Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಸಕ್ಕರೆ ಕಾರ್ಖಾನೆ ವಿರುದ್ಧ ತೂಕ ವಂಚನೆ...

ಸಕ್ಕರೆ ಕಾರ್ಖಾನೆ ವಿರುದ್ಧ ತೂಕ ವಂಚನೆ ದೂರು ದಾಖಲಾದರೆ ಕ್ರಮ : ಶಿವಾನಂದ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ16 Dec 2024 10:04 PM IST
share
ಸಕ್ಕರೆ ಕಾರ್ಖಾನೆ ವಿರುದ್ಧ ತೂಕ ವಂಚನೆ ದೂರು ದಾಖಲಾದರೆ ಕ್ರಮ : ಶಿವಾನಂದ ಪಾಟೀಲ್‌

ಬೆಳಗಾವಿ : ರೈತರು ಯಾವುದೇ ಸಕ್ಕರೆ ಕಾರ್ಖಾನೆ ವಿರುದ್ಧ ಸೂಕ್ತ ದಾಖಲೆಗಳೊಂದಿಗೆ ತೂಕದಲ್ಲಿ ವಂಚನೆಯ ದೂರು ದಾಖಲು ಮಾಡಿದರೆ 24 ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಭರವಸೆ ನೀಡಿದರು.

ಸೋಮವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಸುವರ್ಣ ವಿಧಾನಸೌಧದ ಬಳಿ ಕೈಗೊಂಡಿದ್ದ ಧರಣಿ ಸ್ಥಳಕ್ಕೆ ತೆರಳಿ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ದೂರು ದಾಖಲು ಮಾಡಲು ಭಯಪಡುವ ಅಗತ್ಯವಿಲ್ಲ. ತೂಕದಲ್ಲಿ ವಂಚನೆ ಮಾಡಿದ ದೂರು ನೀಡಿದರೆ ಕ್ರಿಮಿನಲ್ ಕೇಸು ದಾಖಲಿಸುವುದು ಅಷ್ಟೇ ಅಲ್ಲ, ಸರಕಾರ ರೈತರ ಪರವಾಗಿ ನಿಲ್ಲಲಿದೆ ಎಂದರು.

ವಂಚನೆ ದೂರು ದಾಖಲು ಮಾಡುವ ರೈತನಿಗೆ ಒಂದು ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು ಹಾಗೂ ಅವರ ಕಬ್ಬನ್ನು ನುರಿಸುವ ಜವಾಬ್ದಾರಿಯನ್ನು ಸರಕಾರ ವಹಿಸಿಕೊಳ್ಳಲಿದೆ ಎಂದು ಶಿವಾನಂದ ಪಾಟೀಲ್ ಹೇಳಿದರು.

ತೂಕದಲ್ಲಿ ವಂಚನೆ ತಡೆಗೆ ತೂಕ ಮತ್ತು ಮಾಪನ ಇಲಾಖೆ ಅಧಿಕಾರಿಗಳು ಎಲ್ಲ ಕಾರ್ಖಾನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಡಿಜಿಟಲ್ ತೂಕದ ಯಂತ್ರ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಸರಕಾರದ ಈ ಕ್ರಮ ಪ್ರಶ್ನಿಸಿ ಕೆಲವು ಕಾರ್ಖಾನೆಗಳು ಕೋರ್ಟಿಗೆ ಹೋಗಿವೆ. ತೂಕದಲ್ಲಿ ವಂಚನೆ ತಡೆ ವಿಚಾರದಲ್ಲಿ ಸರಕಾರದ ನಿರ್ಧಾರ ಅಚಲವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಸಕ್ಕರೆ ಆಯುಕ್ತರ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರ ಮಾಡಲಾಗುವುದು. ಸ್ಥಗಿತಗೊಂಡಿರುವ ಸಹಕಾರಿ ಕ್ಷೇತ್ರದ ಸಕ್ಕರೆ ಕಾರ್ಖಾನೆಗಳನ್ನು ಸಹಕಾರಿ ವಲಯದಲ್ಲೇ ಉಳಿಸಿ ಪುನರಾರಂಭಕ್ಕೆ ಪ್ರಯತ್ನಿಸಲಾಗುವುದು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‍ಗೆ ಹೆಚ್ಚುವರಿ 150 ರೂ. ಕೊಡಿಸುವ ಭರವಸೆ ನೀಡಿದ್ದು, ಈ ಹಣ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

ರೈತರ ಕಬ್ಬಿನ ಬಿಲ್ ಬಾಕಿಯನ್ನು ಸಕ್ಕರೆ ಕಾರ್ಖಾನೆಗಳು ಪೂರ್ಣ ಪ್ರಮಾಣದಲ್ಲಿ ಪಾವತಿ ಮಾಡಲು ಸರಕಾರ ಕ್ರಮ ಕೈಗೊಂಡಿದೆ. ಕಬ್ಬು ಪೂರೈಕೆ ಮಾಡಿದ 15 ದಿನಗಳೊಳಗೆ ಬಿಲ್ ಪಾವತಿ ಮಾಡಬೇಕು ಎಂಬುದು ರೈತರ ಬೇಡಿಕೆ. ಆದರೆ ಸಕ್ಕರೆ ಮಾರಾಟಕ್ಕೆ ಕೇಂದ್ರ ಸರಕಾರ ಅನುಮತಿ ನೀಡುವುದು ವಿಳಂಬ ಮಾಡಿದರೆ ಕಬ್ಬು ಬೆಳೆಗಾರರಿಗೆ ಬಿಲ್ ಪಾವತಿ ಮಾಡುವುದು ಕಷ್ಟ. ಸಕ್ಕರೆ ಕಾರ್ಖಾನೆಗಳಿಗೆ ಅಡಮಾನ ಸಾಲ ನೀಡಲು ಸರಕಾರ ಬದ್ಧವಿದ್ದು, ಬಿಲ್ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಾನಂದ ಪಾಟೀಲ್ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ 30 ಸಹಕಾರಿ ಸಕ್ಕರೆ ಕಾರ್ಖಾನೆಗಳಿದ್ದು, ಅವುಗಳಲ್ಲಿ 13 ಮಾತ್ರ ಕಬ್ಬು ನುರಿಸುತ್ತಿವೆ. ಹಿಂದಿನ ಸರಕಾರ ನಷ್ಟದಲ್ಲಿರುವ 13 ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಖಾಸಗಿಯವರಿಗೆ ಗುತ್ತಿಗೆ ಆಧಾರದ ಮೇಲೆ ನೀಡಿದೆ. ನಮ್ಮ ಸರಕಾರ ನಷ್ಟದಲ್ಲಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಸಹಕಾರಿ ವಲಯದಲ್ಲಿಯೇ ಉಳಿಸಿಕೊಂಡು ಪುನಶ್ಚೇತನಗೊಳಿಸಲು ಪ್ರಯತ್ನಿಸಲಿದೆ ಎಂದು ಅವರು ಹೇಳಿದರು.

ದೇಶಕ್ಕೆ ಮಾದರಿಯಾಗಿದ್ದ ವಿಜಯಪುರ ಜಿಲ್ಲೆಯ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಕೂಡ ನಷ್ಟದಲ್ಲಿದ್ದು, ಈ ಸಕ್ಕರೆ ಕಾರ್ಖಾನೆಗೆ ಸಾಲ ಕೊಡುವ ಮೂಲಕ ಸಹಕಾರಿ ವಲಯದಲ್ಲಿಯೇ ಉಳಿಸಿಕೊಳ್ಳಲಾಗಿದೆ. ಸರಕಾರದ ಒಡೆತನದಲ್ಲಿರುವ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ರಾಜ್ಯ ಸರಕಾರವೇ 50 ಕೋಟಿ ರೂ. ನೆರವು ನೀಡಿದೆ ಎಂದು ಅವರು ವಿವರಿಸಿದರು.

ಕಬ್ಬಿನ ಉತ್ಪನ್ನಗಳನ್ನು ಕೇಂದ್ರ ಸರಕಾರ ನಿಯಂತ್ರಣ ಮಾಡಲಿದ್ದು, ಕಳೆದ ಬಾರಿ ಸಕ್ಕರೆ ರಫ್ತು ಮಾಡಲು ಕೇಂದ್ರ ಅನುಮತಿ ನೀಡದ ಕಾರಣ ಕಬ್ಬಿಗೆ ಹೆಚ್ಚುವರಿ ಬೆಲೆ ಕೊಡಲು ಸಾಧ್ಯವಾಗಲಿಲ್ಲ. ರೈತರೂ ಕೂಡ 9 ತಿಂಗಳಿಗೆ ಕಬ್ಬು ಕಟಾವು ಮಾಡುವ ಬದಲಿಗೆ ಕನಿಷ್ಟ 12 ತಿಂಗಳ ನಂತರ ಕಟಾವು ಮಾಡಬೇಕು. ಆಗ ಸಕ್ಕರೆ ಇಳುವರಿ ಹೆಚ್ಚಿನ ಪ್ರಮಾಣದಲ್ಲಿ ಬರಲಿದೆ. ಮಹಾರಾಷ್ಟ್ರ ಮತ್ತು ಉತ್ತರಪ್ರದೇಶದಲ್ಲಿ 12ರಿಂದ 13 ತಿಂಗಳ ನಂತರ ಕಟಾವು ಮಾಡುತ್ತಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಸಕ್ಕರೆ ಕಾರ್ಖಾನೆಗಳ ಮೇಲೆ ನಿಯಂತ್ರಣ ಸಾಧಿಸಿದ ನಂತರ ಇಳುವರಿ ಪ್ರಮಾಣ ಹೆಚ್ಚಾಗಿದೆ. ಕಬ್ಬು ನುರಿಸುವುದುನ್ನು ಆರಂಭಿಸುವ ಪೂರ್ವದಲ್ಲಿ ಸಕ್ಕರೆ ಕಾರ್ಖಾನೆಗಳು ರೈತರೊಂದಿಗ ಸಂವಾದ ಏರ್ಪಡಿಸಬೇಕಿದೆ ಎಂದು ಶಿವಾನಂದ ಪಾಟೀಲ್ ಸಲಹೆ ನೀಡಿದರು.

ಎಪಿಎಂಸಿ ಕಾಯ್ದೆ ಮರುಸ್ಥಾಪನೆ: ರಾಜ್ಯ ಸರಕಾರ ಎಪಿಎಂಸಿ ಕಾಯ್ದೆಯನ್ನು ಮರುಸ್ಥಾಪನೆ ಮಾಡಿದ್ದು, ಈ ಕ್ರಮದಿಂದ ಈ ಹಿಂದೆ 180 ಕೋಟಿ ರೂ.ಗಳಷ್ಟಿದ್ದ ಆದಾಯ ಈಗ 300 ಕೋಟಿ ರೂ. ದಾಟಿದೆ. ಈ ಹಣವನ್ನು ರೈತರ ಹಿತಕ್ಕಾಗಿಯೇ ವಿನಿಯೋಗ ಮಾಡಲಾಗುವುದು. ರಾಜ್ಯದಲ್ಲಿ ಮೂರು ಖಾಸಗಿ ಎಪಿಎಂಸಿಗಳಿದ್ದು, ಅವುಗಳನ್ನು ಬಂದ್ ಮಾಡಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಗೃಹ ಇಲಾಖೆಗಳಿಗೆ ಸಂಬಂಧಿಸಿದ ಬೇಡಿಕೆಗಳನ್ನು ಸಂಬಂಧಪಟ್ಟ ಸಚಿವರ ಗಮನಕ್ಕೆ ತರಲಾಗುವುದು. ಈ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು ಎಂದು ಶಿವಾನಂದ ಪಾಟೀಲ್ ಆಶ್ವಾಸನೆ ನೀಡಿದರು.

ಶಾಸಕರಾದ ಎನ್.ಎಚ್.ಕೋನರೆಡ್ಡಿ, ದರ್ಶನ್ ಪುಟ್ಟಣ್ಣಯ್ಯ, ರೈತ ಮುಖಂಡರಾದ ಚೂನಪ್ಪ ಉದ್ದಪ್ಪ ಪೂಜೇರಿ, ಪಚ್ಚೆ ನಂಜುಂಡಸ್ವಾಮಿ, ಶಶಿಕಾಂತ ನಾಯಕ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X