನುಭವಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X